News
ಬೆಂಗಳೂರು ಲಾಕ್ಡೌನ್ಗೆ ಸಲಹೆ
ಬೆಂಗಳೂರು,ಏ.11-ರಾಜ್ಯದಲ್ಲಿ ಎರಡನೇ ಅಲೆಯ ಕೊರೊನಾ ಸ್ಫೋಟಗೊಂಡಿದ್ದು, ಭಾನುವಾರ ಒಂದೇ ದಿನ 10,250 ಪ್ರಕರಣ ದಾಖಲಾಗಿ, 40 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಯಲ್ಲಿ ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ ಅವರು ವಿಧಾನ ಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಒಂದೇ ದಿನ 7584 ಮಂದಿಗೆ ಸೋಂಕು ದೃಢ ಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ. ತಾಂತ್ರಿಕ ಸಲಹಾ ಸಮಿತಿಯು ಬೆಂಗಳೂರಿನಲ್ಲಿ 10 ದಿನಗಳ ಕಾಲ ಲಾಕ್ಡೌನ್ ಜಾರಿಗೊಳಿಸುವಂತೆ ಸಲಹೆ ನೀಡಿದೆ ಎನ್ನಲಾಗಿದೆ. ಅಲ್ಲದೇ ಮೇ ಮೊದಲ...