ಅಮಾವಾಸ್ಯೆ ಪೂಜೆ ಸಲ್ಲಿಸಿದ ಎಚ್‍ಡಿಕೆ ದಂಪತಿ
ಮಂಡ್ಯ

ಅಮಾವಾಸ್ಯೆ ಪೂಜೆ ಸಲ್ಲಿಸಿದ ಎಚ್‍ಡಿಕೆ ದಂಪತಿ

June 14, 2018

ಆದಿಚುಂಚನಗಿರಿ ಶ್ರೀಕ್ಷೇತ್ರ(ನಾಗ ಮಂಗಲ): ಮುಖ್ಯಮಂತ್ರಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಬುಧವಾರ ಆದಿಚುಂಚನಗಿರಿ ಕ್ಷೇತ್ರಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿ ಯೊಂದಿಗೆ ಭೇಟಿ ನೀಡಿ ಕಾಲಭೈರವೇಶ್ವರ ಸ್ವಾಮಿಗೆ ಅಮಾವಾಸ್ಯೆ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ, ನಾಗಲಿಂಗೇಶ್ವರಸ್ವಾಮಿ ಸನ್ನಿಧಿ ಯಲ್ಲಿ ಆಯೋಜಿಸಲಾಗಿದ್ದ ಮೃತ್ಯುಂ ಜಯ ಹೋಮದ ಪೂರ್ಣಾಹುತಿ ಕೈಂಕರ್ಯದಲ್ಲಿ ಪಾಲ್ಗೊಂಡರು. ಶ್ರೀ ಕಾಲಭೈರವೇಶ್ವರ ಸ್ವಾಮಿಯ ಗರ್ಭ ಗುಡಿಯ ಮುಂಭಾಗದಲ್ಲಿ ಹೆಚ್.ಡಿ. ಕುಮಾರಸ್ವಾಮಿ ದಂಪತಿ ಸಮ್ಮುಖದಲ್ಲಿ ನಡೆದ ವಿಶೇಷ ಪೂಜೆಯನ್ನು ಮಠದ ಪೀಠಾಧ್ಯಕ್ಷರಾದ ನಿರ್ಮಲಾ ನಂದನಾಥ ಸ್ವಾಮೀಜಿ ನೆರವೇರಿಸಿದರು.

ವಿಧಾಸಭಾ ಚುನಾವಣೆಗೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡರು, ಹೆಚ್.ಡಿ.ರೇವಣ್ಣ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಕುಟುಂಬ ಸಮೇತ ತಲಾ ಮೂರು ತಿಂಗಳಂತೆ 9 ಅಮಾವಾಸ್ಯೆ ಪೂಜೆ ಸಲ್ಲಿಸಿದ್ದರು. ಕಳೆದ ಮೇ 15ರಂದು ಮತ ಎಣ ಕೆಯ ದಿನವಾದರೂ, ಹೆಚ್.ಡಿ.ಕುಮಾರಸ್ವಾಮಿ ದಂಪತಿ ಸಮೇತ ಆಗಮಿಸಿ ಅಮಾವಾಸ್ಯೆ ಪೂಜೆ ಸಲ್ಲಿಸಿದ್ದರು.

ಈ ವೇಳೆ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ಸುರೇಶ್‍ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾಧಿಕಾರಿ ಮಂಜುಶ್ರೀ, ಜಿ.ಪಂ.ಸದಸ್ಯರಾದ ಸುನಂದ ದೊರೆಸ್ವಾಮಿ, ಶಿವಪ್ರಕಾಶ್, ಮುತ್ತಣ್ಣ ಹಾಜರಿದ್ದರು.

ಮುಖ್ಯ ಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಅವರ ನೇತೃತ್ವದಲ್ಲಿ ಚುಂಚನಗಿರಿ ಕ್ಷೇತ್ರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಹಾಗೂ ಭದ್ರತೆಯ ಒದಗಿಸಲಾಗಿತ್ತು.

Translate »