ಕಲ್ಲು ಕ್ವಾರೆಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ
ಕೊಡಗು

ಕಲ್ಲು ಕ್ವಾರೆಗೆ ಹಾರಿ ತಾಯಿ-ಮಗಳು ಆತ್ಮಹತ್ಯೆ

December 5, 2018

ಕುಶಾಲನಗರ: ನೀರು ತುಂಬಿದ ಕಲ್ಲುಕ್ವಾರೆಗೆ ಹಾರಿ ತಾಯಿ-ಮಗಳು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಗೊಂದಿಬಸವನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಂದಿಬಸವನಹಳ್ಳಿ ಗ್ರಾಮದ ನಿವಾಸಿ ಸ್ವಾಮಿನಾಯಕ್ ಎಂಬು ವರ ಪತ್ನಿ ತಾಯಮ್ಮ(40 ವರ್ಷ) ಹಾಗೂ ಮಗಳು ದಿವ್ಯಶ್ರೀ ಅಲಿಯಾಸ್ ಗಾನವಿ (11 ವರ್ಷ) ಮೃತಪಟ್ಟಿರುವ ತಾಯಿ-ಮಗಳು.
ಮಗಳು ದಿವ್ಯಶ್ರೀ ಗೊಂದಿ ಬಸವನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 5 ತರಗತಿ ವ್ಯಾಸಂಗ ಮಾಡುತ್ತಿ ದ್ದಳು.

ತಾಯಮ್ಮನ ಪತಿ ಸ್ವಾಮಿ ನಾಯಕ ಕೂಡ್ಲೂರು ಕೈಗಾರಿಕಾ ಬಡಾವಣೆಯ ಕಾಫಿ ವಕ್ರ್ಸ್‍ನಲ್ಲಿ ಕೆಲಸ ಮಾಡುತ್ತಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಈ ಕುಟುಂಬ ಈಚೆಗೆ ಹೊಸ ಮನೆಯನ್ನು ಕಟ್ಟಿಕೊಂಡಿದ್ದರು. ತಾಯಮ್ಮ ಅವರು ಸಾಲಬಾಧೆಯಿಂದ ಮೃತಪಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ತಾಯಮ್ಮ ಸ್ವಸಹಾಯ ಸಂಘ ಹಾಗೂ ಕೈಸಾಲ ಮಾಡಿಕೊಂಡಿದ್ದು, ಮನೆಯಲ್ಲಿ ಪತಿಯೊಂದಿಗೆ ಸಾಲದ ವಿಚಾರವಾಗಿ ಕಲಹ ಕೂಡ ನಡೆಯುತ್ತಿತ್ತು. ಸಾಲಗಾರರ ಕಿರುಕುಳದಿಂದ ಬೇಸತ್ತು ತಾಯಮ್ಮ ಈ ನಿರ್ಧಾರ ಕೈಗೊಂಡಿರಬಹುದು ಎಂದು ಸಂಶಯ ವ್ಯಕ್ತವಾಗಿದೆ. ಕ್ವಾರೆ ಕೆರೆಯಿಂದ ಅಗ್ನಿಶಾಮಕ ಸಿಬ್ಬಂದಿಗಳು ಇಬ್ಬರ ಶವಗಳನ್ನು ಹೊರತೆಗೆದರು. ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನವೀನ್ ಗೌಡ ನೇತೃತ್ವದಲ್ಲಿ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಸ್ತಾಂತರಿಸಿದರು.

 

Translate »