ಕುಡಿಯುವ ನೀರಿಗೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ
ಹಾಸನ

ಕುಡಿಯುವ ನೀರಿಗೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ

April 19, 2018

ಹಾಸನ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತ ಡಿ.ವಿ ಪ್ರಸಾದ್ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಪೂರೈಕೆ ಕುರಿತ ಸಭೆಯಲ್ಲಿ ಅಧಿಕಾರಿಗಳಿಂದ ಜಿಲ್ಲೆಯ ಮಳೆ, ಬೆಳೆ, ಕುಡಿಯುವ ನೀರಿನ ಸ್ಥಿತಿಗತಿ ಹಾಗೂ ದನಕರುಗಳಿಗೆ ಮೇವಿನ ಲಭ್ಯತೆ ಬಗ್ಗೆ ಮಾಹಿತಿ ಪಡೆದ ಅವರು, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ ಎಂದರು.

ಜಿಲ್ಲಾ ಪಂಚಾಯತ್ ಗ್ರಾಮಿಣ ಕುಡಿ ಯುವ ನೀರು ಸರಬರಾಜು ಇಲಾಖೆ ಇಂಜಿನಿಯರ್ಗಳಿಂದ ಪ್ರಸಕ್ತ ವರ್ಷ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಬವಣೆ ಬಗ್ಗೆ ವಿವರ ಪಡೆದ ಡಿ.ವಿ.ಪ್ರಸಾದ್ ಕುಡಿಯುವ ನೀರು ಪೂರೈಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ಚುನಾವಣಾ ನೀತಿ ಸಂಹಿತೆಗೆ ಅಡ್ಡಿಯಾ ಗದು. ಅಧಿಕಾರಿಗಳು ಜನಪರ ಕಾಳಜಿ ವಹಿಸಿ ಕೆಲಸ ಮಾಡಿ ಎಂದರು.

ಗ್ರಾಮೀಣ ಕುಡಿಯುವ ನೀರಿನ ಪೂರೈಕೆ ಇಲಾಖೆ ಕಾರ್ಯ ಪಾಲಕ ಅಭಿಯಂತರರು ಮಾಹಿತಿ ನೀಡಿ, ಅರಸೀ ಕೆರೆ ತಾಲೂಕಿನ 32 ಗ್ರಾಮಗಳಿಗೆ ಟ್ಯಾಂಕರ್ ಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 215 ಟ್ಯಾಂಕರಗಳÀ ಮೂಲಕ ನೀರು ಒದಗಿಸಲಾಗುತ್ತಿತ್ತು. ಕುಡಿಯುವ ನೀರು ಪೂರೈಕೆಗೆ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸಂದರ್ಭದಲ್ಲಿ ಕಂದಾಯ ಇಲಾಖೆ ಅಭಿವೃದ್ಧಿ ಆಯುಕ್ತರು, ಕೃಷಿಕರಿಗೆ ಅಗತ್ಯವಿರುವ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರಗಳ ಪೂರೈಕೆಗೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ ವರ್ಷ ಇಲ್ಲಿಯವರೆಗೆ ಮುಂಗಾರು ಉತ್ತಮವಾಗಿದೆ. ಬಿತ್ತನೆ ಬೀಜ ರಸ ಗೊಬ್ಬರ ಪೂರೈಕೆಗೆ ಯಾವುದೇ ತೊಂದರೆ ಇಲ್ಲ ಎಂದರು.

ತೋಟಗಾರಿಕೆ ಇಲಾಖೆ ದೃಢೀಕೃತ ಆಲೂಗೆಡ್ಡೆ ಬಿತ್ತನೆ ಬೀಜ ಹೆಚ್ಚಿನ ಪ್ರಮಾಣ ದಲ್ಲಿ ಪೂರೈಸಲು ಈಗಲೇ ಸೂಕ್ತ ಕ್ರಮ ವಹಿಸಬೇಕು. ಜಿಲ್ಲೆಯ ಪಾಲಿಗೆ ಅದು ಸೂಕ್ಷ್ಮ ವಿಚಾರ ಹಾಗೂ ಪ್ರಮುಖ ಬೆಳೆ. ಕೃಷಿಕರಿಗೆ ಅನುಕೂಲವಾಗುವ ಕ್ರಮಗಳನ್ನು ಈಗಲೇ ಯೋಜಿಸಿ ಎಂದು ಡಿ.ವಿ.ಪ್ರಸಾದ್ ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಪಶುಪಾಲನೆ ಇಲಾಖೆ ಕೂಡ ದನಕರು ಗಳ ಮೇವಿಗೆ ಕೊರತೆಯಾಗದಂತೆ ಎಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದ ಅವರು, ಅಗತ್ಯವಿರುವ ಕಡೆಗಳಲ್ಲಿ ಕೊಳವೆ ಬಾವಿಗಳನ್ನು ಕೊರೆಸಿ ಅಥವಾ ಇರುವ ಕೊಳವೆ ಬಾವಿಗಳನ್ನು ಇನ್ನಷ್ಟು ಆಳ ಮಾಡಲು ಕ್ರಮ ವಹಿಸಿ ಎಂದರು. ಚುನಾವಣೆ ಕಾರ್ಯದ ನಡುವೆ ಜನರಿಗೆ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಿ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಿ.ರಂದೀಪ್ ಅವರು, ಜಿಲ್ಲೆಯಲ್ಲಿನ ಕೃಷಿ ವ್ಯವಸ್ಥೆ, ಮಳೆ, ಕುಡಿಯುವ ನೀರಿನ ಮೂಲಗಳ ಬಗ್ಗೆ ಮಾಹಿತಿ ಪಡೆದು ಆಯಾಯ ಇಲಾಖೆ ಅಧಿಕಾರಿಗಳು ಅಗತ್ಯ ಮುಂಜಾಗ್ರತೆ ವಹಿಸಿ ಎಂದರು.

ಜಿಪಂ ಮುಖ್ಯ ಕಾರ್ಯ ನಿರ್ವಹಕ ಅಧಿಕಾರಿ ಕೆ.ಎಂ.ಜಾನಕಿ ಅವರು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಪರಿಸ್ಥಿತಿಗಳ ಬಗ್ಗೆ ಮನವರಿಕೆ ಮಾಡಿ ಕೊಟ್ಟರು. ಸಭೆಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Translate »