ಗುಂಡ್ಲುಪೇಟೆ ಜೆಎಸ್‍ಎಸ್ ಕಾಲೇಜಿನಲ್ಲಿ ಕ್ರೀಡಾ ವೇದಿಕೆ ಉದ್ಘಾಟನೆ
ಚಾಮರಾಜನಗರ

ಗುಂಡ್ಲುಪೇಟೆ ಜೆಎಸ್‍ಎಸ್ ಕಾಲೇಜಿನಲ್ಲಿ ಕ್ರೀಡಾ ವೇದಿಕೆ ಉದ್ಘಾಟನೆ

September 26, 2018

ಗುಂಡ್ಲುಪೇಟೆ: ವಿದ್ಯಾರ್ಥಿನಿಯರು ಪಠ್ಯದೊಂದಿಗೆ ಸಾಂಸ್ಕೃ ತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಲ್ಲಿಯೂ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು.

ಪಟ್ಟಣದ ಜೆಎಸ್‍ಎಸ್ ಪದವಿ ಕಾಲೇ ಜಿನಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ವೇದಿಕೆ ಯನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ಹೆಣ್ಣುಮಕ್ಕಳ ಅನುಕೂಲಕ್ಕೆ ಜೆಎಸ್‍ಎಸ್ ಸಂಸ್ಥೆಯು ಮಹಿಳಾ ಕಾಲೇಜು ತೆರೆದು ಉತ್ತಮ ಶಿಕ್ಷಣ ಹಾಗೂ ಸಂಸ್ಕೃತಿಯನ್ನು ನೀಡು ತ್ತಿದೆ. ಇದರಿಂದ ಸಾವಿರಾರು ವಿದ್ಯಾರ್ಥಿ ನಿಯರು ಉತ್ತಮ ಶಿಕ್ಷಣ ಪಡೆದು ಸ್ವಾವ ಲಂಭಿಗಳಾಗಿದ್ದಾರೆ. ವಿದ್ಯಾರ್ಥಿಗಳು ಕಲೆ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಗಳಲ್ಲಿ ಭಾಗವಹಿಸಿ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿ ದರು. ಈ ಸಂದರ್ಭದಲ್ಲಿ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಹೊರೆಯಾಲ ಮಹೇಶ್, ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಎನ್. ಮಹ ದೇವಸ್ವಾಮಿ, ಪದವಿಪೂರ್ವ ಕಾಲೇ ಜಿನ ಪ್ರಾಂಶುಪಾಲ ಎಚ್.ಪಿ.ಬಸವರಾ ಜಪ್ಪ, ಡಯಟ್‍ನ ಹಿರಿಯ ಉಪನ್ಯಾಸಕ ಬಿ.ಎಸ್. ಕೆಂಪಲಿಂಗಪ್ಪ, ಮಂಡ್ಯದ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ಕುಮಾರ್ ಸೇರಿದಂತೆ ಉಪ ನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು.

Translate »