ಜಂಬೂಸವಾರಿಯಲ್ಲಿ ಮಾರನಾಯಕರ ಕುರಿತ ಸ್ತಬ್ಧ ಚಿತ್ರಕ್ಕೆ ಆಗ್ರಹಿಸಿ ಧರಣಿ
ಮೈಸೂರು

ಜಂಬೂಸವಾರಿಯಲ್ಲಿ ಮಾರನಾಯಕರ ಕುರಿತ ಸ್ತಬ್ಧ ಚಿತ್ರಕ್ಕೆ ಆಗ್ರಹಿಸಿ ಧರಣಿ

September 25, 2018

ಮೈಸೂರು:  ಈ ಬಾರಿಯ ಜಂಬೂ ಸವಾರಿ ಮೆರವಣಿಗೆಯಲ್ಲಿ ಮೈಸೂರಿನ ಪಾಳೇಗಾರರಾಗಿ ಆಳ್ವಿಕೆ ನಡೆಸಿದ ಮಾರನಾಯಕರ ಕುರಿತಂತೆ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಕ್ರಮ ವಹಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೈಸೂರು ಜಿಲ್ಲಾ ನಾಯಕ ಯುವಕರ ಸಂಘದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಮೈಸೂರು ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಜಂಬೂ ಸವಾರಿ ಮೆರವಣಿಗೆಯಲ್ಲಿ ಮಾರನಾಯಕರ ಸ್ತಬ್ಧಚಿತ್ರಕ್ಕೆ ಕ್ರಮ ವಹಿಸಬೇಕು. ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿ ಹೈದರ್ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿಯವರ ಪ್ರತಿಮೆಗೆ ಅಪಮಾನ ಎಸಗಿರುವ ದುಷ್ಕರ್ಮಿ ಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸ ಲಾತಿ ನೀಡಬೇಕು. ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಂಘದ ಅಧ್ಯಕ್ಷ ಹಾಗೂ ವಕೀಲ ಪಡುವಾರಹಳ್ಳಿ ಎಂ.ರಾಮಕೃಷ್ಣ, ಕಾರ್ಯಾಧ್ಯಕ್ಷ ಶ್ರೀಧರ್ ಚಾಮುಂಡಿಬೆಟ್ಟ, ನಗರಾಧ್ಯಕ್ಷ ರಾಜು, ತಾಲೂಕು ಅಧ್ಯಕ್ಷ ವಿನೋದ್ ನಾಗವಾಲ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

Translate »