ಮೈಸೂರು: ಮೈಸೂರು ತಾಲೂಕಿನ ಜಯಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 63ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರಿನ ಬೆಳಕು ಸೇವಾ ಸಂಸ್ಥೆ ಚಾರಿಟಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ಕೆ.ಆರ್. ಆಸ್ಪತ್ರೆ ವತಿಯಿಂದ ಉಚಿತ ನೇತ್ರ ಮತ್ತು ಸಾಮಾನ್ಯ ತಪಾಸಣಾ ಶಿಬಿರ ಕಾರ್ಯ ಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಆಸ್ಪತ್ರೆ ವೈದ್ಯಾಧಿಕಾರಿಗಳಾದ ಡಾ.ಅಮೃತ, ಡಾ. ಪ್ರಮೋದ್ ಗೌಡ, ಡಾ.ಬಸವರಾಜು ಮತ್ತು ಬೆಳಕು ಸೇವಾ ಸಂಸ್ಥೆಯ ಪದಾಧಿಕಾರಿಗಳಾದ ಅಂಜಲಿ, ಮಂಜುನಾಥ್ ಉದ್ಘಾಟಿಸಿದರು.
ಜಯಪುರ ಸುತ್ತಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಉಚಿತ ನೇತ್ರ ತಪಾಸಣಾ ಶಿಬಿರವನ್ನು ಸದುಪಯೋಗಪಡಿಸಿಕೊಂಡರು. ಬೆಳಕು ಸೇವಾ ಸಂಸ್ಥೆ ವತಿಯಿಂದ ಉಚಿತ ಔಷಧಿ ಮತ್ತು ಕನ್ನಡಕಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜಯಪುರ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.