ಮೈಸೂರು,ನ.7(ಪಿಎಂ)- ಮೈಸೂರಿನ ಡಾ.ಬಿ.ಆರ್.ಅಂಬೇ ಡ್ಕರ್ ಭವನ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಹಿಂದಿನ ಪ್ರಸ್ತಾವನೆಗಳು ಸೇರಿದಂತೆ ಈಗಿರುವ ನ್ಯೂನತೆ ಗಳನ್ನು ಸರಿಪಡಿಸಿ ಸಂಪುಟ ಸಭೆಗೆ ಅನುಮೋದನೆಗೆ ಕ್ರಿಯಾ ಯೋಜನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಬೆಂಗಳೂರಿನ ವಿಕಾಸಸೌಧದಲ್ಲಿ ಶನಿವಾರ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಶನಿವಾರ ನಡೆದ ಸಭೆ ಯಲ್ಲಿ ಉಭಯ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ನಿಮಾರ್ಣಗೊಳ್ಳುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಾಮ ಗಾರಿ ಶೀಘ್ರವೇ ಪೂರ್ಣಗೊಳಿಸಲು ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಸೂಚಿಸಲಾಯಿತು. ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಬೇಕು ಎಂಬುದು
ಸಾರ್ವಜನಿಕ ವಲಯದ ಬಹಳ ವರ್ಷಗಳ ಬೇಡಿಕೆ. ಹೀಗಾಗಿ ಸಾರ್ವಜನಿಕ ಬಳಕೆಗೆ ಭವನ ಮುಕ್ತಗೊಳಿಸಲು ಕಾಮಗಾರಿ ತ್ವರಿತಗತಿಯಲ್ಲಿ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಅಧಿಕಾರಿ ವರ್ಗ ಸೂಕ್ತ ಕ್ರಮ ವಹಿಸಬೇಕು ಎಂದು ಉಭಯ ಸಚಿವರು ಸೂಚಿಸಿದರು. ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಲ್. ನಾಗೇಂದ್ರ, ಹರ್ಷವರ್ಧನ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಆಯುಕ್ತ ನಟೇಶ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.