ದಂತ ವೈದ್ಯಕೀಯ ಕಾಲೇಜು ವತಿಯಿಂದ ಜಾಗೃತಿ ಜಾಥಾ
ಹಾಸನ

ದಂತ ವೈದ್ಯಕೀಯ ಕಾಲೇಜು ವತಿಯಿಂದ ಜಾಗೃತಿ ಜಾಥಾ

June 1, 2018

ಹಾಸನ: ನಗರದಲ್ಲಿ ಗುರುವಾರ ಜಿಲ್ಲಾ ಪಂಚಾ ಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಗಳ ಕಚೇರಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಒರಲ್ ಹೆಲ್ತ್ ಪ್ರೋಗ್ರಾಮ್ ಹಾಗೂ ಹಾಸನಾಂಬ ದಂತ ವೈದ್ಯಕೀಯ ಕಾಲೇಜು ವತಿಯಿಂದ ಜಿಲ್ಲಾ ಮಟ್ಟದ ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಗೃತಿ ಜಾಥಾ ನಡೆಯಿತು.

ಜಾಥಾಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಜಗದೀಶ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ನಗರದ ಹಾಸನಾಂಬ ದಂತ ವೈದ್ಯಕೀಯ ಕಾಲೇಜು ಆವರಣದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಜಾಥಾ ಸಂಚರಿಸಿ ಘೋಷಣೆ ಕೂಗುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಹಯೋಗ ದೊಂದಿಗೆ ನಗರದ ಹೊಸ ಬಸ್ ನಿಲ್ದಾಣದಲ್ಲಿ ಉಚಿತ ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಂಕರ್, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಹಿರಣ್ಣಯ್ಯ, ಹಾಸನಾಂಬ ದಂತ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಸಹದೇವ್ ಹಾಜರಿದ್ದರು.

Translate »