ಪ್ರತಿಭಾ ಪುರಸ್ಕಾರ
ಮೈಸೂರು

ಪ್ರತಿಭಾ ಪುರಸ್ಕಾರ

June 1, 2018

ಮೈಸೂರು: ಪ್ರಗತಿ ಸೇವಾ ಟ್ರಸ್ಟ್‍ನ 14ನೇ ವಾರ್ಷಿಕೋತ್ಸವದ ಪ್ರಯುಕ್ತ ಕಳೆದ ಸಾಲಿನ ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಐಟಿಐ ಮತ್ತು ಡಿಪ್ಲೋಮಾ ತಾಂತ್ರಿಕ ಕೋರ್ಸ್‍ಗಳನ್ನು ಪೂರ್ಣಗೊಳಿಸಿ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿನ ಪೌರಕಾರ್ಮಿಕ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಭರ್ತಿ ಪಡೆದು, ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್‍ನ ಜೆರಾಕ್ಸ್ ಪ್ರತಿಗಳನ್ನು ತಲುಪಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ. 8618630629, 9243506024 ಅನ್ನು ಸಂಪರ್ಕಿಸಬಹುದು.

Translate »