ಬಸ್‍ಪಾಸ್: ರಾಜ್ಯ ಸರ್ಕಾರದ ವಿರುದ್ಧ ಪ್ರತ್ಯೇಕ ಪ್ರತಿಭಟನೆ
ಹಾಸನ

ಬಸ್‍ಪಾಸ್: ರಾಜ್ಯ ಸರ್ಕಾರದ ವಿರುದ್ಧ ಪ್ರತ್ಯೇಕ ಪ್ರತಿಭಟನೆ

July 20, 2018

ಹಾಸನ: ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಗುರುವಾರ ಎಬಿವಿಪಿ ಹಾಗೂ ಎನ್‍ಎಸ್‍ಯುಐ ಸಂಘಟನೆಗಳು ಪ್ರತ್ಯೇಕ ಪ್ರತಿಭಟನೆ ನಡೆಸಿದವು.

ಎಬಿವಿಪಿ: ನಗರದ ಹೇಮಾವತಿ ಪ್ರತಿಮೆಯ ಮುಂಭಾಗ ಸಮಾವೇಶಗೊಂಡ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಯವರೆಗೆ ಮೆರವಣಿಗೆ ನಡೆಸಿ ಉಚಿತ ಬಸ್ ಪಾಸ್ ವಿತರಿಸುವಂತೆ ಘೋಷಣೆ ಕೂಗಿದರು.

ಪ್ರಸಕ್ತ ಸಾಲಿನಿಂದ ಎಸ್‍ಸಿ, ಎಸ್‍ಟಿ ಸೇರಿದಂತೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವಿತರಿಸುವುದಾಗಿ ಕÀಳೆದ ಸಾಲಿನ ಬಜೆಟ್‍ನಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿತ್ತು. ಆದರೆ, ಇಂದಿನ ರಾಜ್ಯ ಸರ್ಕಾರ ಆ ಯೋಜನೆಯನ್ನು ಜಾರಿಗೊಳಿಸದೇ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.

ಗ್ರಾಮೀಣ ಭಾಗದ ಬಡ ವಿದ್ಯಾರ್ಥಿ ಗಳಿಗೆ ಉಚಿತ ಬಸ್‍ಪಾಸ್ ನೀಡುವುದು ವಿದಾರ್ಥಿಗಳಿಗೆ ಪ್ರೋತ್ಸಾಹ ನೀಡಿದಂತಾ ಗುತ್ತದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಯಾವುದೇ ರೀತಿಯ ಹೊರೆಯಾಗು ವುದಿಲ್ಲ. ಬದಲಿಗೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ-ಕಾಲೇಜುಗಳಿಗೆ ಹೋಗಲು ಅವಕಾಶ ಕಲ್ಪಿಸಿದಂತಾಗುತ್ತದೆ. ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದರೂ ಇದುವರೆಗೂ ರಾಜ್ಯ ಸರ್ಕಾರ ಉಚಿತ ಬಸ್‍ಪಾಸ್ ನೀಡಲು ವಿಫಲವಾಗಿರುವ ಸರ್ಕಾರದ ಧೋರಣೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರ್ಕಾರದ ಬಜೆಟ್ ನಲ್ಲಿ ಘೋಷಿಸಿದಂತೆ ಎಲ್ಲಾ ವಿದ್ಯಾರ್ಥಿ ಗಳಿಗೂ ಉಚಿತ ಬಸ್ ಪಾಸ್ ಅನ್ನು ರಾಜ್ಯ ಸರ್ಕಾರ ನೀಡಬೇಕು ಎಂದು ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಪೂರ್ಣಿಮಾ ಅವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಎಬಿವಿಪಿಯ ಜಿಲ್ಲಾ ಸಂಚಾಲಕ ಶ್ರೀಕಾಂತ್ ಸೇರಿದಂತೆ ಸಂಘಟನೆಯ ಕಾರ್ಯಕರ್ತರು, ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಎನ್‍ಎಸ್‍ಯುಐ: ನಗರದ ಹೇಮಾ ವತಿ ಪ್ರತಿಮೆ ಬಳಿಯಿಂದ ಹೊರಟ ಸಂಘಟನೆಯ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಬೃಹತ್ ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಉಚಿತ ಬಸ್‍ಪಾಸ್ ನೀಡಬೇಕು ಎಂದು ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಮಾಡುವ ಕಾರಣಕ್ಕಾಗಿ ಉಚಿತ ಬಸ್‍ಪಾಸ್ ವಿತರಣೆ ಯನ್ನು ಕೈಬಿಟ್ಟಿರುವುದು ಸರಿಯಾದ ಕ್ರಮವಲ್ಲ. ಉಚಿತ ಬಸ್‍ಪಾಸ್ ಪಡೆಯುವ ಬಹುತೇಕ ವಿದ್ಯಾರ್ಥಿಗಳು ರೈತರ ಮಕ್ಕಳೇ ಆಗಿದ್ದಾರೆ. ಬೇರೆ, ಬೇರೆ ಕ್ಷೇತ್ರದ ಅನುದಾನವನ್ನು ಕೃಷಿ ಕ್ಷೇತ್ರಕ್ಕೆ ಬಳಸಿಕೊಂಡು ಉಚಿತ ಬಸ್‍ಪಾಸ್ ಯೋಜನೆಯನ್ನು ಮುಂದುವರೆಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾದ ರಾಜ್ಯ ಉಪಾಧ್ಯಕ್ಷ ಚೇತನ್, ಜಿಲ್ಲಾಧ್ಯಕ್ಷ ಜಿ.ಆರ್.ರಂಜಿತ್, ಜಿಲ್ಲಾ ಉಪಾಧ್ಯಕ್ಷ ರಾದ ಉಜ್ವಲ್, ಅವಿನಾಶ್, ಕಾರ್ಯ ಕರ್ತರಾದ ಸಾಗರ್, ಎಲ್.ಡಿ.ಸುದೀಪ್, ಹೇಮಂತ್ ಇತರರು ಇದ್ದರು.

Translate »