ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಪಳೆಯಂಡ ರಾಬಿನ್ ದೇವಯ್ಯ ಆಯ್ಕೆ
ಕೊಡಗು

ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಪಳೆಯಂಡ ರಾಬಿನ್ ದೇವಯ್ಯ ಆಯ್ಕೆ

January 13, 2020

ಮಡಿಕೇರಿ, ಜ.12- ಕೊಡಗು ಜಿಲ್ಲಾ ಬಿಜೆಪಿ ಪಕ್ಷದ ನೂತನ ಅಧ್ಯಕ್ಷರಾಗಿ ಪಳೆಯಂಡ ರಾಬಿನ್ ದೇವಯ್ಯ ಆಯ್ಕೆಯಾಗಿ ದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಬಿನ್ ದೇವಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಉಸ್ತುವಾರಿ ಉದಯ್ ಕುಮಾರ್ ಶೆಟ್ಟಿ ರಾಬಿನ್ ದೇವಯ್ಯ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಶಾಲಾ ಕಾಲೇಜು ದಿನಗಳಲ್ಲೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಗುರುತಿಸಿಕೊಂಡಿದ್ದ ರಾಬಿನ್ ದೇವಯ್ಯ, ಬಳಿಕ ಬಿಜೆಪಿ ಪಕ್ಷದಲ್ಲೂ ಸಕ್ರೀಯರಾಗಿ ತೊಡಗಿಸಿಕೊಂಡಿದ್ದರು. ಸಂಘ ಪರಿವಾರದ ಮುಖಂಡರೊಂದಿಗೆ ಆತ್ಮೀಯರಾಗಿದ್ದ, ಪಕ್ಷ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಹಿನೆÀ್ನಲೆಯಲ್ಲಿ ರಾಬಿನ್ ದೇವಯ್ಯ ಅವರನ್ನು ಈ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂಬ ಮಾತುಗಳು ಕೂಡ ಕೇಳಿ ಬಂದಿವೆ.

ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ರಾಬಿನ್ ದೇವಯ್ಯ ಅವರನ್ನು ಮಂಗಳೂರಿನ ಪಕ್ಷದ ಕಚೇರಿಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಶಾಸಕರಾದ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ, ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ನಾಪಂಡ ಕಾಳಪ್ಪ, ಎಸ್.ಜಿ. ಮೇದಪ್ಪ, ಎಂ.ಬಿ. ದೇವಯ್ಯ, ಕಾಂಗೀರ ಸತೀಶ್, ಮನು ಮಂಜುನಾಥ್ ಮತ್ತಿತ್ತರರು ಹಾಜರಿದ್ದರು.

Translate »