ಮುಖ್ಯಮಂತ್ರಿಯಿಂದ ರೈತ ಸಮುದಾಯಕ್ಕೆ ಅನ್ಯಾಯ
ಮೈಸೂರು

ಮುಖ್ಯಮಂತ್ರಿಯಿಂದ ರೈತ ಸಮುದಾಯಕ್ಕೆ ಅನ್ಯಾಯ

May 31, 2018

ಬೆಂಗಳೂರು: ರೈತರ ಸಾಲಮನ್ನಾಕ್ಕೆ 15 ದಿವಸ ಕಾಲಾವಕಾಶ ಬೇಕೆಂದು ಸಿಎಂ ಕುಮಾರಸ್ವಾಮಿ ಉಲ್ಲೇಖಿಸುತ್ತಿರುವುದು ರೈತ ಸಮುದಾಯಕ್ಕೆ ಮಾಡುತ್ತಿರುವ ಅನ್ಯಾಯ ಮಾಜಿ ಸಿಎಂ ಯಡಿಯೂರಪ್ಪ ಆರೋ ಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಸಾಲ ಮನ್ನಾ ಘೋಷಣೆ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರುವಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮೀನಾ-ಮೇಷ ಎಣ ಸುತ್ತಿದೆ. ರೈತ ಕಲ್ಯಾಣದ ಹೆಸರು ಹೇಳಿಕೊಂಡು ಅಧಿಕಾರ ಗಿಟ್ಟಿಸಿಕೊಂಡಿರುವ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಸರ್ಕಾರ ಇಂದು ರೈತರಿಗೆ ಮೋಸ ಮಾಡಲು ಹೊರಟಿದೆ ಎಂದು ಆಪಾದಿಸಿದರು.

Translate »