ಮೈಸೂರಲ್ಲಿ ಕಾಯಕ ಯೋಗಿ ಬಸವಣ್ಣನವರಿಗೆ ಭಕ್ತಿಪೂರ್ವಕ ನಮನ
ಮೈಸೂರು

ಮೈಸೂರಲ್ಲಿ ಕಾಯಕ ಯೋಗಿ ಬಸವಣ್ಣನವರಿಗೆ ಭಕ್ತಿಪೂರ್ವಕ ನಮನ

April 19, 2018

ಮೈಸೂರು: ಸಮಾ ನತೆಗಾಗಿ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಬಸವಣ್ಣನವರ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆ ಗಳ ವತಿಯಿಂದ ಆಚರಿಸುವ ಮೂಲಕ ಸಮಾಜ ಸುಧಾರಕ, ಕಾಯಕ ಯೋಗಿಗೆ ಗೌರವ ಸಮರ್ಪಿಸಲಾಯಿತು.

ಮೈಸೂರಿನ ಜೆಎಸ್ಎಸ್ ಮಹಾ ವಿದ್ಯಾಪೀಠದ ಎದುರಿಗಿರುವ ಬಸವಣ್ಣ ನವರ ಪ್ರತಿಮೆಗೆ ನೂತನ ಜಿಲ್ಲಾಧಿಕಾರಿ ದರ್ಪಣ್ ಜೈನ್ ಪುಷ್ಪ ನಮನ ಸಲ್ಲಿಸುವ ಮೂಲಕ ಜಿಲ್ಲಾಡಳಿತದ ವತಿಯಿಂದ ಗೌರವ ಸಲ್ಲಿಸಿದರು. ವೇಳೆ ಅಪರ ಜಿಲ್ಲಾ ಧಿಕಾರಿ ಟಿ.ಯೋಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತ್ಸಿಂಗ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಚೆನ್ನಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿದ್ದರು.

ಜೊತೆಗೆ ವಿವಿಧ ರಾಜಕೀಯ ಪಕ್ಷಗಳು ಮತ್ತು ವಿವಿಧ ಸಂಘಸಂಸ್ಥೆಗಳ ವತಿಯಿಂ ದಲೂ ಪ್ರತ್ಯೇಕವಾಗಿ ಬಸವಣ್ಣನವರಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ ಸಹ ಪುಷ್ಪ ನಮನ ಮಾಡಿದರು.

ಶಾಸಕರಾದ ಜಿ.ಟಿ.ದೇವೇಗೌಡ, ಎಂ.ಕೆ. ಸೋಮಶೇಖರ್, ವಿಧಾನಪರಿಷತ್ ಉಪ ಸಭಾಪತಿ ಮರಿತಿಬ್ಬೇಗೌಡ, ಚಾಮರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರೊ.ಕೆ.ಎಸ್. ರಂಗಪ್ಪ, ಜೆಡಿಎಸ್ ನಗರಾಧ್ಯಕ್ಷ ಕೆ.ಟಿ. ಚೆಲುವೇಗೌಡ, ಮಾಜಿ ಸಚಿವರಾದ ಎಸ್..ರಾಮದಾಸ್, ಸಿ.ಹೆಚ್. ವಿಜಯ ಶಂಕರ್, ವರುಣಾ ಕ್ಷೇತ್ರದ ಬಿಜೆಪಿ ಸಂಭ ವನೀಯ ಅಭ್ಯರ್ಥಿ ಬಿ.ವೈ. ವಿಜಯೇಂದ್ರ, ಮೇಯರ್ ಬಿ.ಭಾಗ್ಯವತಿ ಸೇರಿದಂತೆ ಅನೇಕ ಗಣ್ಯರು ಬಸವೇಶ್ವರರ ಪ್ರತಿಮೆಗೆ ಪುಷ್ಪ ವಂದನೆ ಸಲ್ಲಿಸಿ, ಗೌರವ ಸೂಚಿಸಿದರು.

ಬಸವ ತತ್ವ ಪ್ರಸ್ತುತ: ಇದೇ ವೇಳೆ ಮಾಧ್ಯಮ ದವರೊಂದಿಗೆ ಮಾತನಾಡಿದ ಜಿ.ಟಿ.ದೇವೇಗೌಡ, 12ನೇ ಶತಮಾನದಲ್ಲಿ ಬಸವಣ್ಣನವರು ಪ್ರತಿಪಾದಿಸಿದ ತತ್ವಸಿದ್ಧಾಂತಗಳು ಇಂದಿಗೂ ಪ್ರಸ್ತುತವಾಗಿವೆ ಎಂದ ಅವರು, ನಾಡಿನ ಜನತೆಗೆ ಬಸವಣ್ಣನವರ ಜಯಂತಿಯ ಶುಭಾಶಯ ಕೋರಿದರು. ಕೆಆರ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ವಿ.ಮಲ್ಲೇಶ್, ಬಿಜೆಪಿ ಸ್ಲಂ ಮೋರ್ಚಾ ರಾಜ್ಯ ಪ್ರಧಾನ ಕಾರ್ಯ ದರ್ಶಿ ಆರ್.ರಘು ಕೌಟಿಲ್ಯ, ಕೆಪಿಸಿಸಿ ಕಾರ್ಯ ದರ್ಶಿ ವರುಣಾ ಮಹೇಶ್, ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ, ಮೃಗಾಲಯ ಪ್ರಾಧಿಕಾರ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಪಾಲಿಕೆ ಸದಸ್ಯ ನಂದೀಶ್ ಪ್ರೀತಂ ಸೇರಿದಂತೆ ಅನೇಕ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಮೈಸೂರು ಹೋಟೆಲ್ ಮಾಲೀ ಕರ ಸಂಘದ ವತಿಯಿಂದ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಬಸವಣ್ಣನವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ವೇಳೆ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ರವಿ ಶಾಸ್ತ್ರಿ, ಉಗ್ರಯ್ಯ, ಸುಬ್ರಹ್ಮಣ್ಯತಂತ್ರಿ ಸೇರಿ ದಂತೆ ಮತ್ತಿತರರು ಹಾಜರಿದ್ದರು.

ಕರ್ನಾಟಕ ರಾಜ್ಯ ಭಾರತಮಾತ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಜಿ.ಸಿದ್ದರಾಜು ಹಾಗೂ ಸಂಘದ ಪದಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡಿಗ್ರೂಪ್ ನೌಕರರ ಸಂಘದ ಅಧ್ಯಕ್ಷ ಪಿ.ಕೆಂಪರಾಜು ಹಾಗೂ ಪದಾ ಧಿಕಾರಿಗಳು ಪಾಲ್ಗೊಂಡಿದ್ದರು. ಅಲ್ಲದೆ, ಇನ್ನಿತರ ಸಂಘಟನೆಗಳು ಹಾಗೂ ಸಾರ್ವಜನಿಕರು ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

 

Translate »