ವಿಶೇಷ ತರಬೇತಿ ಮೂಲಕ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಿ
ಮೈಸೂರು

ವಿಶೇಷ ತರಬೇತಿ ಮೂಲಕ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಿ

February 7, 2022

ಮೈಸೂರು, ಫೆ.6(ಎಸ್‍ಪಿಎನ್)-ಕೋವಿಡ್ ಹಿನ್ನೆಲೆ ಯಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರ ಬೇತಿ ನೀಡಿ, ಈ ಸಾಲಿನ ಪರೀಕ್ಷೆಗೆ ಸಜ್ಜುಗೊಳಿಸುವ ಹೊಣೆಗಾರಿಕೆ ಆಯಾಯ ಕಾಲೇಜು ಪ್ರಾಂಶು ಪಾಲರು ಮತ್ತು ಉಪನ್ಯಾಸಕರ ಜವಾಬ್ದಾರಿಯಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಡಿಡಿ ಪಿಯು ಶ್ರೀನಿವಾಸ ಮೂರ್ತಿ ತಿಳಿಸಿದರು.

ಮೈಸೂರಿನ ಕುವೆಂಪುನಗರದಲ್ಲಿರುವ ಪ್ರಮತಿ ಪಿಯು ಕಾಲೇಜಿನಲ್ಲಿ ಡಿಡಿಪಿಯು ಕಚೇರಿ ವತಿಯಿಂದ ಈ ಸಾಲಿನ ವಾರ್ಷಿಕ ಪರೀಕ್ಷೆ ಸಂಬಂಧ ಹಮ್ಮಿಕೊಂ ಡಿದ್ದ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಭೆ ಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಖಾಸಗಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಈ ಸಾಲಿನ ವಾರ್ಷಿಕ ಮತ್ತು ಪೂರ್ವ ಸಿದ್ಧತಾ ಪರೀಕ್ಷೆಗೆ ವಿಶೇಷ ತರಗತಿಗಳ ಮೂಲಕ ಸಜ್ಜುಗೊಳಿಸುವ ಹೊಣೆ ಆಯಾಯ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಮೇಲಿದೆ. ಅಲ್ಲದೆ, ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ಕಟ್ಟುನಿಟ್ಟಾಗಿ ನಡೆಸುವಂತೆ ಸೂಚಿಸಿದರು.

ವಿದ್ಯಾರ್ಥಿಗಳನ್ನು ಪರೀಕ್ಷೆಗಳಿಗೆ ಸಜ್ಜುಗೊಳಿಸಲು ಇಲಾಖೆಯಿಂದ ಹಲವು ಮಾರ್ಗಸೂಚಿಗಳನ್ನು ಈಗಾ ಗಲೇ ಬಿಡುಗಡೆಗೊಳಿಸಿದೆ. ಇದರ ಪ್ರಕಾರ ವಿದ್ಯಾರ್ಥಿ ಗಳನ್ನು ವಾರ್ಷಿಕ ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದು ಸಲಹೆ ನೀಡಿದರಲ್ಲದೆ, ಕೋವಿಡ್‍ನಿಂದಾಗಿ ತರಗತಿಗಳಿಂದ ಹೊರಗುಳಿದಿರುವ ವಿದ್ಯಾರ್ಥಿಗಳನ್ನು ಗುರುತಿಸಿ, ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ಗಳನ್ನು ಆಯೋಜಿಸಬೇಕು. ಅದರಲ್ಲೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ವಿಶೇಷ ತರಬೇತಿ ನೀಡಿ ಈ ಬಾರಿ ಪರೀಕ್ಷೆಯಲ್ಲಿ ಜಿಲ್ಲೆಗೆ ಉತ್ತಮ ಫಲಿತಾಂಶ ದೊರಕಿಸಿಕೊಡಲು ಎಲ್ಲರ ಸಹಕಾರ ಅಗತ್ಯವಿದೆ ಎಂದರು.

ಈ ಬಾರಿಯ ಪಿಯುಸಿ ಪ್ರಶ್ನೆ ಪತ್ರಿಕೆಯಲ್ಲಿ ಹೆಚ್ಚುವರಿ ಪ್ರಶ್ನೆಗಳು ಬರುವುದರ ಕುರಿತು ವಿದ್ಯಾರ್ಥಿ ಗಳಿಗೆ ತಿಳಿಸಬೇಕು. ಎಲ್ಲಾ ಕಾಲೇಜಿನಲ್ಲಿ ವಿದ್ಯಾರ್ಥಿ ಗಳ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಅಂತೆಯೇ ಶೌಚಾಲಯ ನಿರ್ಮಾಣ, ದುರಸ್ತಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಪ್ರಾಂಶುಪಾಲರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ರಾಜ್ಯ ಪದವಿಪೂರ್ವ ಕಾಲೇಜು ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಂಘದ ಅಧ್ಯಕ್ಷ ಪ್ರೊ. ಕಾಡ್ನೂರು ಶಿವೇಗೌಡ ಹಾಗೂ ಸಂಘದ ಖಜಾಂಚಿ ಸಿದ್ದರಾಜು, ಪ್ರಧಾನ ಕಾರ್ಯ ದರ್ಶಿ ಸೋಮಶೇಖರ್, ಪ್ರಾಂಶುಪಾಲ ದೇಸಾಯಿ ಹಾಗೂ ಕಾರ್ಯಾಧ್ಯಕ್ಷ ಮರಿಸ್ವಾಮಿ ಉಪಾಧ್ಯಕ್ಷ ಚೆಲುವಯ್ಯ, ಅಶೋಕ, ಚಂದ್ರಶೇಖರ, ಸುದೀಪ್, ವಿಜೇಂದ್ರ, ಮಂಜುನಾಥ ಹಾಗೂ ಬೋಧಕೇತರ ಸಂಘದ ಅಧ್ಯಕ್ಷ ನಾಗಭೂಷಣ, ಸಂತೋಷ, ವಿಜಯಕುಮಾರ್, ನಾರಾಯಣ, ಸುನೀಲ್, ರಾಹುಲ್, ಡಾ.ರಮಾನಂದ ಉಪಸ್ಥಿತರಿದ್ದರು.

Translate »