ವಿಷ ಸೇವಿಸಿ ಯುವಕ ಆತ್ಮಹತ್ಯೆ
ಮೈಸೂರು

ವಿಷ ಸೇವಿಸಿ ಯುವಕ ಆತ್ಮಹತ್ಯೆ

April 19, 2018

ಹುಣಸೂರು: ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಲೂಕಿನ ಶಿವಪುರ ಗ್ರಾಮದ ಲೇ. ಸ್ವಾಮಿಗೌಡರ ಪುತ್ರ ಸಾಗರ್ (19) ಆತ್ಮಹತ್ಯೆ ಮಾಡಿಕೊಂಡವನು. ಈತ ಗ್ರಾಮದಿಂದ ಹುಣಸೂರಿಗೆ ಬರುವ ಮಾರ್ಗ ಮಧ್ಯೆ ದಾಸನಪುರದ ಬಳಿ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದನು. ಇದನ್ನು ಕಂಡ ಸಾರ್ವಜನಿಕರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Translate »