ಸಿಎಂ ಆಗಿದ್ದಾಗ ಐದು ವರ್ಷ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ನೆನಪಿರಲಿಲ್ಲ: ಜೆಡಿಎಸ್ ಲೇವಡಿ
ಮೈಸೂರು

ಸಿಎಂ ಆಗಿದ್ದಾಗ ಐದು ವರ್ಷ ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ನೆನಪಿರಲಿಲ್ಲ: ಜೆಡಿಎಸ್ ಲೇವಡಿ

April 19, 2018

ಮೈಸೂರು: ಕಳೆದ ವಿಧಾನಸಭಾ ಚುನಾವಣೆಯನ್ನು ಕಾಂಗ್ರೆಸ್ ಸಿದ್ದರಾಮಯ್ಯ ನಾಯಕತ್ವದಲ್ಲೇ ಎದುರಿಸಿದ್ದಾಗ ಚಾಮುಂಡೇಶ್ವರಿಯಲ್ಲಿ ಸೋಲುಂಡಿದ್ದು ನೆನಪಿಲ್ಲವೇ? ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಚಾರ ಸಮಿತಿಯು ತಿರುಗೇಟು ನೀಡಿದೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಾಮರಾಜ ವಿಧಾನಸಭಾ ಕ್ಷೇತ್ರ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಶ್ರೀನಿವಾಸ್, ಕಳೆದ ಚುನಾವಣೆಯಲ್ಲಿ ಚಾಮುಂಡೇಶ್ವರಿ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಣಿಸಿದ ಜನತೆ, ಜೆಡಿಎಸ್ ಜಿ.ಟಿ.ದೇವೇಗೌಡರನ್ನು ಆಯ್ಕೆ ಮಾಡಿ ಕುಮಾರಸ್ವಾಮಿ ನಾಯ ಕತ್ವಕ್ಕೆ ಬೆಂಬಲ ನೀಡಿದ್ದಾರೆ ಎಂದರು.

ಸಿದ್ದರಾಮಯ್ಯನವರು ಸಿಎಂ ಆದ ನಂತರ ನಡೆದ ಲೋಕಸಭಾ ಚುನಾವಣೆ ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆ ಗಳಲ್ಲಿಯೂ ಕಾಂಗ್ರೆಸ್ ಸೋಲು ಕಂಡಿದ್ದು, ತವರು ಜಿಲ್ಲೆಯಲ್ಲಿ ಸಿದ್ದರಾಮಯ್ಯಗೆ ತೀವ್ರ ಮುಖಭಂಗವಾಗಿದೆ. ಸಿಎಂ ಆಗಿದ್ದಾಗ ಇವರ ಕಣ್ಣಿಗೆ ಚಾಮುಂಡೇಶ್ವರಿ ಕ್ಷೇತ್ರ ಕಾಣಲೇ ಇಲ್ಲ. ಈಗ ಚುನಾವಣಾ ಹಿನ್ನೆಲೆಯಲ್ಲಿ ಕ್ಷೇತ್ರದ ಮೇಲೆ ಇವರಿಗೆ ಅಗಾಧ ಪ್ರೀತಿ ಮೂಡಿದೆ ಎಂದು ವ್ಯಂಗ್ಯವಾಡಿದರು. ದಲಿತ ಮುಖಂಡರಾದ ಧನಗಳ್ಳಿ ಸ್ವಾಮಿ, ಲಕ್ಷ್ಮೀ ನಾರಾಯಣ್ ಮತ್ತಿತರರು ಗೋಷ್ಠಿಯಲ್ಲಿದ್ದರು.

Translate »