ಕರ್ನಾಟಕದಲ್ಲಿ ಬಂಡವಾಳ ಹೂಡಲು 25 ಕಂಪನಿಗಳ ಉತ್ಸುಕತೆ
ಮೈಸೂರು

ಕರ್ನಾಟಕದಲ್ಲಿ ಬಂಡವಾಳ ಹೂಡಲು 25 ಕಂಪನಿಗಳ ಉತ್ಸುಕತೆ

May 28, 2022

ಬೆಂಗಳೂರು, ಮೇ ೨೭(ಕೆಎಂಶಿ)- ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ ಇಲ್ಲ. ಅಸ್ಥಿರತೆ ಇದ್ದರೆ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡಲು ಉದ್ದಿಮೆದಾರರು ಮುಂದೆ ಬರುತ್ತಿದ್ದರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.

ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಭಾಗವಹಿಸಿ, ಹಿಂತಿರುಗಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ೨೫ ಕಂಪನಿಗಳು ಮುಂದೆ ಬಂದಿವೆ. ಅಂದಾಜು ೬೫ ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಬದ್ಧತೆ ತೋರಿವೆ. ಇದು ಕೈಗಾರಿಕೆ ಸ್ಥಾಪನೆಗೆ ರಾಜ್ಯ ನೀಡುತ್ತಿ ರುವ ಪ್ರೋತ್ಸಾಹ ಹಾಗೂ ನೀತಿಗೆ ಸಿಕ್ಕಂತಹ ಫಲ ಎಂದರು.

ನೆರೆಯ ಆಂಧ್ರಪ್ರದೇಶಕ್ಕಿAತ ಕರ್ನಾಟಕದಲ್ಲೇ ಹೆಚ್ಚು ಬಂಡವಾಳ ಹೂಡಲು ಉದ್ದಿಮೆದಾರರು ಆಸಕ್ತಿ ಹೊಂದಿ ದ್ದಾರೆ. ಈ ಪ್ರಮಾಣದಲ್ಲಿ ಒಪ್ಪಂದವಾಗಿದ್ದರೆ, ಇನ್ನು ೮೦ ಸಾವಿರ ಕೋಟಿಯಷ್ಟು ಬಂಡವಾಳ
ಹೂಡಲು ಕಂಪನಿಗಳು ಆಸಕ್ತಿ ತೋರಿವೆ. ಕೆಲವು ಉದ್ಯಮಿದಾರರು ನಿಮ್ಮಲ್ಲಿ ರಾಜಕೀಯ ಅಸ್ಥಿರತೆ ಇದೆಯೇ, ಹವಾಗುಣದ ಪರಿಸ್ಥಿತಿ ಹೇಗೆ ಎಂದೆಲ್ಲ ಮಾಹಿತಿ ಪಡೆದುಕೊಂಡರು. ಕರ್ನಾಟಕದಲ್ಲಿ ಪೂರ್ಣ ಬಹುಮತದ ಸರ್ಕಾರವಿದೆ. ನನ್ನ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡಿ, ಜನಪ್ರಿಯ ಕಾರ್ಯಕ್ರಮಗಳ ಕೊಡುವುದರ ಜೊತೆಗೆ ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿದ್ದೇವೆ. ಅಷ್ಟೇ ಅಲ್ಲ ೬೦ ಸಾವಿರ ಎಕರೆ ಭೂಮಿ ಕೈಗಾರಿಕೆಗಳಿಗೆಂದೇ ನಮ್ಮ ಲ್ಯಾಂಡ್ ಬ್ಯಾಂಕ್‌ನಲ್ಲಿ ಮೀಸಲಿರಿಸಲಾಗಿದೆ. ಅಸ್ಥಿರತೆ ಇದ್ದರೆ ಇದ್ಯಾವುದೂ ಸಾಧ್ಯವಾಗುತ್ತಿರಲಿಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಲಾಗಿದೆ.

ಲಕ್ಷಿ÷್ಮÃ ಮಿತ್ತಲ್ ಅವರು ಕರ್ನಾಟಕದ ಬಗ್ಗೆ ಈ ಪ್ರಶ್ನೆ ಮಾಡಿದರು. ಬೇರೆಯವರೂ ಕೇಳಿದರು. ಇದು ನಮಗೆ ಮಾತ್ರವಲ್ಲ, ಎಲ್ಲಾ ರಾಜ್ಯಗಳ ಸ್ಥಿತಿಯ ಬಗ್ಗೆ ಅವರು ಬಂಡವಾಳ ಹೂಡಲು ಪರಿಸ್ಥಿತಿಯನ್ನು ತಿಳಿದುಕೊಳ್ಳುತ್ತಿದ್ದರು. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದರು. ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿನ ಪೂರಕ ಪರಿಸರ, ನೀತಿ ನಿಯಮಗಳು, ತಂತ್ರಜ್ಞಾನ ಆಧಾರ, ಕೌಶಲ್ಯಯುತ ಮಾನವಸಂಪನ್ಮೂಲ, ಆರ್ ಎಂಡ್ ಡಿ ಕೇಂದ್ರಗಳು, ಉದ್ದಿಮೆಗಳಿಗೆ ನೀಡಲಾಗುವ ಪ್ರೋತ್ಸಾಹಕಗಳು, ಭೂಮಿಯ ಲಭ್ಯತೆಗಳಿಂದಾಗಿ ಬಂಡವಾಳ ಹೂಡಿಕೆ ಸಂಸ್ಥೆಗಳಿಗೆ ಕರ್ನಾಟಕದ ರಾಜ್ಯದ ಮೇಲೆ ವಿಶ್ವಾಸವನ್ನು ಮೂಡಿಸಿದೆ.

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸಲು ಹಲವು ಜಾಗತಿಕ ಉದ್ದಿಮೆದಾರರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಬಂಡವಾಳ ಆಕರ್ಷಣೆಯಲ್ಲಿ ನಾವು ಮುಂಚೂಣ ಯಲ್ಲಿದ್ದು, ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದೆ. ಕರ್ನಾಟಕ ರಾಜ್ಯದ ಎಲ್ಲ ರಂಗಗಳಲ್ಲಿ ಹೂಡಿಕೆದಾರರು ಆಸಕ್ತಿ ತೋರಿದರು. ಬಂಡವಾಳ ಹೂಡಿಕೆಯ ಜೊತೆಗೆ ವಿಸ್ತರಣಾ ಕಾರ್ಯಕ್ಕೂ ಉತ್ಸುಕತೆ ತೋರಿದರು. ಹೈಡ್ರೋ ಪವರ್, ಏರೋಸ್ಪೇಸ್, ನವೀಕರಿಸಬಹುದಾದ ಇಂಧನ ಸೇರಿದಂತೆ ಪ್ರಮುಖ ಕ್ಷೇತ್ರದ ಅಂತರರಾಷ್ಟಿçÃಯ ಮಟ್ಟದ ಸಂಸ್ಥೆಗಳು ಬಂಡವಾಳ ಹೂಡಿಕೆಯಲ್ಲಿ ಆಸಕ್ತಿ ತೋರಿದರು. ಹವಾಮಾನ ಬದಲಾವಣೆ, ನವೀಕರಿಸಬಹುದಾದ ಇಂಧನಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು ಎಂದರು. ಕೋವಿಡ್ ನಂತರದ ದೇಶದ ಆರ್ಥಿಕತೆಯ ಬಲವರ್ಧನೆಯಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸಿದೆ. ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿರುವ ಸಂಸ್ಥೆಗಳು, ಉದ್ದಿಮೆಗಳ ಸ್ಥಾಪನೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯ, ಉದ್ದಿಮೆ ಸ್ಥಾಪನೆಗೆ ಸರಳೀಕೃತ ಪ್ರಕ್ರಿಯೆಗಳು, ಜೊತೆಗೆ ಎಲ್ಲ ರೀತಿಯ ಸಹಕಾರವನ್ನು ನೀಡಲಾಗುವುದು ಎಂದರು.

ರೆನ್ಯೂ ಪವರ್ ಪ್ರೆöÊ.ಲಿ. ಕಂಪೆನಿಯು ೫೦ ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು, ಮುಂದಿನ ೭ ವರ್ಷಗಳಲ್ಲಿ ನವೀಕರಿಸಬಹು ದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. ೩೦ ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ ಎಂದರು. ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ೨ ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ ಮಾಡಿ ಕೊಂಡಿದ್ದು, ೪ ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫುö್ತ ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. ೧೦ ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ ಎಂದರು. ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಎನರ್ಜಿ, ಸೀಮೆನ್ಸ್, ಅಬ್ ಇನ್ಬೇವ್, ದಸ್ಸಾಲ್ಟ್ ಸಿಸ್ಟಂ, ನೆಸ್ಲೇ, ಆರ್ಸೆಲಾರ್ ಮಿತ್ತಲ್ ಸಂಸ್ಥೆ-ಭಾರ್ತಿ ಎಂಟರ್‌ಪ್ರೆöÊಸಸ್ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡುವ ಭರವಸೆ ನೀಡಿವೆ ಎಂದರು. ಇದಲ್ಲದೆ ಅದಾನಿ ಗ್ರೂಪ್, ದಾಲ್ಮಿಯಾ ಸಿಮೆಂಟ್, ಜಾನ್ಸನ್ ಕಂಟ್ರೋಲ್ಸ್, ಹನಿವೆಲ್, ಐಬಿಎಂ, ಐಕಿಯ ಸ್ಟೋರ್ಸ್, ಪೇಪಾಲ್, ಆಕ್ಸಿಸ್ ಬ್ಯಾಂಕ್ ಸಂಸ್ಥೆಗಳು ರಾಜ್ಯದ ವಿವಿಧ ವಲಯ ಗಳಲ್ಲಿ ಹೂಡಿಕೆ ಅವಕಾಶ ಬಗ್ಗೆ ಆಸಕ್ತಿ ತೋರಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಕರ್ನಾಟಕ ಸರ್ಕಾರ ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಹಮ್ಮಿಕೊಂಡಿರುವ ಯೋಜನೆಯಂತೆ ಸ್ತಿçà ಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ ನೀಡಲು ಆಕ್ಸಿಸ್ ಬ್ಯಾಂಕ್ ಸಂಸ್ಥೆಗೆ ಆ್ಯಂಕರ್ ಬ್ಯಾಂಕ್ ಆಗಿ ಕಾರ್ಯನಿರ್ವಹಿಸುವಂತೆ ಕೋರಲಾಗಿದೆ ಎಂದು ತಿಳಿಸಿದರು.

 

ರಾಜ್ಯದಲ್ಲಿ ೫ ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ
ಬೆಂಗಳೂರು: ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆ ದಾರರ ಸಮಾವೇಶದಲ್ಲಿ ೫ ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣ ವಿಶ್ವಾಸ ವ್ಯಕ್ತಪಡಿಸಿದರು.
ದಾವೋಸ್‌ನಿಂದ ಬೆಂಗಳೂರಿಗೆ ಆಗಮಿಸಿದ ಅವರು, ಕೆಂಪೇಗೌಡ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ನಿಗದಿಯಾಗಿರುವಂತೆ ನವೆಂಬರ್ ೨ರಿಂದ ೪ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದರು.

Translate »