ಕಳಂಕಿತರಿಗೆ ಮತ ಹಾಕಬೇಡಿ: ಎಡಿಆರ್ ರಾಜ್ಯ ಸಂಚಾಲಕ ಡಾ.ಆರ್. ಬಾಲಸುಬ್ರಹ್ಮಣ್ಯಂ ಮನವಿ

ಮೈಸೂರು:  ಪ್ರತಿಯೊಬ್ಬರು ಕಡ್ಡಾಯವಾಗಿ ಮತ ಚಲಾಯಿಸಿ, ಆದರೆ ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿರುವ ಅಭ್ಯರ್ಥಿಗಳಿಗೆ ಮಾತ್ರ ಮತ ಹಾಕಬೇಡಿ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾಮ್ರ್ಸ್ (ಎಡಿಆರ್) ರಾಜ್ಯ ಸಂಚಾಲಕ ಡಾ.ಆರ್.ಬಾಲಸುಬ್ರಹ್ಮಣ್ಯಂ ಮನವಿ ಮಾಡಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಪ್ರಜಾಪ್ರಭುತ್ವ ಸುಧಾರಣೆ ಗಾಗಿ ಇರುವ `ಎಡಿಆರ್ಸ್ವಯಂ ಸೇವಾ ಸಂಸ್ಥೆಯು ನಡೆಸಿದ ಸಮೀಕ್ಷೆಯಂತೆ 2018 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೇ.32, ಬಿಜೆಪಿ ಶೇ.27, ಜೆಡಿಎಸ್  ಶೇ.29ರಷ್ಟು ಕ್ರಿಮಿನಲ್ಗಳಿಗೆ ಟಿಕೆಟ್ ನೀಡಿರುವುದು ವಿಪರ್ಯಾಸ. ಅಂತಹವರಿಗೆ ಮತ ನೀಡದೆ ನೋಟಾವನ್ನು ಪರಿಣಾಮಕಾರಿಯಾಗಿ ಬಳಸಿ ಎಂದು ಮತದಾರರಿಗೆ ಸಲಹೆ ನೀಡಿದರು. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷ ಜೆಡಿಎಸ್ ಅಭ್ಯರ್ಥಿಗಳನ್ನು ಯಾವ ಮಾನದಂಡದ ಮೇಲೆ ಆಯ್ಕೆ ಮಾಡಲಾಗಿದೆ ಎಂದು ದಾಖಲೆ ಮುಖಾಂತರ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ ಅವರು, ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಗಳ ಹಿನ್ನೆಲೆ, ಅವರ ಸಾಮಾಜಿಕ ವಿವರಗಳಿಗಾಗಿ ಸಾರ್ವಜನಿಕರು ಎಡಿಆರ್ ದೂ: 9246556070, 9731979899 ಮೂಲಕ ಪಡೆಯಬಹುದು. 56070 ಸಂಖ್ಯೆಯಲ್ಲಿ ಎಸ್ಎಂಎಸ್ ಮೂಲಕ ಪಡೆಯಬಹುದಾಗಿದೆ ಎಂದು ಬಾಲಸುಬ್ರಹ್ಮಣ್ಯಂ ತಿಳಿಸಿದರು.