ಕೊಡಗಿನ ಹಲವೆಡೆ ಕಾರ್ಮಿಕರ ಪ್ರತಿಭಟನೆ ಮಡಿಕೇರಿಯಲ್ಲಿ ಬಸ್ ಮೇಲೆ ಕಲ್ಲು ತೂರಾಟ

ಮಡಿಕೇರಿ, ಜ.8- ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ಅನು ಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಜಿಲ್ಲೆಯಾ ದ್ಯಂತ ಪ್ರತಿಭಟನೆ ನಡೆಸಿದವು. ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜ ಪೇಟೆ ತಾಲೂಕಿನಲ್ಲಿ ಪ್ರತಿಭಟನಾಕಾರರು ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ದರು. ಕನಿಷ್ಠ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.

ಮಡಿಕೇರಿ ನಗರದ ಫೀ.ಮಾ. ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಮಾ ವೇಶಗೊಂಡು ಬೇಡಿಕೆಯನ್ನು ಈಡೇರಿಸು ವಂತೆ ಘೋಷಣೆಗಳನ್ನು ಕೂಗಿದರು.

ರಾಷ್ಟ್ರೀಯ ಸಮಾನ ಕನಿಷ್ಠ ವೇತನ ರೂ.21 ಸಾವಿರ ನಿಗದಿಪಡಿಸಬೇಕು, ಗುತ್ತಿಗೆ ಪದ್ಧತಿ ನಿಯಂತ್ರಿಸಿ, ಸಮಾನ ವೇತನ ನೀಡಬೇಕು, ರಕ್ಷಣಾ ವಲಯದ ಉದ್ದಿಮೆ ಗಳು, ರೈಲ್ವೆ ಇಲಾಖೆ ಖಾಸಗೀಕರಣ ಕೈಬಿಡಬೇಕು, ರಕ್ಷಣೆ, ಕಲ್ಲಿದ್ದಲು, ಬ್ಯಾಂಕಿಂಗ್, ವಿಮೆ ಕ್ಷೇತ್ರಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಮಾಡ ಬಾರದು, ದುಡಿಯುವ ಕೈಗಳಿಗೆ ದೇಶವ್ಯಾಪಿ ಸಮಾನ ವೇತನ ಪದ್ಧತಿ ಜಾರಿಗೆ ತರ ಬೇಕು, ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು, ಎಲ್ಲಾ ಜಿಲ್ಲೆಗಳಲ್ಲಿ ಕಾರ್ಮಿಕ ಕೋರ್ಟುಗಳನ್ನು ಸ್ಥಾಪಿಸಬೇಕು, ಎಲ್ಲ ರಿಗೂ ಸರ್ಕಾರದ ಮೂಲಕವೇ ತಲಾ ಹತ್ತು ಸಾವಿರ ರೂ. ಪಿಂಚಣಿ ಖಾತ್ರಿ ಪಡಿಸಬೇಕು, ಆರ್ಥಿಕ ಹಿಂಜರಿತಕ್ಕೆ ಕಾರಣವಾದ ಅಂಶಗಳನ್ನು ಕೈಬಿಡಬೇಕು, ಬೆಲೆ ಏರಿಕೆ ನಿಯಂತ್ರಿಸಬೇಕು, ಎಲ್ಲಾ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ನಿಗದಿಪಡಿಸಬೇಕು, ರೈತರ ಹಾಗೂ ಕೂಲಿ ಕಾರ್ಮಿಕÀರ ಸಾಲಮನ್ನಾ ಮಾಡಬೇಕು, ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ನೌಕರ ರನ್ನು ಖಾಯಂಗೊಳಿಸಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಜಿಲ್ಲೆಯಲ್ಲಿರುವ ಮರಳಿನ ಸಮಸ್ಯೆಯನ್ನು ತಕ್ಷಣದಲ್ಲಿ ಪರಿಹರಿಸಬೇಕು, ಪಡಿತರ ವ್ಯವಸ್ಥೆಯನ್ನು ಸಮರ್ಪಕವಾಗಿ ಜಾರಿಗೊಳಿಸ ಬೇಕು, ಸೇರಿದಂತೆ ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸಂಚಾಲಕ ಹೆಚ್.ಬಿ.ರಮೇಶ್, ಅಖಿಲ ಭಾರತ ಮಟ್ಟದಲ್ಲಿ ಕಾರ್ಮಿಕರ ನೇತೃತ್ವ ದಲ್ಲಿ ನಡೆಯುತ್ತಿರುವ ಮುಷ್ಕರಕ್ಕೆ ಕೊಡಗು ಜಿಲ್ಲೆಯ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿದ್ದು, ಹತ್ತು ಕಾರ್ಮಿಕ ಸಂಘಟನೆಗಳು ಜಂಟಿಯಾಗಿ ತಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿವೆ ಎಂದರು.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಮಡಿಕೇರಿ ತಾಲೂಕು ಅಧ್ಯಕ್ಷೆ ಕೆ.ಎಸ್.ಮುತ್ತಮ್ಮ ಮಾತನಾಡಿ, ಸರ್ಕಾರ ಜಾರಿಗೆ ತರುವ ಹತ್ತು ಹಲವು ಯೋಜನೆಗಳನ್ನು ಅಂಗನ ವಾಡಿ ಕಾರ್ಯಕರ್ತರು ಮತ್ತು ಸಹಾಯಕಿ ಯರು ಸಮರ್ಪಕವಾಗಿ ಅನುಷ್ಠಾನಗೊಳಿಸಿ ದರೂ ದುಡಿಯುವ ಕೈಗಳಿಗೆ ಸೂಕ್ತ ಸೌಲಭ್ಯ ವನ್ನು ಸರ್ಕಾರ ನೀಡುತ್ತಿಲ್ಲ ಎಂದರು.

ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ತೆಕ್ಕಡ ಪೂರ್ಣಿಮಾ ಮಾತ ನಾಡಿ, ಆಶಾ ಕಾರ್ಯಕರ್ತೆಯರ ಬೇಡಿಕೆ ಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಿರಂ ತರ ಪತ್ರಿಭಟನೆಗಳು ನಡೆಸುತ್ತ ಬಂದರೂ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಆರೋಪಿಸಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಎ.ಮಹಾದೇವ, ಪ್ರಧಾನ ಕಾರ್ಯದರ್ಶಿ ಎ.ಸಿ.ಸಾಬು, ಎನ್.ಡಿ.ಕುಟ್ಟಪ್ಪ, ಉಪಕಾರ್ಯದರ್ಶಿ ರಾಚಪ್ಪಾಜಿ, ಎಐಯುಟಿಯುಸಿ ಸಂಚಾ ಲಕ ಬಿ.ರವಿ, ಅಂಗನವಾಡಿ ಕಾರ್ಯ ಕರ್ತೆ ಮತ್ತು ಸಹಾಯಕಿಯರ ಸಂಘದ ಮಡಿಕೇರಿ ತಾಲೂಕು ಕಾರ್ಯದರ್ಶಿ ಅಕ್ಕಮ್ಮ, ಎಲ್‍ಐಸಿ ಪ್ರತಿನಿಧಿ ಶಶಿಕಿರಣ್, ಜಿಲ್ಲಾ ಸರಕಾರಿ ಆಸ್ಪತ್ರೆ ಸ್ವಚ್ಛತಾ ಸಿಬ್ಬಂದಿ ಕಾರ್ಯದರ್ಶಿ ಜಾನಕಿ, ಪದಾಧಿಕಾರಿ ಟಿ.ಜೆ. ಶೀಲಾ, ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷ ಅಶ್ರಫ್, ಅಕ್ಷರ ದಸೋಹ ಮತ್ತು ಬಿಸಿಯೂಟ ನೌಕರರ ಸಂಘದ ಮಡಿ ಕೇರಿ ತಾಲೂಕು ಅಧ್ಯಕ್ಷೆ ಪಿ.ಡಿ.ತುಳಸಿ, ಎಆರ್‍ಬಿಇಎ ಮುಖಂಡರು, ಗ್ರಾಮ ಪಂಚಾಯ್ತಿ ನೌಕರರ ಸಂಘದ ಮುಖಂ ಡರು ಹಾಗೂ ಸದಸ್ಯರು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು.

ಬಸ್‍ಗೆ ಕಲ್ಲೇಟು
ಕಾರ್ಮಿಕ ಸಂಘÀಟನೆಗಳ ಪ್ರತಿ ಭಟನೆಯ ದಿನವಾದ ಬುಧವಾರ ಬೆಳಿಗ್ಗೆ ನಗರದ ಚೈನ್‍ಗೇಟ್ ಬಳಿ ಅಪರಿಚಿತ ಕಿಡಿಗೇಡಿಗಳು ಕೆಎಸ್‍ಆರ್‍ಟಿಸಿ ಬಸ್‍ಗೆ ಕಲ್ಲು ತೂರಿದ ಘಟನೆ ನಡೆದಿದೆ. ಬಸ್‍ನ ಮುಂಭಾಗದ ಗಾಜು ಒಡೆದಿದ್ದು, ಚಾಲಕ ಹಾಗೂ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ.