ಭಾರತ ಕಮ್ಯುನಿಸ್ಟ್ ಪಕ್ಷದ  ಕಾರ್ಯಕರ್ತರ ಪ್ರತಿಭಟನೆ

ಕೇಂದ್ರದ ಬಿಜೆಪಿ ಸರ್ಕಾರ ಜನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಮೈಸೂರು ಜಿಲ್ಲಾ ಸಮಿತಿ ಆಶ್ರಯದಲ್ಲಿ ಮೈಸೂರಿನ ನ್ಯಾಯಾಲಯದ ಎದುರಿನ ಗಾಂಧಿ ಪುತ್ಥಳಿ ಬಳಿ ಪ್ರತಿಭಟನೆ ನಡೆಯಿತು.

ಮೈಸೂರು:  ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಜನವಿರೋಧಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಮೈಸೂರು ಜಿಲ್ಲಾ ಸಮಿತಿ ಆಶ್ರಯದಲ್ಲಿ ಸೋಮವಾರ ಮೈಸೂರಿನ ನ್ಯಾಯಾಲಯದ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು.

ಮೋದಿ ಆಡಳಿತ ಕಾರ್ಪೊರೇಟ್ ಕಂಪನಿಗಳ ಪರವಾಗಿದೆ. ಜೀವನಾಶ್ಯಕ ವಸ್ತುಗಳ ಬೆಲೆ ಏರಿಕೆ ತಡೆಯಲು ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ದುಡಿಯುವ ಕೈಗಳಿಗೆ ಅಗತ್ಯ ಉದ್ಯೋಗ ನೀಡುವ ನೀತಿ ಜಾರಿಗೊಳಿಸಬೇಕು. ರೈತರ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನೀಡಲು ಡಾ.ಎಂ.ಎಸ್.ಸ್ವಾಮಿನಾಥನ್ ವರದಿ ಅನುಷ್ಠಾನಗೊಳಿಸಬೇಕು. ಮಾಲೀಕರ ಪರ ತಿದ್ದುಪಡಿಗಳನ್ನು ಕೈಬಿಡಬೇಕು. ಮಾಹಿತಿ ಹಕ್ಕು ಕಾನೂನಿಗೆ ತಿದ್ದುಪಡಿ ಮಸೂದೆ ಹಿಂಪಡೆಯಬೇಕು ಎಂಬ ಹಲವು ಬೇಡಿಕೆಗಳ ಈಡೇರಿಸಲು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಸಂಚಾಲಕ ಹೆಚ್.ವಿ.ಶೇಷಾದ್ರಿ, ಅಧ್ಯಕ್ಷ ರಾಜು, ರಾಮಕೃಷ್ಣ ಇನ್ನಿತರರು ಭಾಗವಹಿಸಿದ್ದರು.