ಮೈಸೂರಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ಕಟ್ಟಡ ಕಾರ್ಮಿಕರ ಪ್ರತಿಭಟನೆ

July 13, 2021

ಮೈಸೂರು, ಜು.12(ಎಂಟಿವೈ)- ಲಾಕ್ ಡೌನ್ ವೇಳೆ ಸಂತ್ರಸ್ತರಿಗೆ ಘೋಷಿಸಿರುವ ಆರ್ಥಿಕ ನೆರವು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಟ್ಟಡ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಮೈಸೂರು ಡಿಸಿ ಕಚೇರಿ ಬಳಿ ಕರ್ನಾ ಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಟ್ಟಡ ಕಾರ್ಮಿಕರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು. ಲಾಕ್‍ಡೌನ್ ಪರಿಹಾರ ವನ್ನು ನಗದು ರೂಪದಲ್ಲಿ ನೀಡಬೇಕು. ಪಡಿತರ ಕಿಟ್, ಟೂಲ್‍ಕಿಟ್, ಸುರಕ್ಷಾ ಕಿಟ್ ಖರೀದಿಯಲ್ಲಿ ಪಾರದರ್ಶಕತೆ ಕಾಪಾಡಿಲ್ಲ. ಈ ಮೂಲಕ ಕಾರ್ಮಿಕರ ಕಲ್ಯಾಣ ಮಂಡಳಿಯು ಸುಪ್ರೀಂಕೋರ್ಟ್‍ನ ನಿರ್ದೇ ಶನ ಮತ್ತು ನಿಯಮವನ್ನೂ ಪಾಲಿಸಿಲ್ಲ. ಹೀಗಾಗಿ, ಈ ಕುರಿತು ತನಿಖೆ ನಡೆಸಬೇಕು. ಕೋವಿಡ್‍ನಿಂದ ಮೃತಪಟ್ಟ ನೋಂದಾ ಯಿತ ಕಾರ್ಮಿಕರಿಗೆ ಪರಿಹಾರ ನೀಡಬೇಕು. ಕೋವಿಡ್‍ನಿಂದ ಗುಣವಾದ ಫಲಾನುಭವಿ ಗಳ ವೈದ್ಯಕೀಯ ವೆಚ್ಚ ಭರಿಸಬೇಕು. ಶೈP್ಷÀ ಣಿಕ ಸಹಾಯಧನ ಅರ್ಜಿಗಳು ವಿಳಂಬ ವಾಗುತ್ತಿದ್ದು, ಇದನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಪರಿಹಾರ ಪ್ಯಾಕೇಜ್‍ಗಾಗಿ ಅರ್ಜಿಗಳ ವಿಲೇವಾರಿ ತಡ ವಾಗುತ್ತಿದ್ದು, ಇದನ್ನು ತಪ್ಪಿಸಿ ತ್ವರಿತವಾಗಿ ಫಲಾನುಭವಿಗಳಿಗೆ ನೆರವು ನೀಡಬೇಕು. ಕಾರ್ಮಿಕರ ನಕಲಿ ಕಾರ್ಡ್‍ಗೆ ನಿಯಂತ್ರಣ ಹಾಕಬೇಕು. ಅನಧಿಕೃತ ಕಟ್ಟಡಗಳಿಂದಲೂ ಸೆಸ್ ಸಂಗ್ರಹಕ್ಕೆ ಮುಂದಾಗಬೇಕು. ಕೇಂದ್ರ ಕಾರ್ಮಿಕ ಸಂಘಟನೆಗಳಿಗೆ ನೋಂದಣಿಗೆ ಪ್ರತ್ಯೇಕ ಐಡಿ ನೀಡಿ, ಕಲ್ಯಾಣ ಮಂಡಳಿ ಯಲ್ಲಿ ನೈಜ ಕಾರ್ಮಿಕರಿಗೆ ಪ್ರಾತಿನಿಧ್ಯ ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಹೊಡೆಯುವ ಕ್ವಾರಿ ಕಾರ್ಮಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮರಾಜೇ ಅರಸ್, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವಯ್ಯ, ಕರ್ನಾ ಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕರ ಸಂಘದ ಹರೀಶ್, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂ ಟದ ಪ್ರಧಾನ ಕಾರ್ಯದರ್ಶಿ ಕೆ.ಮಂಜು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Translate »