ವಿದ್ಯಾರ್ಥಿ ಆತ್ಮಹತ್ಯೆ

ಮಡಿಕೇರಿ:  ಶಾಲಾ ವಿದ್ಯಾರ್ಥಿಯೋರ್ವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ತ್ಯಾಗರಾಜ ಕಾಲೋನಿಯಲ್ಲಿ ನಡೆದಿದೆ. ತ್ಯಾಗರಾಜ ಕಾಲೋನಿ ನಿವಾಸಿ ಶರೀಫಾ ಎಂಬವರ ಪುತ್ರ ಜಾಹೀದ್(16) ಎಂಬಾತನೇ ಆತ್ಮಹತ್ಯೆಗೆ ಶರಣಾದ ಬಾಲಕನಾಗಿದ್ದಾನೆ.

ಜಾಹೀದ್ ನಗರದ ಸರಕಾರಿ ಫ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಶಾಲೆಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದಾನೆ. ಆದರೆ, 9.30ರ ಸಮಯದಲ್ಲಿ ಮನೆಯ ಸಮೀಪವಿರುವ ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಾಹಿತಿ ಅರಿತ ನಗರ ಪೊಲೀಸರು ಸ್ಥಳಕ್ಕಾಗಮಿಸಿ, ಮೃತದೇಹದ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.