ಬಿಪಿಎಲ್ ಕಾರ್ಡ್‍ದಾರರಿಗೆ ತಲಾ 10 ಕೆಜಿ ಅಕ್ಕಿ ನೀಡುವಂತೆ ಕಾಂಗ್ರೆಸ್ ಪೋಸ್ಟ್ ಕಾರ್ಡ್ ಚಳುವಳಿ
ಮೈಸೂರು

ಬಿಪಿಎಲ್ ಕಾರ್ಡ್‍ದಾರರಿಗೆ ತಲಾ 10 ಕೆಜಿ ಅಕ್ಕಿ ನೀಡುವಂತೆ ಕಾಂಗ್ರೆಸ್ ಪೋಸ್ಟ್ ಕಾರ್ಡ್ ಚಳುವಳಿ

May 4, 2021

ಮೈಸೂರು,ಮೇ3(ಎಂಟಿವೈ)- ಕೊರೊನಾ ಕಫ್ರ್ಯೂನಿಂದಾಗಿ ಕೂಲಿ ಇಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಬಡವರಿಗೆ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿದ್ದ ಅಕ್ಕಿ ಪ್ರಮಾಣ ಕಡಿತಗೊಳಿಸದಂತೆ ಹಾಗೂ ತಲಾ 10ಕೆಜಿ ಅಕ್ಕಿ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟ್ ಕಾರ್ಡ್ ಚಳುವಳಿ ನಡೆಸಿದರು.

ಮೈಸೂರಿನ ಕಾಂಗ್ರೆಸ್ ಕಚೇರಿ ಮುಂಭಾ ಗದಲ್ಲಿ ಸೋಮವಾರ ಬೆಳಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಹಾಗೂ ರಾಜ್ಯಪಾಲರ ವಿಳಾಸಕ್ಕೆ ಪೋಸ್ಟ್ ಕಾರ್ಡ್ ಕಳುಹಿಸುವ ಮೂಲಕ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ತಲಾ 10 ಕೆಜಿ ಅಕ್ಕಿ ಉಚಿತವಾಗಿ ನೀಡಲೇಬೇಕೆಂದು ಆಗ್ರಹಿಸಿದರು.

ಇದೇ ವೇಳೆ ಕೆಪಿಸಿಸಿ ಮಹಿಳಾ ಘಟ ಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಮಾತನಾಡಿ, ಹಸಿವು ಮುಕ್ತ ಕರ್ನಾಟಕ ಮಾಡುವ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ್ದ ಅನ್ನ ಭಾಗ್ಯ ಯೋಜನೆಯ ಮಹತ್ವ ಅರಿಯದೆ ಬಿಜೆಪಿ ಸರ್ಕಾರ ಕತ್ತರಿ ಭಾಗ್ಯ ಯೋಜನೆ ಜಾರಿಗೆ ತಂದು ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸಿದ್ದರಾಮಯ್ಯ ಅವರು ಬಡವರ ಸಂಕಷ್ಟ ಅರಿತು, ಅನ್ನಕ್ಕಾಗಿ ಪರಿ ತಪಿಸುತ್ತಿದ್ದ ಸಾವಿರಾರು ಕುಟುಂಬಗಳಿಗೆ ನೆರವಾಗುವ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ತಲಾ 7 ಕೆಜಿ ಅಕ್ಕಿ ಕೊಡುವ ಯೋಜನೆ ಜಾರಿಗೆ ತಂದಿದ್ದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಿ ತಲಾ 5 ಕೆಜಿ ಅಕ್ಕಿ ಕೊಡಲು ಮುಂದಾಗಿತ್ತು. ಇದೀಗ 2 ಕೆಜಿ ಅಕ್ಕಿ ಕೊಡುತ್ತಿದೆ. ಇದರಿಂದ ಬಡವರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರ ಸೂಚನೆ ಮೇರೆಗೆ ರಾಜ್ಯದಾದ್ಯಂತ ಪೋಸ್ಟ್ ಕಾರ್ಡ್ ಚಳು ವಳಿ ನಡೆಸಿ, ಕತ್ತರಿ ಭಾಗ್ಯ ಬೇಡ, 10 ಕೆಜಿ ಅಕ್ಕಿ ಬೇಕು ಎಂದು ಒತ್ತಾಯಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯ್‍ಕುಮಾರ್, ಮುಖಂಡರಾದ ಹೆಚ್.ಎ.ವೆಂಕಟೇಶ್, ಡೈರಿ ವೆಂಕಟೇಶ್, ಈಶ್ವರ್ ಚಕ್ಕಡಿ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

Translate »