ಸಿಎಂ ಪರಿಹಾರ ನಿಧಿಗೆ ಡಿಸಿಸಿ ಬ್ಯಾಂಕ್‍ನಿಂದ 10 ಲಕ್ಷ ರೂ. ನೆರವು
ಕೊಡಗು

ಸಿಎಂ ಪರಿಹಾರ ನಿಧಿಗೆ ಡಿಸಿಸಿ ಬ್ಯಾಂಕ್‍ನಿಂದ 10 ಲಕ್ಷ ರೂ. ನೆರವು

April 1, 2020

ಮಡಿಕೇರಿ, ಮಾ.31- ಕೊಡಗು ಡಿಸಿಸಿ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 10 ಲಕ್ಷ ರೂ.ಗಳ ದೇಣಿಗೆ ಚೆಕ್‍ನ್ನು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಹಸ್ತಾಂತರಿಸಿದರು.

ಜಿಲ್ಲಾಸ್ಪತ್ರೆಗೆ ಡಿಸಿಸಿ ಬ್ಯಾಂಕ್ ವತಿಯಿಂದ ಅಂದಾಜು 6.50ಲಕ್ಷ ರೂ. ವೆಚ್ಚದಲ್ಲಿ ಒಂದು ವೆಂಟಿಲೇಟರ್ ಒದಗಿಸಲು ತೀರ್ಮಾನಿಸಲಾಗಿದೆ ಎಂದು ಅಧ್ಯಕ್ಷ ಬಾಂಡ್ ಗಣಪತಿ ಹೇಳಿದರು. ಈ ಸಂದರ್ಭ ಶಾಸಕರಾದ ಕೆ.ಜಿ ಬೋಪಯ್ಯ, ಎಂ.ಪಿ ಅಪ್ಪಚ್ಚು ರಂಜನ್, ಸುನೀಲ್ ಸುಬ್ರಮಣಿ, ಜಿ.ಪಂ ಅಧ್ಯಕ್ಷ ಬಿ.ಎ ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ಇದ್ದರು.

Translate »