ಮೇಲ್ವರ್ಗಕ್ಕೆ ಶೇ.10ರಷ್ಟು ಮೀಸಲಾತಿ; ತಿಂಗಳೊಳಗೆ ರಾಜ್ಯದಲ್ಲಿ ಜಾರಿ
ಮೈಸೂರು

ಮೇಲ್ವರ್ಗಕ್ಕೆ ಶೇ.10ರಷ್ಟು ಮೀಸಲಾತಿ; ತಿಂಗಳೊಳಗೆ ರಾಜ್ಯದಲ್ಲಿ ಜಾರಿ

June 12, 2020

ಮೈಸೂರು, ಜೂ. 11(ಪಿಎಂ)- ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗ ಸಮು ದಾಯದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸುವ ಕೇಂದ್ರ ಸರ್ಕಾ ರದ ಆದೇಶ ಜಾರಿಗೊಳಿಸುವ ಸಂಬಂಧ ಈ ತಿಂಗಳ ಒಳಗೆ ನಿರ್ಧಾರ ಕೈಗೊಳ್ಳು ವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವರೂ ಆದ ಶಾಸಕ ಎಸ್.ಎ.ರಾಮದಾಸ್ ತಿಳಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರು ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಉದ್ಯೋಗ ದಲ್ಲಿ ಶೇ.10ರಷ್ಟು ಮೀಸಲಾತಿ ಜಾರಿಗೊಳಿಸಿದ ಬಳಿಕ ಅನೇಕ ರಾಜ್ಯಗಳಲ್ಲಿ ಇದನ್ನು ಅನುಷ್ಠಾನಕ್ಕೆ ತರಲಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಹಿಂದಿನ ಸರ್ಕಾರಗಳು ಅನುಷ್ಠಾನಗೊಳಿಸಿಲ್ಲ ಎಂದರು.

ಹೀಗಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಮಾಡಲಾಗಿತ್ತು. ಮುಖ್ಯಮಂತ್ರಿಗಳು ತಮ್ಮ ಮನವಿಗೆ ಸ್ಪಂದಿಸಿ ಇದೇ ತಿಂಗಳ ಒಳಗೆ ಈ ಸಂಬಂಧ ಆದೇಶ ಹೊರಡಿಸುವುದಾಗಿ ಭರವಸೆ ನೀಡಿದ್ದಾರೆ. ಅವರಿಗೆ ಧನ್ಯವಾದ ತಿಳಿಸುವುದಾಗಿ ಹೇಳಿದರು.

ಜಾತಿ ಪ್ರಮಾಣ ಪತ್ರ: ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿ ಸ್ಥಾಪನೆಯಾಗಿದ್ದು, ಇದರಡಿ ದೊರೆಯುವ ಸೌಲಭ್ಯ ಹಾಗೂ ಶೇ.10ರಷ್ಟು ಮೀಸಲಾತಿಯಡಿ ಸೌಲಭ್ಯ ಪಡೆಯಲು ಜಾತಿ ಪ್ರಮಾಣ ಪತ್ರ ಅಗತ್ಯವಿದೆ. ಆದರೆ ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಾತಿ ಪ್ರಮಾಣ ಪತ್ರ ನೀಡುವ ಸಂಬಂಧ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮನವಿ ಸಲ್ಲಿಸಿದ ಕೂಡಲೇ ಅವರು ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಕ್ರಮ ಕೈಗೊ ಳ್ಳಲು ಆದೇಶ ಮಾಡಿದ್ದಾರೆ ಎಂದು ತಿಳಿಸಿದರು.

ಈ ಕುರಿತಂತೆ 2 ದಿನದೊಳಗೆ ಪ್ರಧಾನ ಕಾರ್ಯ ದರ್ಶಿಗಳು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಮುಖೇನ ಆದೇಶ ಮಾಡಲಿದ್ದಾರೆ. ಮುಂದಿನ ದಿನಗಳಲ್ಲಿ ಬ್ರಾಹ್ಮಣ ಸಮುದಾಯ ಆನ್‍ಲೈನ್ ಹಾಗೂ ಆಫ್‍ಲೈನ್‍ನಲ್ಲಿ ಜಾತಿ ಪ್ರಮಾಣ ಪತ್ರ ಪಡೆಯಲು ಸಾಧ್ಯವಾಗಲಿದೆ ಎಂದರು.

ಕಾಂಗ್ರೆಸ್‍ನವರು ಕರೆ ಮಾಡಿದ್ರು: ಇದೇ ವೇಳೆ ರಾಜ್ಯಸಭಾ ಚುನಾವಣೆ ಸಂಬಂಧ ಬಿಜೆಪಿ ಅಭ್ಯರ್ಥಿ ಗಳ ಆಯ್ಕೆ ವಿಚಾರದಲ್ಲಿ ರಾಜ್ಯ ವರಿಷ್ಠರು ಹಾಗೂ ಹೈಕಮಾಂಡ್ ನಡುವೆ ಸಹಮತ ಇರಲಿಲ್ಲವೇ? ಎಂಬು ದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅಭ್ಯರ್ಥಿಗಳಾಗಿ ಪಕ್ಷದ ಸಾಮಾನ್ಯ ಕಾರ್ಯಕರ್ತರಾದ ಅಶೋಕ್ ಗಸ್ತಿ ಹಾಗೂ ಈರಣ್ಣ ಕಡಾಡಿ ಅವರನ್ನು ಆಯ್ಕೆ ಮಾಡಿದ್ದು, ಇವರ ಹೆಸರುಗಳನ್ನು 2ನೇ ಹಂತದಲ್ಲಿ ರಾಜ್ಯದ ವರಿಷ್ಠರೇ ಶಿಫಾರಸ್ಸು ಮಾಡಿದ್ದರು. ಇಲ್ಲಿ ಯಾವುದೇ ವಿವಾದ ಇಲ್ಲ. ಹೈಕಮಾಂಡ್ ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತಕತೆ ನಡೆಸಿಯೇ ಈ ಇಬ್ಬರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್‍ನವರೊಬ್ಬರು ನನಗೆ ಫೋನ್ ಮಾಡಿದ್ದರು. ಸಾಮಾನ್ಯ ಕಾರ್ಯಕರ್ತರ ರಿಗೆ ಟಿಕೆಟ್ ಕೊಡುವಂತಹ ಸಾಧ್ಯತೆ ಇದ್ದರೆ ಅದು ನಿಮ್ಮಲ್ಲಿ ಮಾತ್ರ ಸರ್ ಎಂದರು ಎಂದು ತಿಳಿಸಿದರು.

ಮುಖ್ಯಮಂತ್ರಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರು ಇಬ್ಬರೂ ಚರ್ಚಿಸಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲೂ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಪಕ್ಷದಲ್ಲಿ ವಲಸೆ, ಮೂಲ ಎಂಬ ಭೇದಭಾವವಿಲ್ಲ. ಸಚಿವ ಸ್ಥಾನ ಸಿಗಲಿಲ್ಲ ಎಂಬ ನೋವು ನನಗಿಲ್ಲ. ನನ್ನ ಕೆಲಸಗಳನ್ನು ಮಾಡುತ್ತಲೇ ಹೋಗು ತ್ತಿದ್ದೇನೆ. ಪಕ್ಷ ನನ್ನ ತಾಯಿ ಸಮಾನ. ಪಕ್ಷದ ಆದೇಶ ಪಾಲಿಸು ವುದಕ್ಕೆ ನಾನು ಬದ್ಧವಾಗಿದ್ದೇನೆ ಎಂದು ಪ್ರಶ್ನೆಗಳಿಗೆ ಉತ್ತರಿಸಿದರು. ಬಿಜೆಪಿ ಹೈಕಮಾಂಡ್ ಸಿಎಂ ಬದಲಾವ ಣೆಗೆ ಮುಂದಾದರೆ ನಿಮ್ಮ ನಿಲುವು ಏನು? ಎಂಬುದಕ್ಕೆ ಪ್ರತಿಕ್ರಿಯಿಸಿ ಆ ರೀತಿಯ ಪ್ರಶ್ನೆಯೇ ಇಲ್ಲ ಎಂದರು.

ಕೆಲವು ಶಾಲೆಗಳಿಂದ ಆನ್‍ಲೈನ್‍ಲ್ಲಿ ಶಾಲಾ ಶುಲ್ಕ ಪಾವತಿಸುವಂತೆ ಸಂದೇಶ ಬರುತ್ತಿರುವುದು ಗೊತ್ತಾ ಗಿದೆ. ಯಾರೂ ಕೂಡ ಶಾಲೆ ಪ್ರಾರಂಭವಾಗು ವವರೆಗೆ ಶಾಲಾ ಶುಲ್ಕ ಕಟ್ಟುವಂತೆ ಆನ್‍ಲೈನ್‍ನಲ್ಲಿ ಸಂದೇಶ ಕಳುಹಿಸಬಾರದೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಈಗಾಗಲೇ ನಿರ್ದೇಶನ ನೀಡಿ ದ್ದಾರೆ. ಜೊತೆಗೆ ಪ್ರಸಕ್ತ ಸಾಲಿನಲ್ಲಿ ಶುಲ್ಕ ಕಡಿಮೆ ಗೊಳಿಸುವ ಸಂಬಂಧವೂ ಸಚಿವರೊಂದಿಗೆ ನಾವು ಚರ್ಚೆ ಮಾಡಿದ್ದೇವೆ ಎಂದು ಪ್ರತಿಕ್ರಿಯಿಸಿದರು.

Translate »