ಮೈಸೂರು ಜಿಲ್ಲೆಯಲ್ಲಿ ಶೇ.100ರಷ್ಟು ಲಸಿಕೆ ನೀಡಲು ಬದ್ಧ
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಶೇ.100ರಷ್ಟು ಲಸಿಕೆ ನೀಡಲು ಬದ್ಧ

June 16, 2021

ಮೈಸೂರು, ಜೂ.15(ಆರ್‍ಕೆಬಿ)- ಕೋವಿಡ್ ಲಸಿಕೆ ನೀಡುವುದರಲ್ಲಿ ಮೈಸೂರು ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ದಲ್ಲಿದೆ. ಇದೇ ರೀತಿ ಪೂರ್ಣ ಪ್ರಮಾಣ ದಲ್ಲಿ ಎಲ್ಲರಿಗೂ ಲಸಿಕೆ ನೀಡುವ ಮೂಲಕ ಶೇ.100ರಷ್ಟು ಗುರಿ ಸಾಧಿಸಲು ಜಿಲ್ಲಾ ವೈದ್ಯಾಧಿಕಾರಿಗಳಿಗೆ ತಿಳಿಸಿರುವುದಾಗಿ ಸಹ ಕಾರ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮ ಗಳೊಂದಿಗೆ ಮಾತನಾಡಿದ ಅವರು, ಜೂ.21ರಿಂದ ಎಲ್ಲಾ ವರ್ಗದವರಿಗೂ ನೀಡಲು ಘೋಷಣೆಯಾಗಿರುವುದರಿಂದ ಆದಷ್ಟು ಬೇಗ ಎಲ್ಲಾ ವರ್ಗದವರಿಗೂ ಲಸಿಕೆ ದೊರೆಯಲಿದೆ ಎಂದು ಹೇಳಿದರು.
`ವೈದ್ಯರ ನಡೆ ಹಳ್ಳಿಯ ಕಡೆ’ ಮೊದಲ ಹಂತ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಗಳು ಎರಡನೇ ಹಂತದ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಬಳಿಕ ಎಲ್ಲ ಕಡೆ ಹೋಗು ತ್ತಿರುವುದರಿಂದ ಕೋವಿಡ್ ಟೆಸ್ಟ್‍ಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಈ ವಾರ ದಲ್ಲಿಯೇ ಎರಡನೇ ಹಂತ ಪೂರ್ಣ ಗೊಳ್ಳಲಿದೆ ಎಂದರು. ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಶಾಸಕ ಎಲ್.ನಾಗೇಂದ್ರ, ವಸ್ತುಪ್ರದರ್ಶನ ಪ್ರಾಧಿ ಕಾರದ ಅಧ್ಯಕ್ಷ ಹೇಮಂತ್‍ಕುಮಾರ್ ಗೌಡ, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಅರಣ್ಯ ಮತ್ತು ವಸತಿ ವಿಹಾರ ಧಾಮಗಳ ಅಧ್ಯಕ್ಷ ಎಂ.ಅಪ್ಪಣ್ಣ ಇನ್ನಿತರರು ಉಪಸ್ಥಿತರಿದ್ದರು.

Translate »