ದುದ್ದ ಹೋಬಳಿ ಕೆರೆಗಳಿಗೆ ನೀರು ತುಂಬಿಸಲು 110 ಕೋಟಿ ಮೀಸಲು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು
ಮಂಡ್ಯ

ದುದ್ದ ಹೋಬಳಿ ಕೆರೆಗಳಿಗೆ ನೀರು ತುಂಬಿಸಲು 110 ಕೋಟಿ ಮೀಸಲು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು

July 24, 2018

ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದುದ್ದ ಹೋಬಳಿ ಕೆರೆಗಳಿಗೆ ನೀರು ತುಂಬಿಸಲು ರಾಜ್ಯ ಸರ್ಕಾರ ಬಜೆಟ್‍ನಲ್ಲಿ 110 ಕೋಟಿ ಅನುದಾನ ಮೀಸಲಿರಿಸಿದ್ದು, ಸಣ್ಣ ನೀರಾ ವರಿ ಇಲಾಖೆ ವತಿಯಿಂದ ಈ ಅಭಿವೃದ್ಧಿ ಕಾರ್ಯ ಅನುಷ್ಠಾನಗೊಳಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು.

ಸೋಮವಾರ ದುದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಆಯೋ ಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಮಾತ ನಾಡಿದ ಅವರು, ರಾಜ್ಯ ಸರ್ಕಾರ ರೈತರ ಸರ್ವತೋಮುಖ ಅಭಿವೃದ್ಧಿಗೆ ಪೂರಕ ವಾದ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲಿದ್ದು, ರೈತರು ನೆಮ್ಮದಿಯ ಜೀವನ ನಡೆಸಲು ಬೇಕಾಗುವ ಸೌಲಭ್ಯ ಹಾಗೂ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

110 ಕೋಟಿ ರೂ. ವೆಚ್ಚದಲ್ಲಿ ಹೋಬಳಿಯ ಕೆರೆಗಳನ್ನು ತುಂಬಿಸುವ ಯೋಜನೆಗೆ 30 ಕೋಟಿ ಅನುದಾನ ಬಿಡುಗಡೆಯಾಗಿದೆ. ರೈತರ ಹಿತದೃಷ್ಟಿಯಿಂದ ಕೆಆರ್‌ಎಸ್‌ ಸಲಹಾ ಸಮಿತಿ ಸಭೆ ಕಾಯದೆ ಮುಖ್ಯಮಂತ್ರಿಗಳ ಆದೇಶದಂತೆ ನಾಲೆಗಳಿಗೆ ಕೆಆರ್‌ಎಸ್‌ನಿಂದ ಕಳೆದ 15 ದಿನಗಳ ಹಿಂದೆಯೇ ನೀರು ಹರಿಸಲಾಗಿದ್ದು, ಇದೇ 28ರಿಂದ ಹೇಮಾವತಿ ವ್ಯಾಪ್ತಿಯ ಕೆರೆ-ಕಟ್ಟೆಗಳನ್ನು ತುಂಬಿಸಲಾಗುವುದು ಎಂದರು.

ಸದ್ಯದಲ್ಲೇ ಜಿಲ್ಲೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸಿ ದುದ್ದ ಹೋಬಳಿಯ ಕರೆಗೆ ನೀರು ತುಂಬಿಸುವ ಯೋಜನೆಗೆ ಶಂಕು ಸ್ಥಾಪನೆ, ಈ ಭಾಗದ ರಸ್ತೆಗಳ ದುರಸ್ತಿ ಹಾಗೂ ಅಭಿವೃದ್ಧಿ ಸೇರಿದಂತೆ ವಿಶೇಷ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುವುದು. ಅಲ್ಲದೇ, ಮಂಡ್ಯ ಜಿಲ್ಲೆಯಲ್ಲಿ ನಾಟಿ ಕಾರ್ಯಕ್ಕೆ ಚಾಲನೆ ನೀಡಲು ಸ್ವಯಂ ಮುಖ್ಯಮಂತ್ರಿಗಳೇ ಇಚ್ಛಿಸಿರುವಂತೆ ವಿ.ಸಿ.ಫಾರ್ಮ್‍ನಲ್ಲಿ ಅವರಿಂದ ನಾಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದರು.

ನಂತರ ಸಾರ್ವಜನಿಕರ ಅರ್ಜಿಗಳನ್ನು ಆಲಿಸಿ ಮಾತನಾಡಿದ ಸಚಿವರು, ಬಹಳಷ್ಟು ಜನರು ಇಂದಿನ ಜನ ಸಂಪರ್ಕ ಸಭೆಯಲ್ಲಿ ಸಮಸ್ಯೆಗಳ ಬಗ್ಗೆ ಅರ್ಜಿಗಳನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ ಆಯೋ ಜಿಸಲಾಗುವುದು. ಅಲ್ಲಿಯೂ ಇದೇ ಸಮಸ್ಯೆ ಗಳು ಮರುಕಳಿಸಿದರೆ, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳ ಲಾಗುವುದು. ಇಂದು ಸ್ವೀಕರಿಸಿರುವ ಸಮಸ್ಯೆಗಳಿಗೆ ವಾರದೊಳಗೆ ಅಧಿಕಾರಿ ಗಳು ಪರಿಹಾರ ಕಲ್ಪಿಸಬೇಕು. ಇಲ್ಲಿ ವಿಳಂಬಕ್ಕೆ ಅವಕಾಶವಿಲ್ಲ. ಅಧಿಕಾರಿಗಳು ತ್ವರಿತವಾಗಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಬೇಕು ಎಂದರು. ಶಿವಳ್ಳಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಯಿಂದ ಗ್ರಾಮಸ್ಥರಿಗೆ ಸಕಾಲದಲ್ಲಿ ವೈದ್ಯಕೀಯ ಸೇವೆ ಸಿಗದಿರುವ ಬಗ್ಗೆ ದೂರುಗಳು ಕೇಳಿ ಬಂದಿವೆ. ಈ ಭಾಗದ ಜನರಿಗೆ ಆರೋಗ್ಯ ಸೌಲಭ್ಯ ಒದಗಿಸಲು, ಶೀಘ್ರ ಆಸ್ಪತ್ರೆಗೆ ವೈದ್ಯರನ್ನು ನೇಮಿಸಲಾಗುವುದು. ಜಿಲ್ಲೆಯಲ್ಲಿ ನರೇಗಾ ಕಾರ್ಯಕ್ರಮ ಅನುಷ್ಠಾನಗೊಳ್ಳಬೇಕು. ಕೂಲಿ ಸರಿಯಾದ ಸಮಯಕ್ಕೆ ಜನರಿಗೆ ಸಿಗುವಂತಾಗಬೇಕು. ಅಧಿಕಾರಿಗಳು ಜನಸಾಮಾನ್ಯರ ಅಹವಾಲು ಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕು. ಕ್ಷೇತ್ರ ವ್ಯಾಪ್ತಿಯ ದುದ್ದ, ಶಿವಳ್ಳಿ ಗ್ರಾಮಗಳಲ್ಲಿ ಕೆಎಸ್ ಆರ್‍ಟಿಸಿ ಬಸ್ ನಿಲ್ದಾಣ ಮಾಡಲಾಗುವುದು. ದುದ್ದ ಹೋಬಳಿ ವ್ಯಾಪ್ತಿಯಲ್ಲಿ ಹೊಸದಾಗಿ 2 ವಿದ್ಯುತ್ ಸಬ್‍ಸ್ಟೇಷನ್ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ದುದ್ದ ಜನಸಂಪರ್ಕ ಸಭೆಯಲ್ಲಿ ರಸ್ತೆ ದುರಸ್ಥಿ, ಒತ್ತುವರಿ, ವಿದ್ಯುತ್‍ಚ್ಛಕ್ತಿ, ಮೂಲ ಭೂತ ಸೌಕರ್ಯ, ಬಸ್ ಸಂಪರ್ಕ, ಕುಡಿಯುವ ನೀರು ಸೇರಿದಂತೆ ಹಲವು ಸಮಸ್ಯೆಗಳ ಪರಿಹಾರಕ್ಕೆ ಸಾರ್ವಜನಿಕರು ಸಣ್ಣ ನೀರಾವರಿ ಸಚಿವರಿಗೆ ಅರ್ಜಿ ಸಲ್ಲಿಸಿದರು. ಈ ವೇಳೆ ಜಿಪಂರಾದ ಸದಸ್ಯೆ ಸುಧಾ, ಅನುಪಮ, ದುದ್ದ ಗ್ರಾಪಂ ಅಧ್ಯಕ್ಷ ಮಹದೇವಪ್ಪ, ಮಾಜಿ ಶಾಸಕ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

Translate »