ಅರಮನೆ ಆವರಣದಲ್ಲಿ ಪ್ರಧಾನಿ ಮೋದಿಯೊಂದಿಗೆ ಯೋಗ ಪ್ರದರ್ಶನಕ್ಕೆ 12 ಸಾವಿರ ಮಂದಿ ನೋಂದಣ
ಮೈಸೂರು

ಅರಮನೆ ಆವರಣದಲ್ಲಿ ಪ್ರಧಾನಿ ಮೋದಿಯೊಂದಿಗೆ ಯೋಗ ಪ್ರದರ್ಶನಕ್ಕೆ 12 ಸಾವಿರ ಮಂದಿ ನೋಂದಣ

June 15, 2022

ಒಟ್ಟು ೧೫ ಸಾವಿರ ಮಂದಿಗೆ ಅವಕಾಶ

ಯೋಗಪಟುಗಳು ೨ ಡೋಸ್ ಲಸಿಕೆ ಪಡೆದಿರಬೇಕು, ಇಲ್ಲವೆ ೭೨ ಗಂಟೆ ಮುಂಚಿನ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು

ಎಲ್ಲರಿಗೂ ಉಪಾಹಾರ, ಮ್ಯಾಟ್, ಮೊಬೈಲ್ ಪೌಚ್, ಶೂ ಬ್ಯಾಗ್ ವ್ಯವಸ್ಥೆ

ಸುಸೂತ್ರವಾಗಿ ಕಾರ್ಯಕ್ರಮ ನಡೆಸಲು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ

ಮೈಸೂರು, ಜೂ.೧೪(ಎಂಕೆ)- ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಆವರಣದಲ್ಲಿ ‘ಮಾನವೀಯತೆ ಗಾಗಿ ಯೋಗ’(ಙಔಉಂ ಈಔಖ ಊUಒಂಓIಖಿಙ) ಶೀರ್ಷಿಕೆಯಡಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಜೂ.೨೧ರಂದು ವಿಶ್ವ ಯೋಗ ದಿನಾಚರಣೆ ನಡೆಯಲಿದೆ. ೧೫ ಸಾವಿರ ಮಂದಿ ಪಾಲ್ಗೊಳ್ಳಲಿದ್ದು, ಈಗಾಗಲೇ ೧೨ ಸಾವಿರ ಜನರ ನೋಂದಣ ಯಾಗಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಜೂ.೨೧ರ ವಿಶ್ವ ಯೋಗ ದಿನಾಚರಣೆ ಅಂಗ ವಾಗಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿ ಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆ ಯಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದ್ದು, ಉಪಾಧ್ಯಕ್ಷರಾಗಿ ಆರೋಗ್ಯ ಸಚಿವರು ಹಾಗೂ ೨೧ ಮಂದಿ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಿತಿಯಲ್ಲಿದ್ದಾರೆ ಎಂದು ಮಾಹಿತಿ ನೀಡಿದರು.

ಸುಮಾರು ೧೦ ಲಕ್ಷ ಚದರ ಅಡಿ ವಿಸ್ತೀರ್ಣದ ಅರಮನೆ ಆವರಣದಲ್ಲಿ ೧೫ ಸಾವಿರ ಮಂದಿ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದು, ಎಲ್ಲಾ ಬಗೆಯ ಜನರಿಗೂ ಅವಕಾಶ ನೀಡಲಾಗಿದೆ. ೧೭ ಬ್ಲಾಕ್‌ಗಳನ್ನು ಮಾಡಲಿದ್ದು, ೧೫ ಬ್ಲಾಕ್‌ಗಳಲ್ಲಿ ಜನರ ಪ್ರವೇಶಕ್ಕೆ ಅವಕಾಶವಿದ್ದು, ೨ ಬ್ಲಾಕ್‌ಗಳನ್ನು ಮೀಸ ಲಿಡಲಾಗುವುದು. ೧೭೦ ಮೊಬೈಲ್ ಶೌಚಾಲಯ ಗಳ ವ್ಯವಸ್ಥೆ ಮಾಡಲಿದ್ದು, ಕೇಂದ್ರ ಸರ್ಕಾರದ ಸೂಚನೆಯಂತೆ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡ ಲಾಗುವುದು ಎಂದರು.

ಕೇAದ್ರ ಸರ್ಕಾರದಿಂದಲೇ ಕಾರ್ಯಕ್ರಮ ಆಯೋಜನೆ: ಯೋಗ ಕಾರ್ಯಕ್ರಮದ ಕುರಿತಂತೆ ಕೇಂದ್ರ ಸರ್ಕಾರದ ಆಯುಷ್ ಇಲಾಖೆ ಅಧಿಕಾರಿಗಳು ಎರಡ್ಮೂರು ಬಾರಿ ಸಭೆ ನಡೆಸಿದ್ದಾರೆ. ಮುಖ್ಯಮಂತ್ರಿಗಳು, ಸಚಿವ ಡಾ.ಸುಧಾಕರ್ ಅಧ್ಯಕ್ಷತೆಯಲ್ಲಿ ವರ್ಚು್ಯವಲ್ ಸಭೆ ನಡೆಸಿ, ಮೈಸೂರಲ್ಲಿ ಯೋಗ ದಿನಾಚರಣೆ ಸಂಬAಧ ಕೈಗೊಳ್ಳುತ್ತಿರುವ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ಕೇಂದ್ರ ಸರ್ಕಾರವೇ ಸಂಪೂರ್ಣ ಕಾರ್ಯಕ್ರಮದ ಆಯೋಜನೆ ಮಾಡಲಿದ್ದು, ಪಾಲ್ಗೊಳ್ಳುವ ೧೫ ಸಾವಿರ ಜನರಿಗೆ ಮ್ಯಾಟ್, ಮೊಬೈಲ್ ಪೌಚ್, ಶೂ ಬ್ಯಾಗ್ ವಿತರಣೆ ಸೇರಿದಂತೆ ಆಹ್ವಾನ ಪತ್ರಿಕೆಯನ್ನು ಕೇಂದ್ರ ಸರ್ಕಾರವೇ ಸಿದ್ದಪಡಿಸ ಲಿದೆ. ವೇದಿಕೆ ಸಿದ್ದಪಡಿಸಿದ್ದು, ಭದ್ರತೆ ಸೇರಿದಂತೆ ಉಳಿದಂತಹ ಜವಾಬ್ದಾರಿಗಳನ್ನು ನಿರ್ವಹಿಸಲು ಜಿಲ್ಲಾಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದರು.

೧೨ ಸಾವಿರ ಜನರ ನೋಂದಣ : ಈಗಾಗಲೇ ೧೨ ಸಾವಿರ ಜನರ ನೋಂದಣ ಯಾಗಿದ್ದು, ಕಡ್ಡಾಯವಾಗಿ ಕೊರೊನಾ ಲಸಿಕೆ ೨ ಡೋಸ್‌ಗಳನ್ನು ತೆಗೆದುಕೊಂಡಿರಬೇಕು. ಇಲ್ಲವಾದರೆ ೭೨ ಗಂಟೆ ಮುಂಚಿನ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಕೇಂದ್ರ ಸರ್ಕಾರದ ನಿರ್ದೇಶನವನ್ನು ರಾಜ್ಯ ಸರ್ಕಾರ ಪಾಲನೆ ಮಾಡಲಿದೆ. ಯೋಗದಲ್ಲಿ ಪಾಲ್ಗೊಳ್ಳುವವರಿಗೆ ರಾಜ್ಯ ಸರ್ಕಾರದ ವತಿಯಿಂದ ತಿಂಡಿ ವ್ಯವಸ್ಥೆ ಮಾಡಲಾಗುತ್ತದೆ. ಬೆಳಗ್ಗೆ ೫.೩೦ ಗಂಟೆಗೆ ಎಲ್ಲಾ ಗೇಟ್‌ಗಳು ಬಂದ್ ಆಗಲಿದೆ. ಜೂನ್ ೧೯ರಂದು ಅಂತಿಮ ಹಂತದ ತಾಲೀಮು ನಡೆಸ ಲಾಗುತ್ತದೆ. ಭದ್ರತೆ ಸಂಬAಧ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ ಎಂದರು.

ಹೆಮ್ಮೆಯ ವಿಷಯ: ಆರೋಗ್ಯ ಸಚಿವ ಡಾ.ಸುಧಾಕರ್ ಮಾತನಾಡಿ, ವಿಶ್ವ ಯೋಗ ದಿನದಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರು ವುದು ಹೆಮ್ಮೆಯ ವಿಷಯ. ಕಾರ್ಯಕ್ರಮದ ಸಿದ್ಧತೆಗಳ ಪರಾಮರ್ಶೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಡಲಿದ್ದಾರೆ. ಯೋಗ ಕಾರ್ಯಕ್ರಮಕ್ಕೂ ಮುನ್ನ ಮತ್ತು ನಂತರ ಸ್ವಚ್ಚತೆ ಕಾಪಾಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಯೋಗವನ್ನು ಇಡೀ ವಿಶ್ವವೇ ಒಪ್ಪಿದೆ. ಯೋಗ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲ, ಮಾನಸಿಕ ಆರೋಗ್ಯಕ್ಕೂ ಸಹಕಾರಿಯಾಗಿದೆ. ಯೋಗ ದೈಹಿಕ ಆರೋಗ್ಯ ಮಾತ್ರವಲ್ಲ, ಮಾನಸಿಕ ಆರೋಗ್ಯಕ್ಕೂ ಸಹಕಾರಿ. ಈ ಕಾರ್ಯಕ್ರಮಕ್ಕೆ ‘ಮಾನವತ್ವವನ್ನು ಉಳಿಸುವ’ ಶೀರ್ಷಿಕೆಯನ್ನು ಕೊಟ್ಟಿರುವುದು ಸರಿಯಾಗಿದೆ. ವಿಶ್ವ ಯೋಗ ದಿನಾಚರಣೆ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯವಿದೆ ಎಂದರು.
ಶಾಸಕ ಎಸ್.ಎ.ರಾಮದಾಸ್, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಎಸ್‌ಪಿ ಚೇತನ್, ಪಾಲಿಕೆ ಆಯುಕ್ತ ಲಕ್ಷಿ÷್ಮಕಾಂತ್ ರೆಡ್ಡಿ, ಜಿಪಂ ಸಿಇಒ ಪೂಣ ðಮಾ, ಅಪರ ಜಿಲ್ಲಾಧಿಕಾರಿ ಮಂಜುನಾಥ್‌ಸ್ವಾಮಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Translate »