13 ಮೆಟ್ರಿಕ್ ಟನ್ ಅಕ್ರಮ ಮರಳು ವಶ

ಚಾಮರಾಜನಗರ, ಜ.10- ಕೊಳ್ಳೇಗಾಲ ತಾಲೂಕಿನ ಕಾವೇರಿ ನದಿ ಪಾತ್ರಕ್ಕೆ ಹೊಂದಿಕೊಂಡಿರುವ ಧನಗೆರೆ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ 13 ಮೆಟ್ರಿಕ್ ಟನ್ ಮರಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಜಿಲ್ಲಾಧಿಕಾರಿಗಳ ಕಛೇರಿಗೆ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಗಣಿ ಇಲಾಖೆ ಉಪನಿರ್ದೇಶಕಿ ಡಾ.ಲಕ್ಷಮ್ಮ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದಾಗ ಒಂದು ಕಡೆ 5 ಮೆಟ್ರಿಕ್ ಟನ್ ಮರಳು ಮತ್ತೊಂದು ಕಡೆ 8 ಮೆಟ್ರಿಕ್ ಟನ್ ಮರಳು ಅಕ್ರಮ ದಾಸ್ತಾನು ಮಾಡಲಾಗಿದ್ದುದು ಕಂಡು ಬಂದು ಅದನ್ನು ಅಧಿಕಾರಿಗಳು ಜಪ್ತಿ ಮಾಡಿ ವಶಕ್ಕೆ ಪಡೆದಿದ್ದಾರೆ. ದಾಳಿಯಲ್ಲಿ ಭೂ ವಿಜ್ಞಾನಿಗಳಾದ ಸುಬ್ರಹ್ಮಣ್ಯ, ನಾಗರಾಜು, ಗ್ರಾಮ ಲೆಕ್ಕಾಧಿಕಾರಿ ನಾಗೇಶ್ ಇತರರು ಇದ್ದರು.