ದೇಶಾದ್ಯಂತ 24 ಗಂಟೆಗಳಲ್ಲಿ 14,821 ಹೊಸ ಪಾಸಿಟಿವ್ ಪ್ರಕರಣ: 445 ಸೋಂಕಿತರ ಸಾವು
ಮೈಸೂರು

ದೇಶಾದ್ಯಂತ 24 ಗಂಟೆಗಳಲ್ಲಿ 14,821 ಹೊಸ ಪಾಸಿಟಿವ್ ಪ್ರಕರಣ: 445 ಸೋಂಕಿತರ ಸಾವು

June 23, 2020

ನವದೆಹಲಿ: ಮಾರಕ ಕೊರೊನಾ ವೈರಸ್ ಅಬ್ಬರ ದೇಶಾದ್ಯಂತ ಮುಂದು ವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶ ದಲ್ಲಿ ಮತ್ತೆ 14,821 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಆ ಮೂಲಕ ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 4,25,282ಕ್ಕೆ ಏರಿಕೆಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ 3870, ದೆಹಲಿಯಲ್ಲಿ 3 ಸಾವಿರ, ತಮಿಳುನಾಡಿನಲ್ಲಿ 2532, ಗುಜರಾತ್‍ನಲ್ಲಿ 580 ಮತ್ತು ಕರ್ನಾಟಕದಲ್ಲಿ 702 (ಎರಡು ದಿನ) ಹೊಸ ಪ್ರಕರಣಗಳು ದಾಖಲಾಗಿವೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ನಿನ್ನೆ ಒಂದೇ ದಿನ ದೇಶಾದ್ಯಂತ 445 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾ ದವರ ಸಂಖ್ಯೆ 13, 699ಕ್ಕೆ ಏರಿಕೆಯಾಗಿದೆ. ಇನ್ನು ದೇಶಾದ್ಯಂತ ನಿನ್ನೆ 9440 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ದೇಶದಲ್ಲಿ ಗುಣಮುಖರಾದ ಒಟ್ಟಾರೆ ಸೋಂಕಿತರ ಸಂಖ್ಯೆ 2,37,196ಕ್ಕೆ ಏರಿಕೆಯಾಗಿದೆ. ಅಲ್ಲದೆ 174,387 ಸಕ್ರಿಯ ಪ್ರಕರಣಗಳಿದ್ದು, ದೇಶಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Translate »