ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳ; ಹಳೆ ಪಿಂಚಣಿ ಜಾರಿ ಸಂಬಂಧ ಉನ್ನತ ಸಮಿತಿ ರಚನೆ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಅಂತ್ಯ
News

ಮಧ್ಯಂತರ ಪರಿಹಾರವಾಗಿ ಶೇ.17ರಷ್ಟು ವೇತನ ಹೆಚ್ಚಳ; ಹಳೆ ಪಿಂಚಣಿ ಜಾರಿ ಸಂಬಂಧ ಉನ್ನತ ಸಮಿತಿ ರಚನೆ ರಾಜ್ಯ ಸರ್ಕಾರಿ ನೌಕರರ ಮುಷ್ಕರ ಅಂತ್ಯ

March 2, 2023

ಬೆಂಗಳೂರು, ಮಾ.1(ಕೆಎಂಶಿ)- ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರ ವಾಗಿ ಶೇಕಡ 17ರಷ್ಟು ವೇತನ ಹೆಚ್ಚಳ ಮಾಡಿ, ಆದೇಶ ಹೊರಡಿಸಲಾಗಿದೆ.
ಸರ್ಕಾರಿ ನೌಕರರ ಮುಷ್ಕರಕ್ಕೆ ತಲೆಬಾಗಿದ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ನೀಡಿದ್ದಲ್ಲದೆ, ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡುವ ಸಂಬಂಧ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ. ತಮ್ಮ ಬೇಡಿಕೆಗಳಿಗೆ ಸರ್ಕಾರ ಮಣಿಯುತ್ತಿದ್ದಂತೆ ನೌಕರರು ಮುಷ್ಕರವನ್ನು ಹಿಂದಕ್ಕೆ ಪಡೆದು, ತಕ್ಷಣ ಕೆಲಸಕ್ಕೆ ಹಾಜ ರಾಗುವ ತೀರ್ಮಾನ ಪ್ರಕಟಿಸಿದರು. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ಸರ್ಕಾರಿ ನಿವಾಸದಲ್ಲಿ ಮುಷ್ಕರ ನಿರತ ಸಂಘದ ಪದಾಧಿಕಾರಿಗಳ ಜೊತೆ ಸುದೀರ್ಘ ಸಮಾಲೋಚನೆ ನಡೆಸಿ, ಎರಡು ಬೇಡಿಕೆಗಳನ್ನು ಈಡೇರಿಸುವ ತೀರ್ಮಾನ ಪ್ರಕಟಿಸು ತ್ತಿದ್ದಂತೆ ನೌಕರರು ಮುಷ್ಕರದಿಂದ ಹಿಂದೆ ಸರಿದರು. ಮಾತು ಕತೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ನೌಕರರಿಗೆ ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧ ರಿಸಲಾಗಿದ್ದು, ತಕ್ಷಣದಿಂದಲೇ ಈ ಆದೇಶ ಹೊರಡಿಸಲಾಗುವುದು.

ಏಳನೇ ವೇತನ ಆಯೋಗವನ್ನು ಈಗಾ ಗಲೇ ರಚಿಸಲಾಗಿದೆ. ಅವರಿಂದ ವರದಿ ಪಡೆದು, ಶೀಘ್ರದಲ್ಲೇ ವೇತನ ಪರಿಷ್ಕರ ಣೆಗೆ ಪ್ರಯತ್ನ ನಡೆಯುತ್ತಿದೆ. ಈಗ ಮಧ್ಯಂತರ ಪರಿಹಾರ ಘೋಷಿಸಲು ತೀರ್ಮಾನ ಕೈಗೊಂಡಿದ್ದೇವೆ. ಹಳೆಯ ಪಿಂಚಣಿ ಪದ್ಧತಿ ಮರು ಜಾರಿಗೊಳಿಸಬೇಕೆಂಬ ಬೇಡಿಕೆ ಯನ್ನು ನೌಕರರ ಸಂಘ ಮುಂದಿಟ್ಟಿದ್ದು, ಈ ಕುರಿತು ಅಧ್ಯಯನ ನಡೆಸಲು ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸ ಲಾಗುವುದು. ವಿವಿಧ ರಾಜ್ಯಗಳಲ್ಲಿ ಜಾರಿ ಯಲ್ಲಿರುವ ಹಳೆಯ ಪಿಂಚಣಿ ಪದ್ಧತಿ ಕುರಿತು ಸಮಿತಿ ಅಧ್ಯಯನ ನಡೆಸಿ ವರದಿ ನೀಡಲಿದೆ. ನಂತರ ಮುಂದಿನ ಕ್ರಮ ಜರುಗಿಸಲಾಗುವುದು. ಎರಡು ವಿಷಯ ಗಳಲ್ಲಿ ಸರ್ಕಾರ ಮತ್ತು ನೌಕರರ ಸಂಘ ಒಪ್ಪಂದಕ್ಕೆ ಬಂದಿವೆ. ಈ ಒಪ್ಪಂದದ ಅನ್ವಯ ಆದೇಶ ಹೊರಬೀಳಲಿದೆ ಎಂದರು.

ಸರ್ಕಾರದ ನಿರ್ಧಾರ ಘೋಷಣೆಯಾ ಗುತ್ತಿದ್ದಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸುದ್ದಿ ಗಾರರೊಂದಿಗೆ
ಮಾತನಾಡಿ, ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲು ಸರ್ಕಾರ ಆದೇಶ ಹೊರಡಿಸಿರುವುದರಿಂದ ಮುಷ್ಕರ ಅಂತ್ಯಗೊಳಿಸಿದ್ದೇವೆ ಎಂದು ಪ್ರಕಟಿಸಿದರು.

ಶೇಕಡ 40ರಷ್ಟು ವೇತನ ಹೆಚ್ಚಳ ಸೇರಿದಂತೆ ಎಲ್ಲಾ ಬೇಡಿಕೆಗಳು ಈಡೇರಬೇಕು. ಈಗ ತಾತ್ಕಾಲಿಕವಾಗಿ ಮುಷ್ಕರ ಸ್ಥಗಿತವಾಗಿದೆ. ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ, ಮತ್ತೆ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Translate »