ರಾಜ್ಯಾದ್ಯಂತ ಆಂಗ್ಲ ಮಾಧ್ಯಮದ 175 ಪಬ್ಲಿಕ್ ಶಾಲೆ ಆರಂಭ
ಮೈಸೂರು

ರಾಜ್ಯಾದ್ಯಂತ ಆಂಗ್ಲ ಮಾಧ್ಯಮದ 175 ಪಬ್ಲಿಕ್ ಶಾಲೆ ಆರಂಭ

July 18, 2018

ಬೆಂಗಳೂರು: ರಾಜ್ಯಾದ್ಯಂತ 175 ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಇಂದಿಲ್ಲಿ ತಿಳಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಆಂಗ್ಲ ಮಾಧ್ಯಮ ಕಲಿಕೆಗೆ ಹೆಚ್ಚು ಆಸಕ್ತಿ ತೋರುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಮೂಲಸೌಕರ್ಯ ಒಳಗೊಂಡ ಶಾಲೆಗಳನ್ನು ತೆರೆಯುವುದಾಗಿ ಹೇಳಿ ದ್ದಾರೆ. ಒಂದೇ ಸೂರಿ ನಡಿ 1 ರಿಂದ 10ನೇ ತರಗತಿವರೆಗೆ ಖಾಸಗಿ ಶಾಲೆಗಳ ಶಿಕ್ಷಣ ಗುಣ ಮಟ್ಟದಲ್ಲೇ ನಮ್ಮ ಪಬ್ಲಿಕ್ ಶಾಲೆಗಳು ಸೌಲಭ್ಯ ಹೊಂದಿರುತ್ತವೆ. ಸರ್ಕಾರಿ ಶಾಲೆಗಳ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳೆಂದು ಭಾವಿಸಿ ಪಾಠ ಕಲಿಸಬೇಕು, ಜಾಗತೀ ಕರಣದ ಈ ಯುಗದಲ್ಲಿ ಸ್ಪರ್ಧೆ ಎದುರಿ ಸುವಂತೆ ಮಕ್ಕಳನ್ನು ಸಜ್ಜುಗೊಳಿಸಬೇಕು, ವಿದ್ಯಾರ್ಥಿಗಳಲ್ಲೂ ಸಕಾರಾತ್ಮಕ ಭಾವನೆ ಗಳನ್ನು ತುಂಬುವ ಮೂಲಕ ಉತ್ತಮ ರೀತಿಯಲ್ಲಿ ಅವರ ಭವಿಷ್ಯ ರೂಪಿಸಬೇಕು ಎಂದು ಹೇಳಿದರು.

ಎಲ್ಲಾ ಸರ್ಕಾರಿ ಶಾಲೆ ಗಳಿಗೆ ಸುಸಜ್ಜಿತ ಕಟ್ಟಡ, ಕಾಂಪೌಂಡ್, ಮೈದಾನ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಲು ಸುಮಾರು 5 ಕೋಟಿ ರೂ. ಅನುದಾನ ಬೇಕಾಗುತ್ತದೆ. ಇಷ್ಟೊಂದು ಪ್ರಮಾಣದ ಅನುದಾನ ಒದಗಿಸಲು ಸಾಧ್ಯವಾಗದು, ಸರ್ಕಾರಿ ಶಾಲೆಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿದರೆ ಖಾಸಗಿ ಶಾಲೆ ಗಳ ಜೊತೆ ಖಂಡಿತವಾಗಿ ಪೈಫೋಟಿ ನಡೆಸಬಹುದು ಎಂದರು.

ಸರ್ಕಾರಿ ಶಾಲೆ ಮಕ್ಕಳೂ ಪ್ರತಿಭಾವಂತರಾಗಿದ್ದು, ಅವರ ಮನಸ್ಸಿನಲ್ಲಿ ದೈವತ್ವ ತುಂಬಬೇಕೇ ಹೊರತು ದೆವ್ವ ತುಂಬಬಾರದು, ಸರ್ಕಾರಿ ಶಾಲಾ ಶಿಕ್ಷಕರು ಮಕ್ಕಳನ್ನು ಸರಿಯಾಗಿ ರೂಪಿಸಿದಾಗ ಮಾತ್ರ ಓದಿನಲ್ಲಿ ಹಿಂದುಳಿದಿರುವ ಸರ್ಕಾರಿ ಶಾಲೆ ಮಕ್ಕಳು ಮುಂದೆ ಬರಲು ಸಾಧ್ಯವಾಗುತ್ತದೆ ಎಂದರು.

ಸರ್ಕಾರಿ ಕನ್ನಡ ಮತ್ತು ತಮಿಳು ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡಲು ಶೇ.25ರಷ್ಟು ಹಣವನ್ನು ನಮ್ಮ ಇಲಾಖೆಯಿಂದ ನೀಡಲಾ ಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡುವ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರೊಂದಿಗೆ ಚರ್ಚಿಸಿ, ಸದ್ಯದಲ್ಲೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗೆ ಬಸ್‍ಪಾಸ್ ನೀಡುವ ವಿಚಾರದಲ್ಲಿ ಸ್ವಲ್ಪ ತಡವಾಗಿದೆ. ಆದರೂ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ವಿತರಿಸಲಾಗುವುದು ಎಂದು ಹೇಳಿದರು. ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಸದ್ಯದಲ್ಲೇ ಪ್ರಾರಂಭವಾಗಲಿದೆ, ಇನ್ನೆರಡು ವಾರದಲ್ಲಿ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ಕೌನ್ಸಿಲಿಂಗ್ ನಡೆಯಲಿದೆ ಎಂದು ಸಚಿವ ಮಹೇಶ್ ತಿಳಿಸಿದರು.

Translate »