ಮೇಲುಕೋಟೆಯಲ್ಲಿ 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಪಾಂಡವಪುರ, ಜ.12- ತಾಲೂಕಿನ ಮೇಲು ಕೋಟೆಯಲ್ಲಿ ಜ.31 ಹಾಗೂ ಫೆ.1ರಂದು 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಶಾಸಕ ಸಿ.ಎಸ್.ಪುಟ್ಟರಾಜು ತಿಳಿಸಿದರು.

ಪಟ್ಟಣದ ತಾಲೂಕು ಕನ್ನಡ ಸಾಹಿತ್ಯ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇ ಳನದ ಅಂಗವಾಗಿ ಪರಿಷತ್‍ನ ಪದಾಧಿ ಕಾರಿಗಳು ಹಾಗೂ ಸಾಹಿತ್ಯಾಭಿಮಾನಿಗಳ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ್ ಉದ್ಘಾಟಿಸ ಲಿದ್ದಾರೆ. 2 ದಿನಗಳ ಕಾರ್ಯಕ್ರಮದಲ್ಲಿ ಒಂದು ದಿನ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮತ್ತೊಂದು ದಿನ ಮೈಸೂರಿನ ಸುತ್ತೂರು ಕ್ಷೇತ್ರದ ಶ್ರೀಶಿವರಾತ್ರೀಶ್ವರ ದೇಶೀಕೇಂದ್ರ ಸ್ವಾಮೀಜಿಯವರ ಸಾನಿಧ್ಯದಲ್ಲಿ ಕಾರ್ಯ ಕ್ರಮ ನಡೆಸಬೇಕು ಎಂಬುದಾಗಿ ತೀರ್ಮಾನಿಸಲಾಗಿದೆ ಎಂದರು.

ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ಸಾಹಿತಿ ಎಚ್.ಎಸ್.ವೆಂಕಟೇಶ್ ಮೂರ್ತಿ ಅವರಿಗೂ ಮೇಲುಕೋಟೆಗೂ ಅವಿನಾಭಾವ ಸಂಬಂಧವಿದೆ. ಜತೆಗೆ ಅವರು ಪುತೀನ ಟ್ರಸ್ಟ್‍ನ ಅಧ್ಯಕ್ಷರಾಗಿದ್ದಾರೆ. ಹಾಗಾಗಿ ಅವರನ್ನು ಸಮ್ಮೇಳನಕ್ಕೆ ಆಹ್ವಾನಿಸಿ ಅವರಿಗೆ ತವರಿನ ಸನ್ಮಾನ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರನ್ನಾಗಿ ಸಾಹಿತಿ, ವಿಮರ್ಶಕ ಡಾ.ನರಹಳ್ಳಿ ಬಾಲಸುಬ್ರಮಣ್ಯ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡ ಲಾಗಿದೆ ಎಂದರು.

ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಮಾತ ನಾಡಿ, ತಾಲೂಕಿನ ಕಸಾಪ ಅಧ್ಯಕ್ಷರಾಗಿ ನಿವೃತ್ತ ಶಿಕ್ಷಕ ವೆಂಕಟರಾಮೇಗೌಡರನ್ನು ನೇಮಿಸಲಾಗಿದೆ. ಈ ಹಿಂದೆ ಅಧ್ಯಕ್ಷರಾಗಿ ಕೆಲಸ ಮಾಡಿದ ಎಚ್.ಎಸ್.ಮಂಜುನಾಥ್ ಅವರನ್ನು ಜಿಲ್ಲಾ ಉಪಾಧ್ಯಕ್ಷರನ್ನಾಗಿ ಹಾಗೂ ಹಿರೇಮರಳಿ ಚನ್ನೇಗೌಡರನ್ನು ಜಿಲ್ಲಾ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ ಎಂದರು.

ಈ ವೇಳೆ ತಾಲೂಕು ಕಸಾಪ ಅಧ್ಯಕ್ಷ ವೆಂಕಟರಾಮೇಗೌಡ, ಜಿಲ್ಲಾ ಗೌ.ಕಾರ್ಯ ದರ್ಶಿ ಎಂ.ಬಿ.ರಮೇಶ್, ಕೋಶಾಧ್ಯಕ್ಷ ಎಂ.ವೈ.ಶಿವರಾಮು, ಮಾಜಿ ಅಧ್ಯಕ್ಷರಾದ ಚಲುವೇಗೌಡ, ಪ್ರೊ.ಬಿ.ನಾರಾಯಣ ಗೌಡ, ಚನ್ನೇಗೌಡ, ಮಂಜುನಾಥ್, ಸಾಹಿತಿ ಚಿಕ್ಕಮರಳಿ ಬೋರೇಗೌಡ, ಉಪನ್ಯಾಸಕ ರಮೇಶ್ ಸೇರಿದಂತೆ ಹಲವರಿದ್ದರು.