5.08 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ, 15,685 ಮಂದಿ ಸಾವು
ನವದೆಹಲಿ, ಜೂ.27- ದೇಶದಲ್ಲಿ ಕೊರೊನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ ದಾಖಲೆಯ 18,552 ಮಂದಿಯಲ್ಲಿ ವೈರಸ್ ಪತ್ತೆ ಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ. ನಿನ್ನೆ ಒಂದೇ ದಿನ ವಿವಿಧ ರಾಜ್ಯಗಳಲ್ಲಿ ಒಟ್ಟಾರೆ 18,552 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 508953ಕ್ಕೆ ಏರಿಕೆಯಾಗಿದೆ. ಇನ್ನು 24 ಗಂಟೆಗಳಲ್ಲಿ 384 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಒಟ್ಟು ಸಾವಿನ ಸಂಖ್ಯೆ 15685ಕ್ಕೆ ತಲುಪಿದೆ. ಇನ್ನು 508953 ಮಂದಿ ಸೋಂಕಿತರ ಪೈಕಿ ಈ ವರೆಗೂ 295881 ಮಂದಿ ಗುಣಮುಖರಾಗಿ, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಪ್ರಸ್ತುತ ಇನ್ನು ದೇಶದಲ್ಲಿ 197387 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ.

ಮೈಸೂರು