ಮಾಸಿಕ 2 ಸಾವಿರ ರೂ. ಸಂಕಷ್ಟ ಭತ್ಯೆ
News

ಮಾಸಿಕ 2 ಸಾವಿರ ರೂ. ಸಂಕಷ್ಟ ಭತ್ಯೆ

July 2, 2022

ಬೆಂಗಳೂರು, ಜು.1(ಕೆಎಂಶಿ)- ನಗರ ಸ್ಥಳೀಯ ಸಂಸ್ಥೆಗಳಲ್ಲಿ ದುಡಿಯು ತ್ತಿರುವ ಪೌರಕಾರ್ಮಿಕರಿಗೆ ಮಾಸಿಕ ಎರಡು ಸಾವಿರ ರೂ. ಸಂಕಷ್ಟ ಭತ್ಯೆ ನೀಡಲು ತೀರ್ಮಾನಿಸಿರುವ ರಾಜ್ಯ ಸಚಿವ ಸಂಪುಟ, ಪ್ರಭಾವಿಗಳು ಪ್ರತಿನಿಧಿ ಸುವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆ ಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುಮತಿ ನೀಡಿದೆ.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ, ಆರೋಗ್ಯ ಇಲಾಖೆಯಲ್ಲಿ 438 ವೈದ್ಯಾಧಿಕಾರಿ ಮತ್ತು ಇದೇ ಪ್ರಮಾಣದ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಅಲ್ಲದೆ 438 ದ್ವಿತೀಯ ದರ್ಜೆ ಸಹಾಯಕರ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸಂಪುಟ ಸಮ್ಮತಿಸಿರುವುದಲ್ಲದೆ, ಹಾವೇರಿ ಜಿಲ್ಲಾದ್ಯಂತ 300ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರು ಕಲ್ಪಿಸುವ 1322 ಕೋಟಿ ರೂ. ಯೋಜನೆಗೆ ಅನುಮತಿ ನೀಡಲಾಗಿದೆ ಎಂದರು.

ತಾವು ಪ್ರತಿನಿಧಿಸುವ ಕ್ಷೇತ್ರ ಚಿಕ್ಕನಾಯಕನಹಳ್ಳಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ತಿಪಟೂರು ಕ್ಷೇತ್ರದ 500ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರು ಕಲ್ಪಿಸಲು 550 ಕೋಟಿ ರೂ. ಯೋಜನೆಗೆ ಅನುಮೋದನೆ ದೊರೆತಿದೆ. ರಾಜ್ಯದಲ್ಲಿ 438 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಗಳಲ್ಲಿ `ನಮ್ಮ ಕ್ಲಿನಿಕ್’ ಅನ್ನು 155.77 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ಚಿತ್ರದುರ್ಗ ಮುರುಘಾ ಮಠದ ಆವರಣದಲ್ಲಿ 325 ಅಡಿ ಎತ್ತರದ ಬಸವೇ ಶ್ವರ ಕಂಚಿನ ಪುತ್ಥಳಿಯನ್ನು 30 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಈಗಾಗಲೇ 20 ಕೋಟಿ ರೂ. ನೀಡಿದ್ದು, ಮತ್ತೆ ಉಳಿದ ಹತ್ತು ಕೋಟಿ ರೂ. ಬಿಡುಗಡೆಗೆ ಅನುಮತಿ ನೀಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಮುಖ್ಯಮಂತ್ರಿ ಗಳ ಅಮೃತ್ ನಗರೋತ್ಥಾನ ಯೋಜನೆಯ 4ನೇ ಹಂತದ ಮಾರ್ಗಸೂಚಿಗಳಿಗೆ ಕೆಲವು ತಿದ್ದುಪಡಿ ತಂದು ಕಾಮಗಾರಿ ಕೈಗೆತ್ತಿಕೊಳ್ಳಲು ಸಂಪುಟ ಸಮ್ಮತಿಸಿದೆ. ಪಾಂಡವಪುರ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ನಿರಾಣಿ ಶುಗರ್ಸ್ ನಡುವಿನ ಗುತ್ತಿಗೆ ಒಪ್ಪಂದ 24.30 ಕೋಟಿಗಳ ನೋಂದಣಿ ಹಾಗೂ ಮುದ್ರಾಂಕ ಶುಲ್ಕ ಪಾವತಿಸಲು ಸಂಸ್ಥೆಯು ಸಾಲ
ಪಡೆಯಲು ಗ್ಯಾರಂಟಿ ನೀಡಿದೆ. ಶಿವಮೊಗ್ಗ ವಿಮಾನ ನಿಲ್ದಾಣದ ಅಭಿವೃದ್ಧಿಗೆ ಅವಶ್ಯವಿರುವ 65.22 ಕೋಟಿ ರೂ.ಗಳ ಹೆಚ್ಚುವರಿ ಅನುದಾನಕ್ಕೆ ಸಂಪುಟ ಸಮ್ಮತಿಸಿದೆ.

ದಾವಣಗೆರೆ ಕುಂದಾವರ ಗ್ರಾಮದಲ್ಲಿ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು 25 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಷ್ಟ್ರೋತ್ಥಾನ ಸಂಸ್ಥೆಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಇದೇ ಸಂದರ್ಭದಲ್ಲಿ ಸಮ್ಮತಿ ನೀಡಲಾಗಿದೆ ಎಂದರು. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು 80.49 ಕೋಟಿ ರೂ. ವೆಚ್ಚದಲ್ಲಿ 238 ಬಸ್‍ಗಳನ್ನು ಖರೀದಿ ಮಾಡಲು ಸಂಪುಟ ಸಮ್ಮತಿಸಿದೆ.

Translate »