೨೦೨೩ರ ವಿಧಾನಸಭಾ ಚುನಾವಣೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು
ಮೈಸೂರು

೨೦೨೩ರ ವಿಧಾನಸಭಾ ಚುನಾವಣೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

May 17, 2022

ಬೆಂಗಳೂರು, ಮೇ ೧೬- ೨೦೨೩ರ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಭರ್ಜರಿ ಗೆಲುವು ಸಾಧಿಸುತ್ತೇವೆಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳೇ ಮೈಸೂರು ಭಾಗದಲ್ಲಿ ಗೆಲುವು ಸಾಧಿಸು ವುದು ಸವಾಲಾಗಿದ್ದು, ಈ ನಿಟ್ಟಿನಲ್ಲಿ ಕೆಲಸ ಮಾಡು ತ್ತಿದ್ದೇವೆ. ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ. ೨೦೨೩ರ ಚುನಾವಣೆಗೆ ಮುಂಚಿತವಾಗಿ, ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವತ್ತ ಗಮನ ಹರಿಸುತ್ತಿದೆ. ಇತರೆ ಪಕ್ಷಗಳ
ನಾಯಕರನ್ನು ಸೇರ್ಪಡೆಗೊಳಿಸಲಾಗುತ್ತದೆ. ಪ್ರಮುಖವಾಗಿ ಪಕ್ಷವು ದುರ್ಬಲವಾಗಿರುವ ಪ್ರದೇಶಗಳಲ್ಲಿ ಇತರೆ ಪಕ್ಷಗಳ ನಾಯಕರನ್ನು ಬಿಜೆಪಿಗೆ ಸೇರ್ಪಡೆಗೊಳಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಒಂದು ಪಿತೂರಿ ಪಕ್ಷವಾಗಿ ಮಾರ್ಪಟ್ಟಿದೆ ಮತ್ತು ಸುಳ್ಳು ನಿರೂಪಣೆಯನ್ನು ನೀಡಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್‌ನ್ನು ಬೆಂಬಲಿಸುತ್ತಿರುವ ರಾಜ್ಯ ಗುತ್ತಿಗೆದಾರರ ಸಂಘವು ಕೆಲವು ಸದಸ್ಯರು ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆಂದು ತಿಳಿಸಿದ್ದಾರೆ.
ನಾವು ಎಲ್ಲದಕ್ಕೂ ಉತ್ತರ ನೀಡಬೇಕಾಗಿಲ್ಲ. ಈ ರೀತಿ ಮಾಡಿದರೆ ಸಮಸ್ಯೆ ದೊಡ್ಡದಾ ಗುತ್ತದೆ. ನಾವು ದೊಡ್ಡ ಗುರಿಯನ್ನು ಇಟ್ಟುಕೊಳ್ಳಬೇಕಿದ್ದು, ಈ ಮೂಲಕ ಜನಪರ ಕೆಲಸಗಳನ್ನು ಮಾಡುತ್ತಿದ್ದೇವೆ. ಉತ್ತರಪ್ರದೇಶ, ಗೋವಾ, ಮಣ ಪುರ ಹಾಗೂ ಉತ್ತರಾಖಂಡದಲ್ಲೂ ಇದೇ ತಂತ್ರವನ್ನು ಬಳಸಿದ್ದೆವು. ಸರ್ಕಾರ ಮತ್ತು ಪಕ್ಷ ಅಭಿವೃದ್ಧಿಯತ್ತ ಗಮನಹರಿಸುತ್ತಿದ್ದು, ಅಭಿವೃದ್ಧಿಯೇ ನಮ್ಮ ಗುರಿಯಾಗಿದೆ ಎಂದಿದ್ದಾರೆ.

ಸರ್ಕಾರ ಮತ್ತು ಮುಖ್ಯಮಂತ್ರಿ ಬೊಮ್ಮಾಯಿಯವರ ವರ್ಚಸ್ಸು ಉತ್ತಮವಾಗಿದೆ. ಸರ್ಕಾರ ಮತ್ತು ಮುಖ್ಯಮಂತ್ರಿಗಳ ಕೆಲಸಗಳ ಬಗ್ಗೆ ಜನರಿಗೆ ತಿಳಿಯುವಂತೆ ಮಾಡಬೇಕು. ಸರ್ಕಾರವು ರಕ್ಷಣಾತ್ಮಕವಾಗಿಲ್ಲ, ಆದರೆ ಅದು ಆಕ್ರಮಣಕಾರಿಯಾಗಿರಲು ಸಾಧ್ಯವಿಲ್ಲ. ಜನರಿಗಾಗಿ ಕೆಲಸ ಮಾಡಬೇಕು ಎಂದರು. ಇದೇ ವೇಳೆ ರಾಜ್ಯ ನಾಯಕತ್ವದಲ್ಲಿ ಯಾವುದೇ ಬದಲಾವಣೆಗಳಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಅವರು, ರಾಜ್ಯದಲ್ಲಿ ಕೆಲವೊಮ್ಮೆ ಭ್ರಷ್ಟಾಚಾರ, ಕೆಲವೊಮ್ಮೆ ನಾಯಕತ್ವ ಬದಲಾವಣೆ ಕುರಿತು ಊಹಾಪೋಹಗಳು ಶುರುವಾಗಿರುತ್ತದೆ. ಆದರೆ, ನಾಯಕತ್ವದಲ್ಲಿ ಯಾವುದೇ ಬದಲಾವಣೆಗಳಾಗುವುದಿಲ್ಲ ಎಂಬುದನ್ನು ಸ್ಪಷ್ಟಪಡಿ ಸುತ್ತೇನೆ. ಸಿಎಂ ಬೊಮ್ಮಾಯಿಯವರು ಉತ್ತಮ ಕೆಲಸ ಮಾಡುತ್ತಿದ್ದು, ಇದು ಹೀಗೆಯೇ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ವಂಶಾಡಳಿತದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರ ಹೆಸರನ್ನು ವಿಧಾನಪರಿಷತ್ ಚುನಾವಣೆಗೆ ಶಿಫಾರಸ್ಸು ಮಾಡುತ್ತಿರುವ ಕುರಿತು ಮಾತನಾಡಿ, ಪಕ್ಷಕ್ಕಾಗಿ ಕೆಲಸ ಮಾಡುವ ನಾಯಕರಿಗೆ ಅವಕಾಶ ನೀಡುವುದನ್ನು ನಿರಾಕರಿಸಲಾಗುವುದಿಲ್ಲ ಎಂದಿದ್ದಾರೆ.

Translate »