ದೇಶದಲ್ಲಿ 21 ಒಮಿಕ್ರಾನ್ ಪತ್ತೆ
News

ದೇಶದಲ್ಲಿ 21 ಒಮಿಕ್ರಾನ್ ಪತ್ತೆ

December 6, 2021

ನವದೆಹಲಿ,ಡಿ. 5-ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಸೋಂಕು ದಿನದಿಂದ ದಿನಕ್ಕೆ ವೇಗವಾಗಿ ಹರಡುತ್ತಿದ್ದು, ಭಾನು ವಾರ ಮಹಾರಾಷ್ಟ್ರದಲ್ಲಿ 7 ಮತ್ತು ರಾಜಸ್ತಾನ್‍ನಲ್ಲಿ 9 ಮಂದಿ ಯಲ್ಲಿ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಭಾರತದಲ್ಲಿ ಒಟ್ಟು 21 ಮಂದಿಗೆ ಒಮಿಕ್ರಾನ್ ತಗುಲಿದಂತಾಗಿದೆ.

ನಿನ್ನೆಯಷ್ಟೇ ದಕ್ಷಿಣ ಆಫ್ರಿಕಾದಿಂದ ದುಬೈ ಮತ್ತು ದೆಹಲಿ ಮಾರ್ಗವಾಗಿ ಮುಂಬೈಗೆ ಆಗಮಿಸಿದ್ದ ಕಲ್ಯಾಣ್ ಡೊಂಬಿವಿಲಿ ಮುನ್ಸಿಪಲ್ ಪ್ರದೇಶದ ವ್ಯಕ್ತಿಯೊಬ್ಬರಲ್ಲಿ ಕಾಣಿಸಿಕೊಂಡ ‘ಒಮಿ ಕ್ರಾನ್’ ಸೋಂಕು ಇಂದು ಪುಣೆ ಮೂಲದ ಏಳು ಮಂದಿಯಲ್ಲಿ ಕಾಣಿಸಿಕೊಂಡಿದೆ. ರಾಜಸ್ತಾನದ ಜೈಪುರದಲ್ಲಿ ಒಂದೇ ಕುಟುಂ ಬದ 9 ಮಂದಿಗೆ ಒಮಿಕ್ರಾನ್ ದೃಢಪಟ್ಟಿದೆ. ಈ ಮಧ್ಯೆ ಇಂದು ದೆಹಲಿಯಲ್ಲಿ ತಾಂಜೇನಿಯಾದಿಂದ ಬಂದಿದ್ದ ಒಬ್ಬರಲ್ಲಿ ಈ ಒಮಿಕ್ರಾನ್ ಕಾಣಿಸಿಕೊಂಡಿದೆ. ಮೊದಲಿಗೆ ಕರ್ನಾಟಕದಲ್ಲಿ ದಕ್ಷಿಣ ಆಫ್ರಿಕಾದ 56 ವರ್ಷದ ಮತ್ತು ಬೆಂಗಳೂರಿನ 46 ವರ್ಷ ವೈದ್ಯ ಸೇರಿ ಇಬ್ಬರಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿತ್ತು. ಶುಕ್ರವಾರ ಗುಜರಾತ್‍ನಲ್ಲೂ ಒಬ್ಬರಿಗೆ ಒಮಿಕ್ರಾನ್ ಕಾಣಿಸಿಕೊಂಡಿದ್ದು, ದೇಶದಲ್ಲಿ ಒಟ್ಟು 21 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಏಳು ಮತ್ತು ರಾಜ ಸ್ತಾನದಲ್ಲಿ ಒಂದೇ ಕುಟುಂಬದ 9 ಮಂದಿಯಲ್ಲಿ ಈ ಸೋಂಕು ಕಾಣಿಸಿಕೊಂಡಿರುವುದರಿಂದ ಅವರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ಪತ್ತೆ ಹಚ್ಚಿ ಅವರುಗಳ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸುವ ಕೆಲಸ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ವರದಿ: ದೆಹಲಿಯಲ್ಲಿ ಮೊದಲನೇ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತನನ್ನು ಎಲ್‍ಎನ್‍ಜೆಪಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರು ತಾಂಜೇನಿಯದಿಂದ ಬಂದವರಾಗಿದ್ದ ರೆಂದು ತಿಳಿದುಬಂದಿದೆ. ಇದರ ಜೊತೆಗೆ 17 ಮಂದಿಯಲ್ಲಿ ಕೋವಿಡ್ -19 ಸೋಂಕು ಕಾಣಿಸಿಕೊಂಡಿದ್ದು,

ಅವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಮಾಹಿತಿ ನೀಡಿದ್ದಾರೆ. ಒಮಿಕ್ರಾನ್ ಈಗಾಗಲೇ 30ಕ್ಕೂ ಹೆಚ್ಚು ದೇಶಗಳಲ್ಲಿ ಪತ್ತೆಯಾ ಗಿದೆ. ವಿಶ್ವ ಆರೋಗ್ಯ ಸಂಸ್ಥೆಯೂ ಕೂಡ ಮುನ್ನೆಚ್ಚರಿಕೆ ವಹಿಸಿದೆ. ಈ ಸೋಂಕು ಅಷ್ಟೊಂದು ಮಾರಣಾಂತಿಕವಲ್ಲದೆ ಇದ್ದರೂ, ಮೂರನೇ ಅಲೆ ಉಂಟು ಮಾಡುವಷ್ಟು ಪ್ರಸರಣ ಸಾಮಥ್ರ್ಯ ಹೊಂದಿದೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ವರದಿ: ‘ಒಮಿಕ್ರಾನ್’ ಸೋಂಕಿನಿಂದ ಬಳಲುತ್ತಿರುವ ಬೆಂಗಳೂರಿನ 46 ವರ್ಷದ ವೈದ್ಯನ ಸಂಪರ್ಕದಿಂದ ಅವರ ಪತ್ನಿ ಮತ್ತು ಮತ್ತೋರ್ವ ವೈದ್ಯನಿಗೂ ಒಮಿಕ್ರಾನ್ ಸೋಂಕು ದೃಢಪಡುವ ಸಾಧ್ಯತೆಯಿದ್ದು, ಇವರಿಬ್ಬರಲ್ಲೂ ಒಮಿಕ್ರಾನ್ ಲಕ್ಷಣಗಳು ಪತ್ತೆಯಾಗಿದೆ. ಅವರನ್ನು ಐಸೋಲೇಷನ್‍ನಲ್ಲಿ ಇಡಲಾಗಿದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ. ಇವರಿಬ್ಬರ ಜಿನೋಮಾ ಸ್ವಿಕ್ವೆನ್ಸಿಂಗ್ ವರದಿಯನ್ನು ನಾಳೆ (ಸೋಮವಾರ) ಬೆಳಗ್ಗೆ ವೇಳೆಗೆ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದ, ಎಚ್ಚರಿಕೆಯಿಂದ ಇರುವಂತೆ ಸರ್ಕಾರ ಮನವಿ ಮಾಡಿದ್ದು, ಜನರ ಸಹಕಾರ ಕೋರಿದೆ.

Translate »