ಕೊಡಗಿನಿಂದ ನಿಜಾಮುದ್ದೀನ್ ಸಭೆಗೆ ತೆರಳಿದ್ದವರು 24 ಮಂದಿ
ಕೊಡಗು

ಕೊಡಗಿನಿಂದ ನಿಜಾಮುದ್ದೀನ್ ಸಭೆಗೆ ತೆರಳಿದ್ದವರು 24 ಮಂದಿ

April 6, 2020

ಮಡಿಕೇರಿ, ಏ.5- ನಿಜಾಮುದ್ದೀನ್ ಧಾರ್ಮಿಕ ಸಭೆಗೆ ಪಾಲ್ಗೊಳ್ಳಲು ಜಿಲ್ಲೆಯಿಂದ ದೆಹಲಿಗೆ ಹೋದವರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ಈಗಾಗಲೇ ಜಿಲ್ಲೆಯಲ್ಲಿ ಮತ್ತೆ 2 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, ಜಿಲ್ಲೆಯಿಂದ ದೆಹಲಿಗೆ ತೆರಳಿದವರು ನೀಡಿರುವ ಮಾಹಿತಿಯಂತೆ 5 ಜನರು ದೆಹಲಿಯಲ್ಲಿ ಕ್ವಾರಂಟೈನ್‍ನಲ್ಲಿ ಇರುತ್ತಾರೆ. ಇನ್ನೂ 5 ಜನರು ಹೊರ ಜಿಲ್ಲೆಗಳಲ್ಲಿ ವಾಸವಿದ್ದು, ಈ ಬಗ್ಗೆ ಸಂಬಂಧಪಟ್ಟ ಜಿಲ್ಲೆಗಳಿಗೆ ಮಾಹಿತಿ ನೀಡಲಾಗಿದೆ. ಉಳಿದ ಎಲ್ಲಾ 14 ಜನರನ್ನು ಜಿಲ್ಲಾ ಆಸ್ಪತ್ರೆಯ ಐಸೋಲೇಶನ್ ವಾರ್ಡ್‍ನಲ್ಲಿ ಇರಿಸಲಾಗಿದ್ದು, ಇವರಿಗೆ ಕೊರೊನಾ ವೈರಸ್‍ನ ಲಕ್ಷಣಗಳಿರುವುದಿಲ್ಲ. ಆದಾಗ್ಯೂ ಇವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲು ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Translate »