ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ನೆರೆ ಸಂತ್ರಸ್ತರಿಗೆ 25 ಲಕ್ಷ ರೂ.ನೆರವು
ಮೈಸೂರು

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ ನೆರೆ ಸಂತ್ರಸ್ತರಿಗೆ 25 ಲಕ್ಷ ರೂ.ನೆರವು

August 13, 2019

ಮೈಸೂರು,ಆ.12(ಎಂಕೆ)-ನೆರೆ ಹಾವಳಿಗೆ ಸಿಲುಕಿ ಕಂಗಾಲಾಗಿರುವ ಸಂತ್ರಸ್ತರ ನೆರವಿಗಾಗಿ ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ರೂ. ನೀಡಲಾಯಿತು.

ಸೋಮವಾರ ರಾತ್ರಿ ಆಶ್ರಮಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರಿಗೆ ಶ್ರೀ ಗಣಪತಿ ಸಚ್ಚಿದಾ ನಂದ ಸ್ವಾಮೀಜಿಯವರು 25 ಲಕ್ಷ ರೂ. ಮೊತ್ತದ ಚೆಕ್‍ನ್ನು ಹಸ್ತಾಂತರಿಸಿದರು. ಇದೇ ವೇಳೆ ಮುಖ್ಯಮಂತ್ರಿಗಳಾದ ಬಳಿಕ ಮೊದಲ ಬಾರಿಗೆ ಆಶ್ರಮಕ್ಕೆ ಭೇಟಿ ನೀಡಿದ ಸಿಎಂ ಯಡಿಯೂರಪ್ಪ ಅವ ರನ್ನು ಸನ್ಮಾನಿಸಿ, ಅಭಿನಂದಿಸಿದರು.

ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಬಿಜೆಪಿ ಮುಖಂಡ ರಾಜೇಂದ್ರ ಮತ್ತಿತ ರರು ಈ ವೇಳೆ ಉಪಸ್ಥಿತರಿದ್ದರು.

 

Translate »