28 ಕೊರೊನಾ ದೃಢ, 25 ಮಂದಿ ಗುಣಮುಖ
ಚಾಮರಾಜನಗರ

28 ಕೊರೊನಾ ದೃಢ, 25 ಮಂದಿ ಗುಣಮುಖ

November 4, 2020

ಚಾಮರಾಜನಗರ, ನ.3- ಜಿಲ್ಲೆಯಲ್ಲಿ ಮಂಗಳವಾರ 28 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 25 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 6036 ದೃಢೀಕೃತ ಪ್ರಕರಣಗಳು ವರದಿಯಾಗಿದ್ದು, ಆ ಪೈಕಿ 5712 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆ ಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 200ಕ್ಕೆ ತಗ್ಗಿದೆ. 105 ಮಂದಿ ಕೋವಿಡ್ ಕಾರಣದಿಂದ, 19 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ. ಮಂಗಳವಾರ ದೃಢಪಟ್ಟ ಪ್ರಕರಣಗಳ ಪೈಕಿ ಚಾಮರಾಜನಗರ ತಾಲೂಕಿ ನಲ್ಲಿ 9, ಗುಂಡ್ಲುಪೇಟೆಯಲ್ಲಿ 3, ಕೊಳ್ಳೇಗಾಲದಲ್ಲಿ 8, ಹನೂರು 6 ಹಾಗೂ ಯಳಂದೂರು ತಾಲೂಕಿನಲ್ಲಿ 2 ಪ್ರಕರಣಗಳು ದೃಢಪಟ್ಟಿವೆ. ಮಂಗಳವಾರ ಒಟ್ಟು 1226 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಪೈಕಿ 1198 ಮಾದರಿಗಳ ಪರೀಕ್ಷೆ ಫಲಿತಾಂಶ ನೆಗೆಟಿವ್ ಬಂದಿದೆ.