ರಾಜ್ಯದಲ್ಲಿ ಲಸಿಕೆ ನೀಡಲು 29451 ಕೇಂದ್ರ ವ್ಯವಸ್ಥೆ
ಮೈಸೂರು

ರಾಜ್ಯದಲ್ಲಿ ಲಸಿಕೆ ನೀಡಲು 29451 ಕೇಂದ್ರ ವ್ಯವಸ್ಥೆ

December 3, 2020

ಬೆಂಗಳೂರು,ಡಿ.2(ಕೆಎಂಶಿ)-ಕೋವಿಡ್-19 ಸಾಂಕ್ರಾ ಮಿಕ ರೋಗಕ್ಕೆ ಲಸಿಕೆ ನೀಡಲು ರಾಜ್ಯದಲ್ಲಿ 29451 ಕೇಂದ್ರಗಳನ್ನು ಗುರುತಿಸಿ, ಅಣಿ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಇಂದಿಲ್ಲಿ ತಿಳಿಸಿದ್ದಾರೆ.

ಲಸಿಕೆ ನೀಡಲು 10008 ಸಿಬ್ಬಂದಿ ಗುರು ತಿಸಲಾಗಿದ್ದು, ಲಸಿಕೆ ಸಂಗ್ರಹ, ವಿತರಣೆಗೆ 2855 ಶೀತಲೀಕೃತ ಕೇಂದ್ರಗಳು ಸಿದ್ಧ ಗೊಂಡಿವೆ. ಬೆಂಗಳೂರು, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಪ್ರಾದೇಶಿಕ ಲಸಿಕೆ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ. ವರ್ಷಾಂತ್ಯಕ್ಕೆ ಇಲ್ಲವೇ ಮುಂದಿನ ವರ್ಷದ ಮೊದಲ ಭಾಗದಲ್ಲೇ ಲಸಿಕೆ ಲಭ್ಯವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪೂರ್ವ ಸಿದ್ಧತೆ ಮಾಡಿಕೊಂಡಿರುವುದಲ್ಲದೆ, ಇದಕ್ಕಾಗಿ ಒಂದಷ್ಟು ಹಣವನ್ನು ಮೀಸಲಿರಿಸಲಾಗಿದೆ ಎಂದು ತಿಳಿಸಿದರು.

ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‍ಗೆ ಉಚಿತವಾಗಿ ಲಸಿಕೆ ನೀಡಲಾಗುವುದು. ಈಗಾಗಲೇ ಪ್ರಧಾನಿಯವರು ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಹಿರಿಯ ಅಧಿಕಾರಿಗಳೊಟ್ಟಿಗೆ ಸಮಾಲೋಚನೆ ನಡೆಸಿ, ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಲಸಿಕೆ ದೊರೆತ ಬಳಿಕ ಹೆಚ್ಚು ಜನರಿಗೆ ನೀಡಲಾಗುವುದು. ಮೊದಲು ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸು ತ್ತಿರುವವರಿಗೆ, ನಂತರ 50 ವರ್ಷ ಮೇಲ್ಪಟ್ಟವರಿಗೆ ನೀಡ ಲಾಗುವುದು ಎಂದು ಡಾ.ಸುಧಾಕರ್ ತಿಳಿಸಿದರು.

ವೈದೇಹಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋ ಧನಾ ಸಂಸ್ಥೆಯಲ್ಲಿ ಭಾರತ್ ಬಯೋಟೆಕ್ ಸಹಯೋಗ ದಲ್ಲಿ ಕೊವ್ಯಾಕ್ಸಿನ್ ಕೋವಿಡ್ ಲಸಿಕೆಯ 3ನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಮುಖ್ಯಮಂತ್ರಿ  ಯಡಿಯೂರಪ್ಪ ಚಾಲನೆ ನೀಡಿದ ನಂತರ ಮಾತನಾಡಿದ ಆರೋಗ್ಯ ಸಚಿವರು, ರಾಜ್ಯಕ್ಕೆ ಇದು ಹೆಮ್ಮೆಯ ವಿಷಯವಾಗಿದೆ. ದೇಶದ 12 ರಾಜ್ಯಗಳ 25 ಭಾಗಗಳಲ್ಲಿ ಪ್ರಯೋಗ ನಡೆಯುತ್ತಿದ್ದು, ಸುಮಾರು 26 ಸಾವಿರ ಜನರಿಗೆ ಲಸಿಕೆ ನೀಡಲಾಗುತ್ತಿದೆ. ರಾಜ್ಯದಲ್ಲಿ 1,600-1,800 ಜನರಿಗೆ ಲಸಿಕೆಯನ್ನು ಪ್ರಾಯೋಗಿಕವಾಗಿ ನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡುವ ಸಮಯದಲ್ಲಿ ಊಹಾಪೋಹಗÀಳು ಕೇಳಿಬರುತ್ತವೆ. ಆದರೆ ಇದಕ್ಕೆ ಯಾರೂ ಕಿವಿಗೊಡಬಾರದು ಎಂದರು.

ಪ್ರಪಂಚದಲ್ಲಿ ಶೇ.15ರಿಂದ ಶೇ.20ರಷ್ಟು ಭಾರತೀಯ ಕಂಪನಿಗಳೇ ಲಸಿಕೆ ನೀಡುವ ಮಟ್ಟಿಗೆ ಬೆಳೆದಿವೆ. ಲಸಿಕೆ ಯಿಂದ ಕೆಲ ಅಡ್ಡ ಪರಿಣಾಮಗಳು ಬರಬಹುದು. ಆದರೆ ಇದನ್ನು ನಮ್ಮ ತಜ್ಞರು ಸೂಕ್ಷ್ಮವಾಗಿ ಗಮನಿಸುತ್ತಿರು ತ್ತಾರೆ. ಆದ್ದರಿಂದ ಯಾವುದೇ ಆತಂಕ ಇಲ್ಲ. ಪ್ರಧಾನಿ ಮೋದಿಯವರು ಲಸಿಕೆ ಸಂಶೋಧನೆಗೆ 900 ಕೋಟಿ ರೂ. ಮೀಸಲಿಟ್ಟಿದ್ದಾರೆ. ಲಸಿಕೆ ಪ್ರಯೋಗ ನಡೆಯುತ್ತಿರುವ ಸಂಸ್ಥೆಗಳಿಗೆ ಖುದ್ದಾಗಿ ಮೋದಿಯವರೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೋವಿಡ್ ಚಿಕಿತ್ಸೆಗಾಗಿ 300 ಕೋಟಿ ರೂ. ಗೂ ಹೆಚ್ಚು ಹಣ ಬಿಡುಗಡೆ ಮಾಡಿ ಉಚಿತ ಚಿಕಿತ್ಸೆ ನೀಡಿದೆ. ದಿನಕ್ಕೆ 1.25 ಲಕ್ಷ ಪರೀಕ್ಷೆ ಮಾಡುತ್ತಿದ್ದು, ಈವರೆಗೆ 1.20 ಕೋಟಿ ಉಚಿತ ಪರೀಕ್ಷೆ ಮಾಡಲಾಗಿದೆ ಎಂದರು.

 

Translate »