ಹುಬ್ಬಳ್ಳಿಯಿಂದ ಮೈಸೂರಿಗೆ ಮೇ 3ರಿಂದ ವಾರದಲ್ಲಿ 3 ದಿನ ಇಂಡಿಗೋ ವಿಮಾನ ಸೇವೆ
News

ಹುಬ್ಬಳ್ಳಿಯಿಂದ ಮೈಸೂರಿಗೆ ಮೇ 3ರಿಂದ ವಾರದಲ್ಲಿ 3 ದಿನ ಇಂಡಿಗೋ ವಿಮಾನ ಸೇವೆ

April 10, 2022

ಹುಬ್ಬಳ್ಳಿ,ಏ.9- ಹುಬ್ಬಳ್ಳಿ ಯಿಂದ ಮೈಸೂರಿಗೆ ಮೇ 3ರಿಂದ ವಿಮಾನ ಸೇವೆ ಆರಂಭವಾಗ ಲಿದೆ. ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿ ದ್ದಲು ಖಾತೆ ಸಚಿವ ಪ್ರಹ್ಲಾದ ಜೋಶಿಯವರು ಇಂಡಿಗೋ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದರು. ಸಚಿವರ ಮನ ವಿಗೆ ಸ್ಪಂದಿಸಿದ ಇಂಡಿಗೋ ಸಂಸ್ಥೆ ಮೇ 3ರಿಂದ ವಾರದಲ್ಲಿ 3 ದಿನ ಮೈಸೂರಿಗೆ ವಿಮಾನ ಹಾರಾಟ ಪ್ರಾರಂಭಿಸಲಿದೆ. ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸ ಜ್ಜಿತ ನಿಲ್ದಾಣವನ್ನಾಗಿ ಮಾರ್ಪ ಡಿಸಿದೆ. ಹುಬ್ಬಳ್ಳಿಯಿಂದ ಮೈಸೂರು, ಮಂಗಳೂರು ನಗರ ಗಳಿಗೆ ವಿಮಾನ ಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನ ಬೇಡಿಕೆಗೆ ಇಂದು ಚಾಲನೆ ನೀಡ ಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.ಇದನ್ನು ಸಾಧ್ಯವಾಗಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಮತ್ತು ಇಂಡಿಗೋದ ಆಡಳಿತ ವರ್ಗಕ್ಕೆ ಸಚಿವ ಜೋಶಿಯವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಇಂಡಿಗೋ ಮೇ 1ರಿಂದ ವಾರದಲ್ಲಿ 4 ದಿನ ಮಂಗಳೂರಿಗೆ ವಿಮಾನ ಹಾರಾಟ ನಡೆಸಲಿದ್ದು, ಏ.27ರಿಂದ ಹುಬ್ಬಳ್ಳಿಯಿಂದ ಹೈದರಾಬಾದ್‍ಗೆ ದೈನಂದಿನ ವಿಮಾನ ಕಾರ್ಯಾಚರಣೆ ಘೋಷಿಸಿದೆ. ವಿಮಾನವು ಹುಬ್ಬಳ್ಳಿಯಿಂದ ಬೆಳಗ್ಗೆ 8 ಗಂಟೆಗೆ ಹೊರಟು 9.10ಕ್ಕೆ ಹೈದರಾಬಾದ್‍ಗೆ ತಲುಪಲಿದೆ. ಹೈದರಾಬಾದ್‍ನಿಂದ ಬೆಳಗ್ಗೆ 9.40ಕ್ಕೆ ಹೊರಟು 11 ಗಂಟೆಗೆ ಹುಬ್ಬಳ್ಳಿಗೆ ಬರಲಿದೆ.

Translate »