ಸಿಎಂ ಯಡಿಯೂರಪ್ಪ ಸರ್ಕಾರದ ನೂರು ದಿನಗಳ ಸಾಧನೆಯ ಪಕ್ಷಿನೋಟ ಕಲಾಮಂದಿರ ಒಳಾಂಗಣದಲ್ಲಿ 3 ದಿನಗಳ ಛಾಯಾಚಿತ್ರ ಪ್ರದರ್ಶನ
ಮೈಸೂರು

ಸಿಎಂ ಯಡಿಯೂರಪ್ಪ ಸರ್ಕಾರದ ನೂರು ದಿನಗಳ ಸಾಧನೆಯ ಪಕ್ಷಿನೋಟ ಕಲಾಮಂದಿರ ಒಳಾಂಗಣದಲ್ಲಿ 3 ದಿನಗಳ ಛಾಯಾಚಿತ್ರ ಪ್ರದರ್ಶನ

December 25, 2019

ಮೈಸೂರು, ಡಿ.24(ಆರ್‍ಕೆಬಿ)- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ನೂರು ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ `ಅಭಿವೃದ್ಧಿಯೇ ಆಡಳಿತ ಮಂತ್ರ’ ಘೋಷಣೆಯಡಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮೈಸೂರಿನ ಕಲಾಮಂದಿರ ಒಳಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆಯನ್ನು ಸಾರುವ ಛಾಯಾ ಚಿತ್ರಗಳ ಪ್ರದರ್ಶನ ಆಯೋಜಿಸಲಾಗಿದೆ.

ಮೂರು ದಿನಗಳ ಕಾಲ ಈ ಪ್ರದರ್ಶನ ಏರ್ಪಡಿಸಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪ್ರವಾಹ ಸಂತ್ರಸ್ತರ ನೋವಿಗೆ ಸ್ಪಂದಿಸಿ, 22 ಜಿಲ್ಲೆಗಳಲ್ಲಿ 103 ತಾಲೂಕು ಗಳನ್ನು ಪ್ರವಾಹ ಪೀಡಿತ ತಾಲೂಕು ಎಂದು ಘೋಷಣೆ ಮಾಡಿ ಕೇಂದ್ರದಿಂದ 1200 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದ 6450ಕೋಟಿ ರೂ. ಮಂಜೂರು ಮಾಡಲಾಗಿದೆ. ಬೆಳೆಹಾನಿ ಪರಿಹಾರ, ಕಡಿತಗೊಂಡಿದ್ದ ರಸ್ತೆ ಸಂಪರ್ಕ ಪುನರ್ ಸ್ಥಾಪನೆ, ಹಾಳಾದ ಶಾಲೆಗಳ ದುರಸ್ಥಿ ಇತ್ಯಾದಿ ಕಾರ್ಯಗಳನ್ನು ಕೈಗೊಂಡಿರುವ ಬಗ್ಗೆ ಪ್ರದರ್ಶನದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಹೊಸ ಆವಿಷ್ಕಾರ ಗಳಿಗೆ ಉತ್ತೇಜನ ನೀಡಲು ಕರ್ನಾಟಕ ಆವಿಷ್ಕಾರ ಪ್ರಾಧಿಕಾರ ರಚನೆ, ಮೀನು ಗಾರರಿಗೆ ನೆರವು, ನೇಕಾರರಿಗೆ ಸಿಎಂ ವಿಶೇಷ ಕಾಳಜಿ ವಹಿಸಿ ನೇಕಾರರ 98 ಕೋಟಿ ರೂ. ಸಾಲಮನ್ನಾ, 29 ಸಾವಿರಕ್ಕೂ ಹೆಚ್ಚು ನೇಕಾರರಿಗೆ ನೆಮ್ಮದಿಯ ಬದುಕು.

ಹೈದರಾಬಾದ್ ಕರ್ನಾಟಕಕ್ಕೆ ಕಲ್ಯಾಣ ಕರ್ನಾಟಕ ಮರು ನಾಮಕರಣ ಮಾಡಿ ಈ ಭಾಗದ ಸಮಗ್ರ ಅಭಿವೃದ್ಧಿ ಮತ್ತು ಜನ ಕಲ್ಯಾಣ ಪರ್ವಕ್ಕೆ ಚಾಲನೆ, 21 ಹಿಂದುಳಿದ ತಾಲೂಕುಗಳ ಅಭಿವೃದ್ದಿಗೆ ಆದ್ಯತೆ ಜೊತೆಗೆ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ, 38.17 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿಗಳ ಚಾಲನೆ, ಕಲಬುರ್ಗಿ ವಿವಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಧ್ಯಯನ ಪೀಠ ಸ್ಥಾಪನೆ ಕುರಿತು ಫಲಕದಲ್ಲಿ ತಿಳಿಸಲಾಗಿದೆ. ಕೃಷಿಕರಿಗೆ ವಿಶೇಷ ಕೊಡುಗೆ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ನೆರವು, 60 ಲಕ್ಷ ಫಲಾನುಭವಿಗಳಿಗೆ ಇದರಿಂದ ಪ್ರಯೋ ಜನ, ಕೇಂದ್ರ ವಾರ್ಷಿಕ 6 ಸಾವಿರ, ರಾಜ್ಯದ 4 ಸಾವಿರ ರೂ ಹೆಚ್ಚುವರಿ ನೀಡಿಕೆ.

ಮೀನುಗಾರರಿಗೆ 60 ಕೋಟಿ ರೂ. ಸಾಲ ಮನ್ನಾ, 23 ಸಾವಿರಕ್ಕೂ ಹೆಚ್ಚಿನ ಮೀನುಗಾರರು ಋಣಮುಕ್ತ. ಬೆಂಗಳೂರು ನಗರ ಸಮಗ್ರ ಅಭಿವೃದ್ಧಿಗೆ ಒತ್ತು. ಬೆಂಗಳೂರು ನಗರ ಫೆರಿಪೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ 11,950 ಕೋಟಿ ರೂ., ಒಟ್ಟು 68 ಕಿ.ಮೀ. ಉದ್ದ, 100 ಮೀ. ಅಗಲದ ಫೆರಿಪೆರಲ್ ರಿಂಗ್‍ರಸ್ತೆ ನಿರ್ಮಾಣ 3 ವರ್ಷದೊಳಗೆ ಮುಗಿಸಲು ನಿರ್ಧಾರ. ಭೂಸ್ವಾಧೀನಕ್ಕೆ 8,100 ಕೋಟಿ ರೂ., ರಸ್ತೆ ನಿರ್ಮಾಣಕ್ಕೆ 3850 ಕೋಟಿ ರೂ ಸೇರಿದಂತೆ ಒಟ್ಟು 11,950 ಕೋಟಿ ರೂ. ಯೋಜನೆಯ ವೆಚ್ಚದಲ್ಲಿ ನಿರ್ಮಾಣ.

ರಾಜ್ಯದ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಇನ್‍ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅಧ್ಯಕ್ಷತೆಯಲ್ಲಿ ಪ್ರವಾ ಸೋದ್ಯಮ ಕಾರ್ಯಪಡೆ, ಬೆಂಗಳೂರು ನಗರವನ್ನು ಕ್ಯಾಲಿಫೋರ್ನಿಯಾ ಮತ್ತು ಸ್ಯಾನ್ ಫ್ರಾನ್ಸಿಸ್ಕೋ ಸಿಲಿಕಾನ್ ವ್ಯಾಲಿಗಳಂತೆ ಅಭಿವೃದ್ಧಿ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಯಡಿ 1,29,305 ಫಲಾನುಭವಿಗಳ ಚಿಕಿತ್ಸೆಗೆ ಅನುಮೋದನೆ, ಅದಕ್ಕಾಗಿ 197 ಕೋಟಿ ವೆಚ್ಚ, ಇಲ್ಲಿಯವರೆಗೆ 23 ಲಕ್ಷ ಜನರಿಗೆ ಆರೋಗ್ಯ ಕಾರ್ಡ್ ವಿತರಣೆ, ಆಶಾ ಕಾರ್ಯ ಕರ್ತೆಯರಿಗೆ ಗೌರವ ಧನ ಹೆಚ್ಚಳ, ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳ ಸೂಕ್ತ ಆರೈಕೆಗಾಗಿ 49 ತಾಲೂಕು ಆಸ್ಪತ್ರೆ ಗಳಲ್ಲಿ ಪೌಷ್ಠಿಕ ಪುನಶ್ಚೇತನ ಕೇಂದ್ರಗಳ ಸ್ಥಾಪನೆ, ಅಲ್ಲದೆ ಸಮಾಜ ಕಲ್ಯಾಣ, ಕಾರ್ಮಿಕ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಇಲಾಖೆ, ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ವಸತಿ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆ ಗಳಲ್ಲಿ ಸರ್ಕಾರ ನೂರು ದಿನಗಳಲ್ಲಿ ಕೈಗೊಂಡ ಸಾಧನೆಯ ಪಕ್ಷಿನೋಟದ ಫಲಕವನ್ನು ಇಲ್ಲಿ ಪ್ರದರ್ಶಿಸಲಾಗಿದೆ.

Translate »