37 ಜನರ ಗಂಟಲಿನ ದ್ರವ ಮಾದರಿ ಪರೀಕ್ಷೆಗೆ
ಚಾಮರಾಜನಗರ

37 ಜನರ ಗಂಟಲಿನ ದ್ರವ ಮಾದರಿ ಪರೀಕ್ಷೆಗೆ

April 23, 2020

ಚಾಮರಾಜನಗರ, ಏ.22- ಜಿಲ್ಲೆಯಿಂದ ಐಎಲ್‍ಐ ರೋಗಲಕ್ಷಣ ಗಳು ಕಂಡುಬಂದಿರುವ 37 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆ ಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಇಂದು ಕಳುಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸಲಾಗುತ್ತಿದೆ.

ಏಪ್ರಿಲ್ 20ರಂದು 36 ಮಂದಿ ಹಾಗೂ ಏಪ್ರಿಲ್ 21ರಂದು 27 ಜನರ ಗಂಟಲಿನ ದ್ರವ ಮಾದರಿಯನ್ನು ಪರೀಕ್ಷೆ ಗಾಗಿ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳು ಹಿಸಿಕೊಡಲಾಗಿದ್ದು, ಫಲಿತಾಂಶ ನಿರೀಕ್ಷಿಸ ಲಾಗುತ್ತಿದೆ. ಈ ಬಗ್ಗೆ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಪ್ರಸ್ತುತ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂ ಟೈನ್ ಕೇಂದ್ರದಲ್ಲಿ ಯಾರನ್ನೂ ನಿಗಾವಣೆ ಮಾಡಲಾಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ತಿಳಿಸಿದ್ದಾರೆ.

Translate »