4 ಕ್ಷೇತ್ರಗಳ ಪರಿಷತ್ ಚುನಾವಣೆ: ಮತ ಎಣಿಕೆ ನ.10ಕ್ಕೆ ಮುಂದೂಡಿಕೆ

ಬೆಂಗಳೂರು,ಅ.31-ನಾಲ್ಕು ಕ್ಷೇತ್ರಗಳ ಪರಿಷತ್ ಚುನಾವಣೆ ಮತ ಎಣಿಕೆ ನ.10ಕ್ಕೆ ಮುಂದೂಡಿಕೆಯಾಗಿದ್ದು, ಚುನಾವಣಾ ಆಯೋಗ ತಿದ್ದುಪಡಿ ಅಧಿಸೂಚನೆ ಹೊರ ಡಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಆಗ್ನೇಯ ಪದ ವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.28ರಂದು ಮತದಾನ ನಡೆ ದಿದೆ. ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಣೆಗೆ ಕೆಲವೇ ಗಂಟೆಗಳು ಬಾಕಿ ಇತ್ತು. ಅಷ್ಟರಲ್ಲಿ ಅಧಿಸೂಚನೆಗೆ ತಿದ್ದು ಪಡಿ ಮಾಡಿರುವ ಚುನಾವಣಾ ಆಯೋಗ, ಮತ ಎಣಿಕೆಗೆ ದಿನಾಂಕ ಮುಂದೂಡಿದೆ. ನ.2ರ ಬದಲು ನ.10 ರಂದು ಮತ ಎಣಿಕೆ ನಡೆಯಲಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದ ವಾಪ್ತಿಗೆ ಕಲಬುರಗಿ, ಬಳ್ಳಾರಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ ಒಳಪಟ್ಟಿದೆ. ಆಗ್ನೇಯ ಪದವೀ ಧರ ಕ್ಷೇತ್ರಕ್ಕೆ ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಸೇರಿವೆ. ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ಹೊಂದಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರ ಬೆಂಗಳೂರು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿ ಒಳಗೊಂಡಿದೆ. ಈ 4 ಕ್ಷೇತ್ರಗಳ ಫಲಿತಾಂಶ ಏನಾಗಲಿದೆ ಎಂದು ತಿಳಿಯಲು ನ.10ರವರೆಗೂ ಕಾಯಲೇಬೇಕು.