43 ಕಾರ್ಮಿಕರ ಸಜೀವ ದಹನ
ಮೈಸೂರು

43 ಕಾರ್ಮಿಕರ ಸಜೀವ ದಹನ

December 9, 2019

ನವದೆಹಲಿ: ಭಾನುವಾರ ನಸುಕಿನ ಜಾವ ಉತ್ತರ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಜ್ ಮಂಡಿ ಪ್ರದೇಶದ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿ 43 ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಇಂದು ನಸುಕಿನ ಜಾವ 5.22ಕ್ಕೆ ಅಗ್ನಿ ಅವಘಡದ ಸುದ್ದಿ ತಿಳಿಯುತ್ತಲೇ 30 ಅಗ್ನಿ ಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ನಿರತವಾಯಿತು. ರಕ್ಷಣಾ ಕಾರ್ಯ ಅಲ್ಲಿ ಭರದಿಂದ ಸಾಗಿದೆ. ಅಗ್ನಿ ಅವಘಡದ ಸ್ವರೂಪ ಗಂಭೀರವಾಗಿದ್ದು ಇನ್ನಷ್ಟು ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸುವ ನಿರೀಕ್ಷೆಯಿದೆ. ಘಟನೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅಗ್ನಿಶಾಮಕ ದಳದ ಉಪ ಮುಖ್ಯಾಧಿಕಾರಿ ಸುನಿಲ್ ಚೌಧರಿ, 600 ಚದರಡಿ ಸ್ಥಳದಲ್ಲಿ ಅಗ್ನಿ ಅವಘಡವುಂಟಾಗಿದೆ.ಕಾರ್ಖಾನೆ ಒಳಗೆ ತೀವ್ರ ಕತ್ತಲು ಕವಿದಿತ್ತು. ಶಾಲಾ ಬ್ಯಾಗುಗಳು, ಬಾಟಲ್‍ಗಳು ಮತ್ತು ಇತರ ಸಾಮಗ್ರಿಗಳನ್ನು ತಯಾರಿಸುವ ಕಾರ್ಖಾನೆಯಾಗಿದೆ. ಅಗ್ನಿ ಅವಘಡ ನಡೆಯುವ ಸಂದರ್ಭದಲ್ಲಿ 50ಕ್ಕೂ ಹೆಚ್ಚು ಕಾರ್ಮಿಕರು ಒಳಗಿದ್ದರು. ನಾವು ಇದುವರೆಗೆ 15 ಮಂದಿಯನ್ನು ಸ್ಥಳದಿಂದ ಕಾಪಾಡಿ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಿದ್ದೇವೆ, ಕೆಲವರುಗಾಯಗೊಂಡಿದ್ದು, ಇನ್ನು ಕೆಲವರು ಹೊಗೆಗೆ ಉಸಿರುಗಟ್ಟಿ ತಲೆಸುತ್ತಿ ಬಿದ್ದಿದ್ದಾರೆ. ಈ ಘಟನೆ ನಡೆಯುವಾಗ ಕಾರ್ಖಾನೆಯೊಳಗೆ ಒಟ್ಟು 59 ಕಾರ್ಮಿಕರು ನಿದ್ದೆ ಮಾಡುತ್ತಿದ್ದರು ಎಂದು ಕಾರ್ಖಾನೆ ಮಾಲೀಕ ತಿಳಿಸಿದ್ದಾರೆ ಎಂದು ಚೌಧರಿ ಹೇಳಿದರು. ಮಧ್ಯಮ ಪ್ರಮಾಣದಲ್ಲಿ ಬೆಂಕಿ ಹತ್ತಿ ಉರಿದಿದ್ದು ಇದೀಗ ಬೆಂಕಿಯನ್ನು ಸಂಪೂರ್ಣ ವಾಗಿ ಆರಿಸಲಾಗಿದೆ ಎಂದರು. ರಕ್ಷಣಾ ಕಾರ್ಯ ಮುಂದುವರಿದಿದೆ.

ಕುಟುಂಬದವರ ಆಕ್ರಂದನ: ಬೆಂಕಿ ಅವಘಡದಲ್ಲಿ ಕಾರ್ಮಿಕರು ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಅವರ ಕುಟುಂಬದವರು ಮತ್ತು ಸಮೀಪ ಬಂಧುಗಳು ಜಮಾಯಿಸಿದ್ದರು. ಮನೆಯವರ ಆಕ್ರಂದನ ಮುಗಿಲುಮುಟ್ಟಿತ್ತು. ಹಲವರಿಗೆ ತಮ್ಮ ಮನೆಯವರು ಯಾವ ಆಸ್ಪತ್ರೆಯಲ್ಲಿದ್ದಾರೆ, ಅವರ ಪರಿಸ್ಥಿತಿ ಏನಾಗಿದೆ ಎಂದು ಬೆಳಗ್ಗೆ ಮಾಹಿತಿ ಸಿಕ್ಕಿರಲಿಲ್ಲ.

ಮಾಲೀಕನ ಬಂಧನ: ಈ ಸಂಬಂಧ ಅನಜ್ ಮಂಡಿ ಕಟ್ಟಡದ ಮಾಲೀಕನನ್ನು ಪೆÇಲೀಸರು ಬಂಧಿಸಿದ್ದಾರೆ. ದೆಹಲಿ ಪೆÇಲೀಸರು ಅನಜ್ ಮಂಡಿ ಕಟ್ಟಡದ ಮಾಲೀಕ ರೆಹಾನ್ ಮತ್ತು ಆತನ ಮ್ಯಾನೇಜರ್ ಫುರ್ಕಾನ್ ಎಂಬಾತನನ್ನು ಪೆÇಲೀಸರು ಬಂಧಿಸಿದ್ದು ಅವರ ವಿರುದ್ಧ ಐಪಿಸಿ ಸೆಕ್ಷನ್ 304 ಮತ್ತು 285 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಧಾನಿಯಿಂದ ಪರಿಹಾರ ಘೋಷಣೆ: ಕಾರ್ಮಿಕರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ಸಹ ತಲಾ 50 ಸಾವಿರ ರೂ. ಪರಿಹಾರವನ್ನು ಪ್ರಧಾನಿ ಮೋದಿ ಘೋಷಿಸಿದ್ದಾರೆ.  ಮೃತಪಟ್ಟ 43 ಮಂದಿ ಕಾರ್ಮಿಕರ ಕುಟುಂಬದವರಿಗೆ ದೆಹಲಿ ಸರ್ಕಾರವೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

 

Translate »