ಮೈಸೂರು ಜಿಲ್ಲೆಯಲ್ಲಿ ಸಿಎಂ ಮಾತೃಶ್ರೀಯಲ್ಲಿ 4726, ಪಿಎಂ ಮಾತೃವಂದನಾದಲ್ಲಿ 22,726 ಫಲಾನುಭವಿಗಳು
ಮೈಸೂರು

ಮೈಸೂರು ಜಿಲ್ಲೆಯಲ್ಲಿ ಸಿಎಂ ಮಾತೃಶ್ರೀಯಲ್ಲಿ 4726, ಪಿಎಂ ಮಾತೃವಂದನಾದಲ್ಲಿ 22,726 ಫಲಾನುಭವಿಗಳು

June 7, 2019

ಮೈಸೂರು: ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಪ್ರೋತ್ಸಾಹ ಧನ ನೀಡುವ ಮುಖ್ಯ ಮಂತ್ರಿಗಳ ಮಾತೃಶ್ರೀ ಯೋಜನೆ ಮತ್ತು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಗಳನ್ನು ಮೈಸೂರು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸ ಲಾಗುತ್ತಿದೆ. ಮಾತೃಶ್ರೀ ರಾಜ್ಯ ಸರ್ಕಾರ ಜಾರಿಗೆ ತಂದಿ ದ್ದರೆ ಮಾತೃವಂದನಾ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಎರಡೂ ಮಹತ್ವದ ಯೋಜನೆ ಗಳನ್ನು ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ.

ಮೈಸೂರು ಜಿಲ್ಲೆಯಲ್ಲಿ 4726 ಗರ್ಭಿಣಿಯರಿಗೆ ಮುಖ್ಯಮಂತ್ರಿಗಳು ಮಾತೃಶ್ರೀ ಯೋಜನೆಯಡಿ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಪ್ರಧಾನಮಂತ್ರಿಗಳ ಮಾತೃ ವಂದನಾ ಯೋಜನೆಯಡಿ ಒಟ್ಟು 22,726 ಮಂದಿ ಯನ್ನು ನೋಂದಾಯಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಅಧಿಕಾರಿ ಪದ್ಮಾ ಅವರು ‘ಮೈಸೂರು ಮಿತ್ರ’ನಿಗೆ ತಿಳಿಸಿದ್ದಾರೆ.

ಗರ್ಭಿಣಿಯರು ಹತ್ತಿರದ ಅಂಗನವಾಡಿ ಕೇಂದ್ರ ಗಳಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ಅರ್ಜಿ ನಮೂನೆ ಭರ್ತಿ ಮಾಡಿ ಹೆಸರು ನೋಂದಾಯಿಸಿ ಕೊಳ್ಳಬಹುದಾಗಿದ್ದು, ಅಂಗನವಾಡಿ ಕೇಂದ್ರಗಳಲ್ಲಿನ ಗ್ರಾಮ ದವರು ಸಮೀಪದ ತಾಲೂಕು ಕೇಂದ್ರಗಳಲ್ಲಿರುವ ಶಿಶು ಅಭಿವೃದ್ಧಿ ಅಧಿಕಾರಿ(ಸಿಡಿಪಿಓ) ಕಚೇರಿಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ನುಡಿದರು.

ಮಾತೃಶ್ರೀ: ಮುಖ್ಯಮಂತ್ರಿಗಳ ಮಾತೃಶ್ರೀ ಯೋಜನೆ ಯಡಿ 6,000 ಪ್ರೋತ್ಸಾಹಧನ ನೀಡಲಾಗುವುದು. ಗರ್ಭಿಣಿ / ಬಾಣಂತಿಯರಿಗೆ 3 ಕಂತುಗಳಲ್ಲಿ ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುವುದು.

ಭರ್ತಿ ಮಾಡಿದ ಅರ್ಜಿಯೊಂದಿಗೆ ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್ ಪ್ರತಿ, ಫಲಾನುಭವಿ ಹಾಗೂ ಪತಿಯ ಆಧಾರ ಕಾರ್ಡ್ ಪ್ರತಿ, ಬಿಪಿಎಲ್ ಕಾರ್ಡ್ ಪ್ರತಿ, ಫಲಾನು ಭವಿಯ ಬ್ಯಾಂಕ್ ಖಾತಾ ವಿವರಗಳನ್ನು ಸಲ್ಲಿಸಿ ಅಂಗನ ವಾಡಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.

ಮಾತೃವಂದನಾ: ಮೊದಲ ಪ್ರಸವದ ಗರ್ಭಿಣಿ / ಬಾಣಂತಿ ಮಹಿಳೆಯರಿಗೆ 5,000 ರೂ. ಪ್ರೋತ್ಸಾಹ ಧನ ನೀಡುವ ಪ್ರಧಾನಮಂತ್ರಿಗಳ ಮಾತೃವಂದನಾ ಯೋಜನೆಯಲ್ಲಿ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡ ಲಾಗುವುದು. ನೋಂದಾವಣಿಗೆ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಅಂಗನವಾಡಿ ಅಥವಾ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿ ಯೊಂದಿಗೆ ತಾಯಿ ಮತ್ತು ಶಿಶು ರಕ್ಷಣಾ ಕಾರ್ಡ್ ಫಲಾನುಭವಿ ಮತ್ತು ಪತಿಯ ಆಧಾರ ಕಾರ್ಡ್, ಫಲಾ ನುಭವಿಯ ಬ್ಯಾಂಕ್ ಖಾತೆ ವಿವರಗಳೊಂದಿಗೆ ಅಂಗನ ವಾಡಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳ ಬಹುದು. ಹೆಚ್ಚಿನ ಮಾಹಿತಿಗೆ ಸಮೀಪದ ಅಂಗನವಾಡಿ ಕಾರ್ಯಕರ್ತೆ/ ಆಶಾ ಕಾರ್ಯಕರ್ತೆ / ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

Translate »