5 ಲಕ್ಷ ರೂ. ಲಂಚ ಪಡೆದ ಪ್ರಕರಣ: ಎಸಿಬಿಯಿಂದ  ಬಂಧಿತ ಐಎಎಸ್ ಅಧಿಕಾರಿ ಮಂಜುನಾಥ್ ಅಮಾನತು
News

5 ಲಕ್ಷ ರೂ. ಲಂಚ ಪಡೆದ ಪ್ರಕರಣ: ಎಸಿಬಿಯಿಂದ ಬಂಧಿತ ಐಎಎಸ್ ಅಧಿಕಾರಿ ಮಂಜುನಾಥ್ ಅಮಾನತು

July 5, 2022

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವೇಳೆ ಜಮೀನು ವ್ಯಾಜ್ಯ ಇತ್ಯರ್ಥಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜಿ.ಮಂಜುನಾಥ್ ಅವರನ್ನು ಎಸಿಬಿ ಸೋಮ ವಾರ ಬಂಧಿಸಿದೆ. ಲಂಚ ಪ್ರಕರಣದಲ್ಲಿ ಮೂರನೇ ಆರೋಪಿ ಯಾಗಿರುವ ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಇಂದು ಯಶವಂತಪುರದ ಅವರ ನಿವಾಸದಲ್ಲಿ ಬಂಧಿಸಿದ್ದಾರೆ. ಲಂಚ ಪ್ರಕರಣದಲ್ಲಿ ಮಂಜುನಾಥ್ ಅವರನ್ನು ಮೂರನೇ ಆರೋಪಿಯನ್ನಾಗಿ ಮಾಡುವಂತೆ ಕೋರಿ ಬೆಂಗಳೂರು ಎಸಿಬಿ ಪೆÇಲೀಸರು ಭ್ರಷ್ಟಾಚಾರ ಪ್ರಕರಣ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ವರದಿಗೆ ಸಮ್ಮತಿಸಿರುವ ವಿಶೇಷ ನ್ಯಾಯಾಲಯ ಐಎಎಸ್ ಅಧಿಕಾರಿ ಮಂಜುನಾಥ್ ವಿಚಾರಣೆಗೆ ಹಸಿರು ನಿಶಾನೆ ತೋರಿತ್ತು. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಇಂದು ಮಂಜುನಾಥ್ ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆನೇಕಲ್ ತಾಲೂಕಿನ ಕೂಡ್ಲು ಗ್ರಾಮದಲ್ಲಿ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದ ವ್ಯಾಜ್ಯ ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇತ್ತು. ಈ ಪ್ರಕರಣದ ಪೂರ್ಣ ವಿಚಾರಣೆ ನಡೆಸಿದ್ದ ಜಿಲ್ಲಾಧಿಕಾರಿ ಜೆ. ಮಂಜುನಾಥ್ ತೀರ್ಪು ಪ್ರಕಟ ಮಾಡಿರಲಿಲ್ಲ. ಈ ಕುರಿತು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ್ದ ಅರ್ಜಿದಾರ ಆಜಂಪಾಷಾ ಅವರಿಗೆ ಅಧೀನ ಸಿಬ್ಬಂದಿ ಮಹೇಶ್ ಅವರನ್ನು ಕಾಣಲು ಸೂಚಿಸಲಾಗಿತ್ತು. ಮಹೇಶ್ ಅವರನ್ನು ಭೇಟಿ ಮಾಡಿದಾಗ, “ನಿನ್ನ ಪರ ಅನುಕೂಲಕರ ತೀರ್ಪು ನೀಡಲು 5 ಲಕ್ಷ ರೂ. ಲಂಚ ನೀಡುವಂತೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ವ್ಯವಸ್ಥಾಪಕ ಮಹೇಶ್ ಹಾಗೂ ನ್ಯಾಯಾಲಯ ವಿಭಾಗದ ಚೇತನ್ ಕುಮಾರ್ ಬೇಡಿಕೆ ಇಟ್ಟಿದ್ದರು.

ಎಸಿಬಿ ಪೊಲೀಸರಿಂದ ಮಂಜುನಾಥ್ ಬಂಧನವಾಗುತ್ತಿದ್ದಂತೆ ಅವರನ್ನು ರಾಜ್ಯ ಸರ್ಕಾರ ಅಮಾನತುಪಡಿಸಿದೆ. ಬಂಧಿಸಲ್ಪಟ್ಟ ಮಂಜುನಾಥ್ ಅವರನ್ನು ನ್ಯಾಯಾ ಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಇದೀಗ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.

Translate »