ಬೆಂಗಳೂರು, ಮೇ 4(ಕೆಎಂಶಿ)- ರಾಜ್ಯಾದ್ಯಂತ 50 ಸಾವಿರ ಕಾರ್ಮಿಕರು ತಮ್ಮ ನೆಲೆ ಸೇರಿದ್ದಾರೆ. ಬೆಂಗಳೂರು ಸೇರಿದಂತೆ ನಗರ ಪಟ್ಟಣಗಳಲ್ಲಿ ತಮ್ಮ ಊರುಗಳಿಗೆ ಸೇರಲು ಬಸ್ ನಿಲ್ದಾಣ ಗಳಲ್ಲಿ ಜನರು ಸಾಲುಗಟ್ಟಿ ನಿಂತಿದ್ದಾರೆ.
ಕಾರ್ಮಿಕರಷ್ಟೇ ಅಲ್ಲದೆ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿದ್ದಾರೆ. ಇದನ್ನರಿತ ಮುಖ್ಯಮಂತ್ರಿಯವರು ಮತ್ತೆ ಎರಡು ದಿನಗಳ ಕಾಲ ಉಚಿತ ಸಾರಿಗೆ ವ್ಯವಸ್ಥೆ ಯನ್ನು ಮುಂದುವರೆಸಿದ್ದಾರೆ. ಸಾಮಾಜಿಕ ಅಂತರ ಮತ್ತು ವೈದ್ಯ ಕೀಯ ಪರೀಕ್ಷೆ ನಡೆಸಿ, ಪ್ರಯಾಣಿಕರನ್ನು ಅವರ ಬಯಸಿದ ಊರುಗಳಿಗೆ ಕಳುಹಿ ಸುವ ವ್ಯವಸ್ಥೆ ಮಾಡಲಾಗುತ್ತಿದೆ.
ಮಂಗಳವಾರ ಈ ಸೌಲಭ್ಯ ಕೊನೆ ಗೊಳುವುದಿತ್ತು ಆದರೆ ಕಾರ್ಮಿಕರ ಮತ್ತು ಜನರ ಅನುಕೂಲಕ್ಕಾಗಿ ಉಚಿತ ಸೌಲಭ್ಯ ವನ್ನು ಗುರುವಾರದವರೆಗೆ ವಿಸ್ತರಿಸಲಾ ಗಿದೆ. ಕಾರ್ಮಿಕರು ಮತ್ತು ಇತರೆ ಜನರು ಬಸ್ ನಿಲ್ದಾಣಗಳಲ್ಲಿ ಜಮಾವಣೆಯಾಗದೆ ನೆಮ್ಮದಿಯಿಂದ ತಮ್ಮ ಊರುಗಳಿಗೆ ತೆರಳಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ. ರವಿ ವಾರದಂದು (03/05/2020) 951 ಕೆಎಸ್‍ಆರ್‍ಟಿ.ಸಿ ಬಸ್‍ಗಳನ್ನು ಒದಗಿಸಲಾಗಿದ್ದು ಅಂದಾಜು 30 ಸಾವಿರ ಜನರು ತಮ್ಮ ಊರುಗಳಿಗೆ ಪ್ರಯಾಣ ಮಾಡಿದ್ದಾರೆ.
ಇವತ್ತು ಈಗಾಗಲೇ 50 ಬಸ್‍ಗಳಲ್ಲಿ ಸುಮಾರು 1,500 ಪ್ರಯಾಣಿಕರು ತಮ್ಮ ಊರಿಗೆ ತೆರಳಿದ್ದಾರೆ. ಬೆಂಗಳೂರಿನಲ್ಲಿ 550 ಬಸ್‍ಗಳು ಮತ್ತು ರಾಜ್ಯದ ವಿವಿಧ ನಗರಗಳಲ್ಲಿ 400 ಬಸ್‍ಗಳನ್ನು ಈ ಸೌಲಭ್ಯ ಕ್ಕೋಸ್ಕರ ಕಾಯ್ದಿರಿಸಲಾಗಿದೆ.ಶನಿವಾರದಂದು ಕೂಡ 550 ಬಸ್ ಗಳಲ್ಲಿ ಅಂದಾಜು 16,500 ಪ್ರಯಾಣಿ ಕರು ತಮ್ಮ ಊರುಗಳಿಗೆ ತೆರಳಿದ್ದಾರೆ.
ರವಿವಾರದಂದು(03/05/2020) ಎರಡು ರೈಲುಗಳು ಬಿಹಾರದ ಪಾಟ್ನಾ ಒಂದು ಜಾರ್ಖಂಡ್‍ನ ರಾಂಚಿಗೆ ತೆರಳಿವೆ. ಇದೇ ಸಮಯ ಒಡಿಸ್ಸಾದ ಭುವನೇಶ್ವರಕ್ಕೆ ಒಂದು ರೈಲು, ಒಟ್ಟು ನಾಲ್ಕು ರೈಲುಗಳು 4,800 ಪ್ರಯಾಣಿಕರನ್ನು ಆ ರಾಜ್ಯಗಳಿಗೆ ಕರೆದೊಯ್ದಿದೆ. ಇಂದು ಎರಡು ರೈಲುಗಳು ರಾಜಸ್ಥಾನದ ಜೈಪುರ್ ಮತ್ತು ಬಿಹಾರದ ಪಾಟ್ನಾಕ್ಕೆ ಹೊರಡಲಿವೆ. ಪ್ರಯಾಣಕ್ಕಿಂತ ಮೊದಲು ಎಲ್ಲಾ ಜನರಿಗೂ ಉಚಿತ ಊಟ ಮತ್ತು ನೀರಿನ ವ್ಯವಸ್ಥೆ ಮಾಡ ಲಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರತ್ಯೇಕವಾಗಿ ಮಾತನಾಡಿದ ಸಾರಿಗೆ ಇಲಾಖೆ ಹೊಣೆ ಹೊತ್ತ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಸಾರಿಗೆ ನೌಕರರ ಸಂಬಳ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ ಎಂದು ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಂಬಳದಲ್ಲಿ ಯಾವುದೇ ಕಡಿತ ಮಾಡಿಲ್ಲ. ನಮ್ಮ ಸಾರಿಗೆ ನೌಕರರಿಗೂ ಸಂಬಳ ಕಡಿತ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ. ಇನ್ನು 2 ದಿನದಲ್ಲಿ ಸಂಪೂರ್ಣವಾದ ವೇತನ ನೀಡುವ ಕುರಿತು ಚಿಂತನೆ ನಡೆಸು ತ್ತಿದ್ದೇವೆ ಎಂದು ತಿಳಿಸಿದರು.
ಹೊರ ರಾಜ್ಯದಲ್ಲಿರುವ ಕನ್ನಡಿಗರ ರಾಜ್ಯಕ್ಕೆ ಕರೆತರಲು ಡಿಕೆಶಿ ಮನವಿ
ಮುಖ್ಯ ಕಾರ್ಯದರ್ಶಿಗಳ ಭೇಟಿಯಾಗಿ ಮನವರಿಕೆ
ಬೆಂಗಳೂರು, ಮೇ 4(ಕೆಎಂಶಿ)- ಹೊರ ರಾಜ್ಯದಲ್ಲಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆತರುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಅಂತರ್ ಜಿಲ್ಲೆಗಳಲ್ಲಿ ಸಿಲುಕಿರುವ ಕಾರ್ಮಿಕರನ್ನು ಅವರ ಸ್ವಂತ ಊರಿಗೆ ಹೋಗಲು ವ್ಯವಸ್ಥೆ ಮಾಡಬೇಕು ಎಂದು ಮನವಿ ಮಾಡಿರುವುದಾಗಿ ತಿಳಿಸಿದರು. ಹೊರ ರಾಜ್ಯದಲ್ಲಿರುವ ಕನ್ನಡಿಗರು ಹಾಗೂ ಕಾರ್ಮಿಕರನ್ನು ರೈಲಿನಲ್ಲಿ ಕರೆತರುವಂತೆ ಮನವಿ ಮಾಡಿದ್ದೇವೆ.
ಕಾರ್ಮಿಕರ ಊರುಗಳಿಗೆ ತೆರಳಲು ಉಚಿತ ಬಸ್ ವ್ಯವಸ್ಥೆ ಮಾಡಿದ ಸಿಎಂ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಸಿಎಂ ಸಮಯೋಚಿತ ನಿರ್ಧಾರವನ್ನು ಅಭಿನಂದಿ ಸುತ್ತೇವೆ. ನಮ್ಮ ಪಕ್ಷದ ಮನವಿಯನ್ನು ಒಪ್ಪಿ ಉಚಿತ ಬಸ್ ವ್ಯವಸ್ಥೆ ಮಾಡಿದ ಸಿಎಂ ಬಗ್ಗೆ ನಮಗೆ ಅಪಾರ ಗೌರವವಿದೆ ಎಂದರು. ವಿರೋಧ ಪಕ್ಷವಾಗಿ ನಮ್ಮ ಕೆಲಸ ಮಾಡುತ್ತಿದ್ದೇವೆ. ಪ್ರತಿಭಟನೆ ಮಾಡುವಷ್ಟು ನಮಗೆ ಸ್ವಾತಂತ್ರ್ಯ ಇಲ್ಲವೆ. ವಿರೋಧ ಪಕ್ಷದವರ ಬಾಯಿ ಮುಚ್ಚಿಸುವ ಕೆಲಸ ಮಾಡಲು ಸಚಿವರಿಗೆ ನಾವು ಬಿಡುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಅವರ ಫೇಸ್ ಬುಕ್ ಕಾಮೆಂಟ್‍ಗೆ ಡಿಕೆಶಿ ತಿರುಗೇಟು ನೀಡಿದರು. ನಿನ್ನೆ ಕಾಂಗ್ರೆಸ್ ಮಹಿಳಾ ಶಾಸಕಿಯರ ಪ್ರತಿಭಟನೆ ಸಮರ್ಥಿಸಿಕೊಂಡ ಅವರು, ಸುರೇಶ್ ಕುಮಾರ್ ಅಣ್ಣ ನೀವು ನಿಮ್ಮ ಮುಖ್ಯಮಂತ್ರಿಯವರನ್ನು ಬಾಯಿ ಮುಚ್ಚಿಸಬಹುದು ಆದರೆ, ಮಕ್ಕಳಿಗೆ ಗರ್ಭಿಣಿಯರಿಗೆ ಕೊಡುವ ಆಹಾರ ಮಾರಾಟ ಮಾಡದರೆ, ಸುಮ್ನೆ ಇರೋಕೆ ಆಗತ್ತಾ ಎಂದು ಪ್ರಶ್ನಿಸಿದರು. ಉಮಾಶ್ರೀ, ಜಯಮಾಲಾ, ಮೋಟಮ್ಮ ಮೂವರು ಮಂತ್ರಿಗಳಾಗಿ ಕೆಲಸ ಮಾಡಿದವರು. ಅವರು ಮಾತಡದೇ ಇರೋಕೆ ಆಗತ್ತಾ ಪ್ರಶ್ನಿಸಿದರಲ್ಲದೆ, ಮುಖ್ಯಮಂತ್ರಿ ಮತ್ತು ನೀವು ಸುಮ್ಮನೆ ಇದ್ದರೆ ನೀವು ಜವಬ್ದಾರರಾಗುತ್ತೀರಿ ಎಂದರು.